PRABHAVAA.COM

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ-ನಟ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ, ಭಾರೀ ಭದ್ರತೆ

Dakshina Kannada:

Font size:

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ-ನಟ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ, ಭಾರೀ ಭದ್ರತೆ

From : Jayaram Udupi

ಮಂಗಳೂರು:

ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಗುರುವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದರು.

ಕೊಲ್ಲೂರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲು ವಿಜಯ್ ಆಗಮಿಸಿದ್ದು, ಅವರ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು.

ತಮಿಳುನಾಡಿನ ರಾಜಕೀಯ ಹಾಗೂ ಸಿನಿರಂಗದ ಪ್ರಮುಖ ವ್ಯಕ್ತಿಗಳಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು ಬಹುಕಾಲದಿಂದಲೂ ಆಕರ್ಷಣೀಯ ಧಾರ್ಮಿಕ ಕೇಂದ್ರವಾಗಿದ್ದು, ಅನೇಕ ಗಣ್ಯರು ಇಲ್ಲಿಗೆ ಭೇಟಿ ನೀಡಿರುವುದು ವಿಶೇಷ.

ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಜಿ. ರಾಮಚಂದ್ರನ್ (ಎಂಜಿಆರ್), ಮಾಜಿ ಮುಖ್ಯಮಂತ್ರಿ ಜಾನಕಿ ರಾಮಚಂದ್ರನ್ ಹಾಗೂ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಕೂಡ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.

ವಿಜಯ್ ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವಾಗಲೂ ವಿಜಯ್ ಅವರಿಗೆ ಭಾರೀ ಭದ್ರತೆ ಒದಗಿಸಲಾಗಿತ್ತು. ಅದರ ನಡುವೆಯೂ ವಿಜಯ್ ಅವರು ವಿಮಾನನಿಲ್ದಾಣದಲ್ಲಿ ಸೇರಿದ್ದ ಅಭಿಮಾನಿಗಳಿಗೆ ಕೈಮುಗಿದು ಅಭಿನಂದನೆಗಳನ್ನು‌ ಸ್ವೀಕರಿಸುತ್ತ, ನಮಸ್ಕರಿಸುತ್ತ, ನಗುಮೊಗದಿಂದ ಕೊಲ್ಲೂರಿನತ್ತ ಪ್ರಯಾಣ ಬೆಳೆಸಿದರು.

Comments

Leave a Comment

Prev Post ಇಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಸೌಜನ್ಯದ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು
Next Post ಮಂಗಳೂರು: ಪುತ್ತೂರಿನ ಪೂಜಾ ಆಚಾರ್ಯ–ಕೃಷ್ಣ ಜೆ. ರಾವ್ ವಿವಾದಕ್ಕೆ ಜೂನ್ 19ರಂದು ಮಧ್ಯಸ್ಥಿಕೆ ಸಭೆ, ಸಂಧಾನದ ನಿರೀಕ್ಷೆ

‎ನಾಡಿನ ಜನರ ಹೃದಯದಲ್ಲಿ ಯಡಿಯೂರಪ್ಪರಿಗೆ ಶಾಶ್ವತ ಸ್ಥಾನ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಎಲೆಕೊಡಿಗೇಹಳ್ಳಿ ಶ್ರೀನಂದಿಬಸವೇಶ್ವರ ನೂತನ ದೇವಾಲಯದ ಮಂಡಲ ಪೂಜೆ

ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಕಾಯ್ದೆ ಜಾರಿಗೆ

ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಕಾಯ್ದೆ ಜಾರಿಗೆ

ಕೇರಳದಲ್ಲೊಂದು ಗೋಶಾಲೆ ಸಹಿತ ಮನೆ.

ಕೇರಳದಲ್ಲೊಂದು ಗೋಶಾಲೆ ಸಹಿತ ಮನೆ.

ಕಾಸರಗೋಡು: ದೇವರ ನಾಡಿನ ಸಂಪ್ರದಾಯದ ಭವ್ಯತೆ

ಕಾಸರಗೋಡು: ದೇವರ ನಾಡಿನ ಸಂಪ್ರದಾಯದ ಭವ್ಯತೆ

Read all News