PRABHAVAA.COM

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ

India:

Font size:

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ

ನವದೆಹಲಿ, ಜೂ.12:

ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ನಿರಾವರಿ ಯೋಜನೆಗಳಿಗೆ ಹೆಚ್ಚಿನ ಕಾಳಜಿ ವಹಿಸಿರುವ ಮುಖ್ಯಮಂತ್ರಿಗಳು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದ ಶಿವಕುಮಾರ್ ಅವರು ಶುಕ್ರವಾರ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ನೀರಾವರಿ ಯೋಜನೆಗಳ ಜಾರಿಗೆ ಸಹಕಾರ ಕೋರಿದರು.

ಮುಖ್ಯಮಂತ್ರಿಗಳ ಪ್ರಸ್ತಾವನೆಯ ಪ್ರಮುಖ ಅಂಶಗಳು ಹೀಗಿವೆ:

1. ಮೇಕೆದಾಟು ಯೋಜನೆ:

ಸುಪ್ರೀಂ ಕೋರ್ಟ್ 13.11.2025 ರಂದು ತಮಿಳುನಾಡು ರಾಜ್ಯದ ವಿವಿಧ ಅರ್ಜಿಗಳನ್ನು ವಜಾಗೊಳಿಸಿದೆ ಮತ್ತು ಮೇಕೆದಾಟು ಯೋಜನೆಯ ಅನುಮತಿಯ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕೇಂದ್ರ ಜಲ ಆಯೋಗ (CWC) ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದೆ. CWMA ಈಗಾಗಲೇ ಯೋಜನೆಯನ್ನು ಮೌಲ್ಯಮಾಪನ ಮಾಡಲು CWC ಗೆ ಸೂಚಿಸಿರುವುದರಿಂದ, ಈ ಯೋಜನೆಗೆ ಶೀಘ್ರ ಅನುಮತಿ ಸಿಗುವಂತೆ ನೋಡಿಕೊಳ್ಳಬೇಕು.

2. ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ (KWDT-II) ತೀರ್ಪಿನ ಗೆಜೆಟ್ ಅಧಿಸೂಚನೆ:

ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ-II (KWDT-II) ತೀರ್ಪು ನೀಡಿ ಒಂದು ದಶಕಕ್ಕೂ ಹೆಚ್ಚು ಕಾಲ ಕಳೆದಿದ್ದರೂ, ಕೇಂದ್ರ ಸರ್ಕಾರವು ಇನ್ನು ಸಹ ಈ ತೀರ್ಪನ್ನು ಗೆಜೆಟ್‌ನಲ್ಲಿ ಅಧಿಸೂಚಿಸಿಲ್ಲ. ಕರ್ನಾಟಕ ರಾಜ್ಯವು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-III ರ ಅನುಷ್ಠಾನದಲ್ಲಿ ಭಾರಿ ಮೊತ್ತವನ್ನು ಹೂಡಿಕೆ ಮಾಡಿದೆ ಮತ್ತು ನಮ್ಮ ಯೋಜನೆಯನ್ನು ಮುಂದುವರಿಸಲು ಹಾಗೂ ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಕೇಂದ್ರದ ಬೆಂಬಲದ ಅಗತ್ಯವಿದೆ.

3. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ನೆರವು:

ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು 2023-24 ರ ಕೇಂದ್ರ ಬಜೆಟ್‌ನಲ್ಲಿ 5,300 ಕೋಟಿ ರೂ.ಗಳ ನೆರವನ್ನು ಘೋಷಿಸಿತ್ತು. ಆದರೆ, 3 ವರ್ಷಗಳು ಕಳೆದರೂ ರಾಜ್ಯಕ್ಕೆ ಈ ಹಣಕಾಸಿನ ನೆರವು ಬಿಡುಗಡೆಯಾಗಿಲ್ಲ. ಈ ಯೋಜನೆಯ 21,167.93 ಕೋಟಿ ರೂ.ಗಳ ಪರಿಷ್ಕೃತ ವೆಚ್ಚದ ಅಂದಾಜಿನ ಪ್ರಸ್ತುತ ಪ್ರಸ್ತಾವನೆಯನ್ನು ಮೌಲ್ಯಮಾಪನ ಮಾಡಿದೆ. PMKSY-AIBP ಯೋಜನೆಯಡಿ ಈ ಯೋಜನೆಗೆ ಕೇಂದ್ರದ ನೆರವನ್ನು ಶೀಘ್ರ ಬಿಡುಗಡೆ ಮಾಡಬೇಕು.

