PRABHAVAA.COM

ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ: ವಿಜಯೇಂದ್ರ

Bengaluru Urban:

Font size:

ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ: ವಿಜಯೇಂದ್ರ

ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ: ವಿಜಯೇಂದ್ರ

ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ ನಡೆದಿತ್ತು. ಹಿಂದೂಗಳ ಧಾರ್ಮಿಕ ಶ್ರದ್ಧೆಗೆ ಕೊಡಲಿ ಪೆಟ್ಟು ಕೊಡುವ ಷಡ್ಯಂತ್ರ ನಡೆದಿತ್ತು ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಯಾವುದನ್ನೂ ಪರಾಮರ್ಶೆ ಮಾಡದೇ ಯಾರೋ ಬೀದಿಯಲ್ಲಿ ಹೋಗುವವರು ಹೇಳಿದರೆಂದು ಎಸ್‍ಐಟಿ ತನಿಖೆಗೆ ಆದೇಶಿಸಿದ್ದು ಸಮರ್ಪಕ ನಿರ್ಧಾರ ಆಗಿರಲಿಲ್ಲ ಎಂದು ಆಕ್ಷೇಪಿಸಿದರು. ಧರ್ಮಸ್ಥಳದ ಪ್ರಕರಣದಲ್ಲಿ ಸಾಕಷ್ಟು ವಿಷಯಗಳು ಈಗ ಬೆಳಕಿಗೆ ಬಂದಿವೆ. ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಏಕಾಏಕಿ ಎಸ್‍ಐಟಿ ತನಿಖೆಗೆ ಆದೇಶಿಸಿದಾಗ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು ಎಂದು ನುಡಿದರು.
ಅಂದಿನ ಮುಖ್ಯಮಂತ್ರಿಗಳು ಒಂದು ದಿನ ಮುಂಚಿತವಾಗಿ ಯಾವುದೇ ತನಿಖೆಯ ಅವಶ್ಯಕತೆ ಇಲ್ಲ ಎಂದಿದ್ದರು. ಪಟ್ಟಭದ್ರ ಹಿತಾಸಕ್ತಿಗಳು ಅವರನ್ನು ಸ್ವಗೃಹದಲ್ಲಿ ಭೇಟಿ ಮಾಡಿದ ನಂತರ ಮುಖ್ಯಮಂತ್ರಿಗಳೇ ಎಸ್‍ಐಟಿ ತನಿಖೆಗೆ ಆದೇಶಿಸಿದ್ದರು ಎಂದು ಗಮನ ಸೆಳೆದರು. ಬಿಜೆಪಿ ಹಿಂದೆ ಧರ್ಮಸ್ಥಳ ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು ಎಂದು ವಿವರಿಸಿದರು.
ಇದರಲ್ಲಿ ನೂರಾರು ಕೋಟಿ ಒಳಗೊಂಡದ್ದು ಈಗ ಗೊತ್ತಾಗುತ್ತಿದೆ. ನೂರಾರು ಕೋಟಿ ತೊಡಗಿಸಿಕೊಂಡ ಕಾರಣ ವಿದೇಶಿ ಶಕ್ತಿಗಳ ಕೈವಾಡದ ತನಿಖೆಯೂ ಆಗಬೇಕಿದೆ ಎಂದು ಒತ್ತಾಯಿಸಿದರು. ಕಾಂಗ್ರೆಸ್ ಸರಕಾರವು ಇಂಥ ಷಡ್ಯಂತ್ರಗಳಿಗೆ ಶಕ್ತಿ ತುಂಬುವ ಕೆಲಸ ಮಾಡಿರುವುದು ನಮಗೆ ನೋವು ತಂದಿದೆ ಎಂದು ತಿಳಿಸಿದರು. ಯಾರ್ಯಾರು ಇದರ ಹಿಂದಿದ್ದರು? ಯಾರ್ಯಾರು ಬಂಡವಾಳ ಹಾಕಿದ್ದರು? ಅಂದಿನ ಸಿಎಂ ಯಾಕೆ ಕಣ್ಮುಚ್ಚಿ ಎಸ್‍ಐಟಿಗೆ ಕೊಟ್ಟರು- ಇವೆಲ್ಲವೂ ಸತ್ಯಾಸತ್ಯತೆ ಹೊರಕ್ಕೆ ಬರಬೇಕು ಎಂಬುದು ನಾಡಿನ ಜನರ ಮತ್ತು ಹಿಂದೂಗಳ ಅಪೇಕ್ಷೆ ಎಂದು ತಿಳಿಸಿದರು.
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್‍ಐಆರ್ ಬಗ್ಗೆ ಚರ್ಚೆಗಳಾಗಿವೆ. ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದ ಬಳಿಕ ಎಸ್‍ಐಆರ್ ನಡೆಯುತ್ತಿದ್ದು, ರಾಜ್ಯ ಸರಕಾರ ಇದಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದೆ ಎಂಬ ಅಭಿಪ್ರಾಯ ಎಲ್ಲ ಮುಖಂಡರಿಂದ ವ್ಯಕ್ತವಾಗಿದೆ ಎಂದು ಪ್ರಶ್ನೆಗೆ ಉತ್ತರಿಸಿದರು. ರಾಜ್ಯ ಸರಕಾರವು ಬಿಎಲ್‍ಒಗಳಿಗೆ ಸಮರ್ಪಕ ಆದೇಶ, ಮಾರ್ಗದರ್ಶನ ಮಾಡುತ್ತಿಲ್ಲ. ಡೂಪ್ಲಿಕೇಟ್ ಹೆಸರು, ಸತ್ತವರ ಹೆಸರು ಕೈಬಿಡುವ ಕೆಲಸ ನಡೆಯಬೇಕಿದೆ. ಬಿಎಲ್‍ಒಗಳನ್ನು ದುರುಪಯೋಗ ಪಡಿಸಿಕೊಂಡು, ಸ್ವಚ್ಛಗೊಳಿಸುವ ಕಾರ್ಯ ಕರ್ನಾಟಕದಲ್ಲಿ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ಆಕ್ಷೇಪ ಇದೆ ಎಂದರು. ಮುಂದಿನ ದಿನಗಳಲ್ಲಿ ನಮ್ಮ ನಡೆ ಯಾವ ರೀತಿ ಇರಬೇಕೆಂಬ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ವಿವರ ನೀಡಿದರು.

Comments

Leave a Comment

Prev Post ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ ; ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌
Next Post ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಜೂನ್ 16ರಂದು 28ನೇ ವಘಟಿಕೋತ್ಸವ 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News