ಖಾತೆಗಳಿಗೆ ಕ್ಯಾತೆ ಬಿಟ್ಟು ಕೆಲಸ ಮಾಡಲಿ.. ರಾಜ್ಯಸಭೆ, ವಿಧಾನ ಪರಿಷತ್‍ಗೆ ಸಮರ್ಥ ಅಭ್ಯರ್ಥಿಗಳ ಆಯ್ಕೆ: ವಿಜಯೇಂದ್ರ
ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನೇ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ. ಈ ಆಯ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸಂತಸ ತಂದಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ಪೆÇ್ರ.ಎಂ. ನಾಗರಾಜ್ ಅವರನ್ನು ಹಾಗೂ ವಿಧಾನ ಪರಿಷತ್‍ಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಈ ಎಲ್ಲಾ ಮುಖಂಡರು ಪಕ್ಷದ ಸಂಘಟನೆಗೆ ವಿವಿಧ ರೀತಿಯಲ್ಲಿ ತೊಡಗಿಸಿಕೊಂಡಿದ್ದವರು ಎಂದು ಹೇಳಿದರು.
ರಾಜ್ಯಸಭೆ ಅಭ್ಯರ್ಥಿ ಎಂ.ನಾಗರಾಜ್ ಅವರು, ಅತ್ಯಂತ ಹಿಂದುಳಿದ ಕುರುಬ ಸಮಾಜಕ್ಕೆ ಸೇರಿದವರು. ಆರ್‍ಎಸ್‍ಎಸ್ ಮತ್ತು ಎಬಿವಿಪಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಪಕ್ಷದ ಸಂಘಟನೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದವರು. ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದರು. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಿದ್ದಾಗ ಕೆಪಿಎಸ್‍ಸಿಯಲ್ಲೂ ಉತ್ತಮ ಸೇವೆ ಸಲ್ಲಿಸಿದ್ದರು ಎಂದು ಹೇಳಿದರು.
ವಿಧಾನ ಪರಿಷತ್ ಅಭ್ಯರ್ಥಿ ಲಿಂಗರಾಜ ಪಾಟೀಲ್ ಅವರು 37-38 ವರ್ಷಗಳಿಂದ ಸತತವಾಗಿ ಸಂಘಟನೆಯ ವಿವಿಧ ಜವಾಬ್ದಾರಿಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ನಿರ್ವಹಿಸಿದ್ದಾರೆ. ಸಂಘಟನೆಗೆ ಹಗಲು ರಾತ್ರಿ ದುಡಿದಿದ್ದಾರೆ. ಎಬಿವಿಪಿಯಲ್ಲೂ ಸೇವೆ ಸಲ್ಲಿಸಿದ್ದಾರೆ ಎಂದರು.
ರಘು ಕೌಟಿಲ್ಯ ಅವರು ಅತ್ಯಂತ ಹಿಂದುಳಿದ ಮಡಿವಾಳ ಸಮಾಜಕ್ಕೆ ಸೇರಿದವರು. ಶಿಕ್ಷಣ ಮತ್ತು ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ಈ ಎಲ್ಲರ ಆಯ್ಕೆ ಸಂತೋಷ ತಂದಿದೆ ಎಂದು ವಿವರಿಸಿದರು.
ಸುಮಲತಾ ಅಂಬರೀμïಗೆ ಮುಂದೆ ಸೂಕ್ತ ಸ್ಥಾನಮಾನ...
ರಾಜ್ಯಸಭೆಗೆ ಸುಮಲತಾ ಅಂಬರೀμï ಅವರ ಹೆಸರು ಪ್ರಸ್ತಾಪವಾಗಿತ್ತು. ಈ ಹಿಂದೆ ಮಂಡ್ಯದಿಂದ ಅವರು ಸ್ವತಂತ್ರ ಸ್ಪರ್ಧೆ ಮಾಡಿದ್ದಾಗ ಬಿಜೆಪಿ ಬೆಂಬಲ ನೀಡಿತ್ತು. ಒಳ್ಳೆಯ ಅಂತರದಿಂದ ಗೆಲುವು ಸಾಧಿಸಿದ್ದರು. ಕಳೆದ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರಿಗೆ ಕ್ಷೇತ್ರ ಬಿಟ್ಟು ಕೊಟ್ಟಿದ್ದಾರೆ. ಸುಮಲತಾ ಅವರಿಗೆ ಮುಂದೆ ಸೂಕ್ತ ಸ್ಥಾನಮಾನ ಕೊಡಲಾಗುವುದು ಎಂದರು.
ರಾಜ್ಯಸಭೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹೆಸರು ಪ್ರಸ್ತಾಪ ಕುರಿತ ಪ್ರಶ್ನೆಗೆ ಉತ್ತರಿಸಿದ ವಿಜಯಯೇಂದ್ರ ಅವರು, ದೇವೇಗೌಡರು ಮೋದಿ ಅವರ ಕೈ ಬಲಪಡಿಸಿದ್ದಾರೆ. ಎನ್‍ಡಿಎ ಗೆ ಬೆಂಬಲ ನೀಡಿದ್ದಾರೆ. ಅವರ ಬಗ್ಗೆ ಪಕ್ಷಕ್ಕೆ ಅಪಾರ ಗೌರವ ಇದೆ. ರಾಜ್ಯಸಭೆಗೆ ಅವರನ್ನು ಕಳುಹಿಸುವ ಬಗ್ಗೆ ರಾಜ್ಯಮಟ್ಟದಲ್ಲಿ ಯಾವುದೇ ರೀತಿಯ ಚರ್ಚೆ ನಡೆದಿರಲಿಲ್ಲ. ಇತ್ತೀಚಿನ ರಾಜಕೀಯ ಸ್ಥಿತಿಗತಿ ನೀಡಿ ಸೂಕ್ತ ಅಭ್ಯರ್ಥಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ ದುಡಿದ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಿದ್ದಾರೆ ಎಂದರು.
ಖಾತೆ ಹಂಚಿಕೆಯೇ ಸವಾಲು..
ಮುಖ್ಯಮಂತ್ರಿ ಶಿವಕುಮಾರ್ ಅವರಿಗೆ ಖಾತೆ ಹಂಚಿಕೆಯೇ ಸವಾಲಾಗಿದೆ. ಮೂರು ವರ್ಷ ಅಭಿವೃದ್ಧಿ ಏನೂ ಮಾಡಿಲ್ಲ. ಇನ್ನಾದರೂ ಖಾತೆಗಳಿಗೆ ಕ್ಯಾತೆ ಬಿಟ್ಟು ಕೆಲಸ ಮಾಡಲಿ ಎಂದು ಹೇಳಿದರು. ಮುಖ್ಯಮಂತ್ರಿಗಳು ಬದಲಾಗಿದ್ದಾರೆ ಅμÉ್ಟೀ. ಈ ಸರ್ಕಾರದಿಂದ ಅಭಿವೃದ್ಧಿ ನಿರೀಕ್ಷೆ ಮಾಡಲಾಗದು. ಸಾಲದ ಹೊರೆ ಹತ್ತು ಲಕ್ಷ ಕೋಟಿಗೆ ಬಂದಿದೆ. ಸಂಪುಟ ಪೂರ್ಣ ಪ್ರಮಾಣದಲ್ಲಿ ರಚನೆಯಾಗಿಲ್ಲ. ಜಿಲ್ಲಾ ಉಸ್ತುವಾರಿ ಹಂಚಿಕೆ ಆಗಿಲ್ಲ ಎಂದರು.





Comments
Leave a Comment