4. ಮಹದಾಯಿ ಕಣಿವೆಯ ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗಳು:

ಮಹದಾಯಿ ಕಣಿವೆಯಡಿ ಬರುವ ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗಳನ್ನು ಹುಬ್ಬಳ್ಳಿ-ಧಾರವಾಡದ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಉದ್ದೇಶಿಸಲಾಗಿದೆ. ಇವುಗಳಿಗೆ ಡಿಸೆಂಬರ್ 2022 ರಲ್ಲಿ CWC/ಜಲಶಕ್ತಿ ಸಚಿವಾಲಯವು ಅನುಮತಿ ನೀಡಿದ್ದರೂ, ಈ ಯೋಜನೆಗೆ ಯಾವುದೇ ಕಾನೂನು ಅಡಚಣೆಗಳಿಲ್ಲದಿದ್ದರೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ (MoEF & CC) ಅರಣ್ಯ/ವನ್ಯಜೀವಿ ಅನುಮತಿ ಇನ್ನೂ ಸಿಕ್ಕಿಲ್ಲ. ಇದರಿಂದಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ತೀರ್ಪಿನ ಅನ್ವಯ ಹಂಚಿಕೆಯಾದ ನೀರನ್ನು ಬಳಸಿಕೊಳ್ಳಲು ನಮಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಆದಷ್ಟು ಬೇಗ ಈ ಯೋಜನೆಗಳಿಗೆ ಅನುಮತಿ ಕೊಡಿಸಬೇಕು.

5. ಏತ ನೀರಾವರಿ, ಕಾಲುವೆ ಕಾಮಗಾರಿಗಳಿಗೆ AIBP-PMKSY ಮತ್ತು FMBAP ಯೋಜನೆಗಳಡಿ ಕೇಂದ್ರದ ನೆರವು:

ಭಾರತ ಸರ್ಕಾರದ AIBP-PMKSY ಮತ್ತು FMBAP ಯೋಜನೆಗಳಡಿ ಕೇಂದ್ರದ ನೆರವು ಕೋರಿ ಕರ್ನಾಟಕ ರಾಜ್ಯವು ಫೆಬ್ರವರಿ 2025 ರಲ್ಲಿ ಈ ಕೆಳಗಿನ ಯೋಜನೆಗಳ PFR / DPR ಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ.

ಸೊಂತಿ ಏತ ನೀರಾವರಿ, ಇಂಡಿ ಶಾಖಾ ಕಾಲುವೆ, ಮಲಪ್ರಭಾ ಕಾಲುವೆ ಬಾಕಿ ಕಾಮಗಾರಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ಕಾಲುವೆ, ತುಂಗಭದ್ರಾ ಎಡದಂಡೆ ಕಾಲುವೆ ಬಾಕಿ ಕಾಮಗಾರಿ, ಬೆಣ್ಣಿಹಳ್ಳ ನದಿಯ ಪ್ರವಾಹ ನಿಯಂತ್ರಣ ಮತ್ತು ಪ್ರವಾಹ ನಿರ್ವಹಣೆ ಯೋಜನೆಗಳಿಗೆ ಕೇಂದ್ರ ಸರ್ಕಾರ ನೆರವು ನೀಡಬೇಕು.

6. ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲು ಹಂಚಿಕೆ

ಕೇಂದ್ರ ಸರ್ಕಾರದ ನದಿಗಳ ಜೋಡಣೆಯ ಪ್ರಸ್ತಾವನೆಗಳ ಅಡಿಯಲ್ಲಿ, ನದಿ ಜೋಡಣೆ (ILR) ಯೋಜನೆಗಳಿಂದ "ಸಮತೆ ಮತ್ತು ಸಮಾನ ಹಂಚಿಕೆಯ ತತ್ವದ" ಮೇಲೆ ಕರ್ನಾಟಕ ರಾಜ್ಯಕ್ಕೆ ನ್ಯಾಯಸಮ್ಮತವಾದ ಪಾಲನ್ನು ಹಂಚಿಕೆ ಮಾಡಬೇಕು.

00000

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ: ಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸಚಿವರಿಂದ ತುಂಗಭದ್ರಾ ಅಣೆಕಟ್ಟು ನೂತನ ಗೇಟ್ ಉದ್ಘಾಟನೆ

ನವದೆಹಲಿ, ಜೂ.12:

“ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ನಾನು, ರಾಮಲಿಂಗಾ ರೆಡ್ಡಿ ಹಾಗೂ ಟಿ.ಬಿ ಜಯಚಂದ್ರ ಅವರು ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಜಲಶಕ್ತಿ ಸಚಿವರ ಭೇಟಿ ಬಗ್ಗೆ ಕೇಳಿದಾಗ, “ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು, ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ ತೀರ್ಪಿನ ಅನ್ವಯ ಅಧಿಸೂಚನೆ, ಮಹದಾಯಿ ನೀರು, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ 5,300 ಕೋಟಿ ರೂ. ಅನುದಾನ ವಿಚಾರವಾಗಿ ಪ್ರಸ್ತಾಪಿಸಿದ್ದೇವೆ” ಎಂದು ತಿಳಿಸಿದರು.

