09.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
09.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ ಹಾಗೂ ಉಳಿದ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಆದರೆ ರಾಜ್ಯದ ಕರಾವಳಿಯ ಸಮುದ್ರದಲ್ಲಿ ಮುಂಗಾರಿನ ನಿರ್ದಿಷ್ಟ ದಿಕ್ಕಿಗೆ ಚಲನೆ ಇಲ್ಲದ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಹಾವೇರಿ, ಗದಗ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರ್ಗಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ಬೆಳಗಾವಿ, ಬಾಗಲಕೋಟೆ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 11ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 13ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಮಧ್ಯಮ ಸ್ತರದ ಗಾಳಿಯ ತಿರುಗುವಿಕೆಯ ಕಾರಣದಿಂದ ಕರಾವಳಿ ಜಿಲ್ಲೆಗಳಲ್ಲಿ ನಿರೀಕ್ಷೆತ ಮಟ್ಟದ ಮಳೆಯಾಗುತ್ತಿಲ್ಲ. ಇದರ ಪರಿಣಾಮದಿಂದ ಮುಂಗಾರು ಮಾರುತಗಳು ಮುಂದುವರಿಲು ತೊಡಕಾಗಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸ್ಥಳೀಯ ಮೋಡಗಳಿಂದ ಮಳೆಯಾಗುತ್ತಿದೆ.





Comments
Leave a Comment