PRABHAVAA.COM

ಗ್ರಾಮಗಳತ್ತ ಲಕ್ಷ್ಮೀ ಹೆಬ್ಬಾಳಕರ್ ಹೆಜ್ಜೆ; ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ

Belagavi:

Font size:

ಗ್ರಾಮಗಳತ್ತ ಲಕ್ಷ್ಮೀ ಹೆಬ್ಬಾಳಕರ್ ಹೆಜ್ಜೆ; ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ

ಗ್ರಾಮಗಳತ್ತ ಲಕ್ಷ್ಮೀ ಹೆಬ್ಬಾಳಕರ್ ಹೆಜ್ಜೆ; ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ

ಬೆಳಗಾವಿ: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸಿದ್ದಾರೆ.
ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವುದರ ಜೊತೆಗೆ, ತಾವೇ ಗ್ರಾಮಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿದ್ದು, ಜನರ ಅಗತ್ಯಗಳು ಹಾಗೂ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ನೇರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಗುರುವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಓಂಕಾರ್ ನಗರಕ್ಕೆ ಭೇಟಿ ನೀಡಿದ ಅವರು, ಸ್ಥಳೀಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ ವಿವಿಧ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೆ, ಈವರೆಗೆ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಮುಂದಿನ ದಿನಗಳಲ್ಲಿ ಆರಂಭವಾಗಲಿರುವ ಹೊಸ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಬಳಿಕ ಹಿಂಡಲಗಾ ಗ್ರಾಮದ ಸಂಕಲ್ಪ ಲೇಔಟ್‌ಗೆ ಭೇಟಿ ನೀಡಿದ ಅವರು, ಸ್ಥಳೀಯರು ಎದುರಿಸುತ್ತಿರುವ ರಸ್ತೆ, ಚರಂಡಿ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ಖುದ್ದಾಗಿ ಮಾಹಿತಿ ಪಡೆದು, ಅವುಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಲೇಔಟ್‌ನಲ್ಲಿ ಈಗಾಗಲೇ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಅವಲೋಕಿಸಲಾಯಿತು. ಜೊತೆಗೆ, ಮುಂಬರುವ ದಿನಗಳಲ್ಲಿ ಈ ಭಾಗದಲ್ಲಿ ಅನುಷ್ಠಾನಗೊಳ್ಳಲಿರುವ ಹೊಸ ಅಭಿವೃದ್ಧಿ ಯೋಜನೆಗಳ ಕುರಿತು ಸಾರ್ವಜನಿಕರೊಂದಿಗೆ ಮಾಹಿತಿ ಹಂಚಿಕೊಳ್ಳಲಾಯಿತು.
ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಪರಿಹಾರಕ್ಕೆ ಮುಂದಾಗುತ್ತಿರುವ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರ್ಯವೈಖರಿ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರ ನಿರಂತರ ಜನಸಂಪರ್ಕ ಮತ್ತು ಜನಸ್ಪಂದನೆಗೆ ಕ್ಷೇತ್ರದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, "ಇಂತಹ ಜನಪ್ರತಿನಿಧಿಯನ್ನು ಪಡೆದಿರುವುದು ನಮ್ಮ ಭಾಗ್ಯ" ಎಂದು ಅನೇಕ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Comments

Leave a Comment

Prev Post ಕಾಂಗ್ರೆಸ್ ಸರಕಾರವು ವೈಫಲ್ಯ ಮುಚ್ಚಿ ಹಾಕುವ ಸಲುವಾಗಿ ಕೇಂದ್ರ ಸರಕಾರವನ್ನು ದೂರುತ್ತಿದೆ- ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News