PRABHAVAA.COM

ಮುಖ್ಯಮಂತ್ರಿಳ ನಿವಾಸದ ಬಳಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಮೂಲಸೌಕರ್ಯ ಕಲ್ಪಿಸಲು ಒತ್ತಾಯ*

:

Font size:

ಮುಖ್ಯಮಂತ್ರಿಳ ನಿವಾಸದ ಬಳಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಮೂಲಸೌಕರ್ಯ ಕಲ್ಪಿಸಲು ಒತ್ತಾಯ*

*ಮುಖ್ಯಮಂತ್ರಿಳ ನಿವಾಸದ ಬಳಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಮೂಲಸೌಕರ್ಯ ಕಲ್ಪಿಸಲು ಒತ್ತಾಯ*
ಬೆಂಗಳೂರು, ಜೂ.10: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಿವಾಸಗಳಿರುವ ಪ್ರತಿಷ್ಠಿತ ಸದಾಶಿವನಗರ ಪ್ರದೇಶದಲ್ಲಿ ಹಗಲು-ರಾತ್ರಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಗಂಡಸಿ ಸದಾನಂದ ಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸದ ಸುತ್ತಮುತ್ತ ದಿನನಿತ್ಯ 150ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು, *ಮಹಿಳಾ ಸಿಬ್ಬಂದಿ*, ಸಂಚಾರಿ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಸದಾಶಿವನಗರ ಪ್ರದೇಶದಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್, ಮಧು ಬಂಗಾರಪ್ಪ, ಅಜಯ್ ಸಿಂಗ್, ಡಾಕ್ಟರ್ ಕೆ ಸುಧಾಕರ್, ರಮೇಶ್ ಜಾರಕಿಹೊಳಿ, ಎಸ್ಎಸ್ ಮಲ್ಲಿಕಾರ್ಜುನ್, ಹಿರಿಯ ಕಲಾವಿದರು ವರನಟ ಡಾ. ರಾಜಕುಮಾರ್, ಉಪೇಂದ್ರ ಸೇರಿದಂತೆ ಹಲವು ಗಣ್ಯರ ನಿವಾಸಗಳ ಭದ್ರತೆಗಾಗಿ ನೂರಾರು ಪೊಲೀಸ್ ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ವಿವಿಐಪಿಗಳ ನಿವಾಸಗಳಿರುವ ಈ ಪ್ರದೇಶದಲ್ಲಿ ಸುಮಾರು 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ವಿವಿಧ ಪಾಳಿಗಳಲ್ಲಿ ಪಹರೆ ಕಾಯುತ್ತಾರೆ. ಮಳೆ, ಬಿಸಿಲು ಲೆಕ್ಕಿಸದೇ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆಯೂ ಸಾರ್ವಜನಿಕ ಹಾಗೂ ಗಣ್ಯರ ಭದ್ರತೆಗೆ ಪೊಲೀಸರು ಶ್ರಮಿಸುತ್ತಿದ್ದಾರೆ. ಆದರೆ ಅನೇಕ ಸ್ಥಳಗಳಲ್ಲಿ ಸಿಬ್ಬಂದಿಗೆ ವಿಶ್ರಾಂತಿ ಪಡೆಯಲು, ಕುಡಿಯುವ ನೀರು, ಶೌಚಾಲಯ ಹಾಗೂ ಇತರೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಎಂದು ಅವರು ಗಮನ ಸೆಳೆದಿದ್ದಾರೆ.
ಆದ್ದರಿಂದ ಸದಾಶಿವನಗರದ ಪ್ರಮುಖ ಭದ್ರತಾ ಕೇಂದ್ರಗಳ ಬಳಿ ಕಂಟೇನರ್ ಮಾದರಿಯ ಸಣ್ಣ ಕಚೇರಿ, ವಿಶ್ರಾಂತಿ ಕೊಠಡಿ ಹಾಗೂ ಶೌಚಾಲಯ ವ್ಯವಸ್ಥೆಗಳನ್ನು ನಿರ್ಮಿಸಿ ಪೊಲೀಸ್ ಸಿಬ್ಬಂದಿಯ ಅನುಕೂಲಕ್ಕೆ ಕ್ರಮ ಕೈಗೊಳ್ಳಬೇಕು. ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಕಲ್ಯಾಣಕ್ಕೆ ಸರ್ಕಾರ ವಿಶೇಷ ಗಮನಹರಿಸಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಎಂದು ಗಂಡಸಿ ಸದಾನಂದ ಸ್ವಾಮಿ ಆಗ್ರಹಿಸಿದ್ದಾರೆ.

Comments

Leave a Comment

Prev Post ನೂರು ದಿನಗಳಲ್ಲಿ ಕೆಐಎಡಿಬಿ ಸಂಪೂರ್ಣ ಡಿಜಿಟಲೀಕರಣ: ಎಂ ಬಿ ಪಾಟೀಲ ಕಟ್ಟುನಿಟ್ಟಿನ ಗಡುವು
Next Post ಒಂಟಿ ಪೋಷಕರಿಗೆ ಶಿಶುಪಾಲನಾ ರಜೆ – ಮಕ್ಕಳ ಹಕ್ಕು, ತಂದೆಯ ಹೊಣೆಗಾರಿಕೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News