PRABHAVAA.COM

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಜೂನ್ 16ರಂದು 28ನೇ ವಘಟಿಕೋತ್ಸವ 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

Bengaluru Urban:

Font size:

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಜೂನ್ 16ರಂದು 28ನೇ ವಘಟಿಕೋತ್ಸವ 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ

ಜೂನ್ 16ರಂದು 28ನೇ ವಘಟಿಕೋತ್ಸವ
72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

ಬೆಂಗಳೂರು,ಜೂನ್ 12, 2026: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರಾಆವಿವಿ) ತನ್ನ 28ನೇ ಘಟಿಕೋತ್ಸವವನ್ನು ಜೂನ್ 16, 2026 ರಂದು ಬೆಳಿಗ್ಗೆ 10.00 ಗಂಟೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿ.ಕೆ.ವಿ.ಕೆ) ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮಾವೇಶ ಭವನದಲ್ಲಿ ಆಯೋಜಿಸಿದೆ.

ಈ ಘಟಿಕೋತ್ಸವದಲ್ಲಿ ಒಟ್ಟು 72,741 ಅಭ್ಯರ್ಥಿಗಳಿಗೆ ವಿವಿಧ ಪದವಿ ಪ್ರದಾನ ಮಾಡಲಾಗುವುದು. ಒಟ್ಟು 103 ವಿದ್ಯಾರ್ಥಿಗಳು 115 ಚಿನ್ನದ ಪದಕಗಳಿಗೆ ಭಾಜನರಾಗಿದ್ದು ಪದ್ಮಶ್ರೀ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ, ಬೆಂಗಳೂರಿನ ಸ್ಪಂಧನ ಐ ಅವರು 3 ಚಿನ್ನದ ಪದಕಗಳೊಂದಿಗೆ ಅತಿ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿಯಾಗಿದ್ದಾರೆ.

ವಿಶ್ವವಿದ್ಯಾಲಯದ ಒಟ್ಟಾರೆ ಫಲಿತಾಂಶ ಶೇಕಡಾ 89.22ರಷ್ಟಿದ್ದು, ಇದು ಆರೋಗ್ಯ ವಿಜ್ಞಾನ ಶಿಕ್ಷಣ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯದ ಶೈಕ್ಷಣಿಕ ಸಾಧನೆಯನ್ನು ಪ್ರತಿಬಿಂಬಿಸುತ್ತದೆ.

ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ಹಾಗೂ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಭಗವಾನ್ ಬಿ.ಸಿ. ಅವರು ಉಪಸ್ಥಿತರಿರುವರು.

ಈ ಸಂದರ್ಭದಲ್ಲಿ ಪ್ರೊ. (ಡಾ.) ನೈಲಾಡಿ ಶ್ರೀಧರ ಶೆಟ್ಟಿ, ಡಾ. ಹರ್ಷಿಣಿಗಿ ವೀರಭದ್ರಪ್ಪ ಹಾಗೂ ಡಾ. ಎ.ಸಿ. ಷಣ್ಮುಗಂ ಅವರಿಗೆ ಗೌರವ ಡಾಕ್ಟರೇಟ್ ‘ಡಾಕ್ಟರ್ ಆಫ್ ಸೈನ್ಸ್’ (Honoris Causa) ಪದವಿ ಪ್ರದಾನ ಮಾಡಲಾಗುವುದು.

ಮಾಹಿತಿಗೆ ಸಂಪರ್ಕಿಸಿ: ಸುಶೀಲಾ ಡೋಣೂರ, ಮಾದ್ಯಮ ಸಂಯೋಜಕರು, ರಾಗಾಆವಿವಿ-9986523469

Comments

Leave a Comment

Prev Post ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ: ವಿಜಯೇಂದ್ರ
Next Post ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ

ದೇಶ ಹಾಗೂ ರಾಜ್ಯದ ಬೆಳವಣಿಗೆಗೆ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಎಲ್ಲರೂ ಜ್ಞಾನ ಹಂಚಿಕೊಂಡು ಬಾಳಬೇಕು ಬೆಂಗಳೂರಿನ ಹೆಮ್ಮೆ ಜ್ಯೋತಿ ನಿವಾಸ್ ಕಾಲೇಜು

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

Read all News