ಕೇಂದ್ರ ಸಚಿವರಿಂದ ತುಂಗಭದ್ರಾ ಅಣೆಕಟ್ಟು ನೂತನ ಗೇಟ್ ಉದ್ಘಾಟನೆ

“ತುಂಗಭದ್ರಾ ಅಣೆಕಟ್ಟಿನ ನೂತನ ಗೇಟ್ ಗಳ ಉದ್ಘಾಟನೆಗೆ ಕೇಂದ್ರ ಜಲಶಕ್ತಿ ಸಚಿವರು ಆಗಮಿಸುತ್ತಿದ್ದು, ನೆರೆ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆ ಇದೆ. ನ್ಯಾಯ ನೀಡುವ ಸ್ಥಾನದಲ್ಲಿ ಕೂತು ಅವರು ಅನ್ಯಾಯ ಮಾಡುವುದಿಲ್ಲ ಎಂಬ ವಿಶ್ವಾಸ ನಮಗಿದೆ”ಎಂದು ತಿಳಿಸಿದರು.

ಪ್ರಧಾನಮಂತ್ರಿಗಳಿಗೆ ನೀಡಿರುವ ಮನವಿ ಬಗ್ಗೆ ಕೇಳಿದಾಗ, “ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೃಷಿ, ನೀರಾವರಿ, ನಗರಾಭಿವೃದ್ಧಿ, ಸಂಚಾರ ವಿಚಾರಗಳಿಗೆ ಸಂಬಂಧಿಸಿದಂತೆ ಮನವಿ ಮಾಡಲಾಗಿದೆ. ಅವರು ಪರಿಶೀಲಿಸಿ ತೀರ್ಮಾನ ಮಾಡಲಿದ್ದಾರೆ” ಎಂದು ತಿಳಿಸಿದರು.

ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಖಾನ್ ಅವರು ಅವಿರೋಧ ಆಯ್ಕೆ ಬಗ್ಗೆ ಕೇಳಿದಾಗ, “ನಮ್ಮ ಬಳಿ ಸಂಖ್ಯಾಬಲವಿತ್ತು. ಕರ್ನಾಟಕದ ಜನತೆ ನಮಗೆ ಸಂಖ್ಯಾಬಲದ ಆಶೀರ್ವಾದ ನೀಡಿದ್ದರು, ಆ ಸಂಖ್ಯಾಬಲವೇ ಈಗ ಫಲ ನೀಡಿದೆ" ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, “ಮುಂದಿನ ದಿನಗಳಲ್ಲಿ ನೋಡೋಣ" ಎಂದು ತಿಳಿಸಿದರು.

Comments

Leave a Comment

Prev Post ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಜೂನ್ 16ರಂದು 28ನೇ ವಘಟಿಕೋತ್ಸವ 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ
Next Post ಬಿಡದಿ ರೈತರು ಅಸಲಿ ರೈತರೋ ಅಲ್ಲವೋ; ಮುಖ್ಯಮಂತ್ರಿಗೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ ಡಿಕೆಶಿಯಿಂದ ರೈತರಿಗೆ ಘೋರ ಅಪಮಾನ; ಹೆಚ್ಡಿಕೆ ಕೆಂಡಾಮಂಡಲ

ರೈತರ ಸಬಲೀಕರಣಕ್ಕಾಗಿ "PM ಕುಸುಮ್-2.0'ಗೆ ಕೇಂದ್ರ ಸಿದ್ಧತೆ

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ * 500 GW ಪಳೆಯುಳಿಕೆ ರಹಿತ ಇಂಧನ ಗುರಿ ಸಾಧಿಸಲು ಕೃಷಿ ಭೂಮಿ, ಛಾವಣಿಗಳು ಮತ್ತು ಗ್ರಾಮೀಣ ಉದ್ಯಮಗಳಲ್ಲಿ ವಿಕೇಂದ್ರೀಕೃತ ನವೀಕರಿಸಿದ ಇಂಧನ ಸಂಪನ್ಮೂಲಗಳು ಅಗತ್ಯ. * PM-KUSUM ಅಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸ್ವತಂತ್ರ ಸೌರ ಪಂಪ್ ಸ್ಥಾಪನೆ * 13 ಲಕ್ಷ ಗ್ರಿಡ್-ಸಂಪರ್ಕಿತ ಪಂಪ್‌ಗಳ ಸೌರೀಕರಣ

ಸೋಮವಾರದಿಂದಲೇ ತಂಬಾಕು ಖರೀದಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಭರವಸೆ ಕೊಟ್ಟ ಕೇಂದ್ರ ಸಚಿವ ಪಿಯೂಷ್ ಗೋಯಲ್

ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆಗೆ ವಾಣಿಜ್ಯ ಸಚಿವರ ಸೂಚನೆ ಸಭೆಯಲ್ಲಿ ಮೈಸೂರು, ಚಾಮರಾಜನಗರ ಹಾಸನ ಜಿಲ್ಲೆಗಳ ಜನಪ್ರತಿನಿಧಿಗಳು, ನಾಯಕರು ಭಾಗಿ ಸಚಿವ ಹೆಚ್ಡಿಕೆ ಅವರ ಪಾರ್ಲಿಮೆಂಟ್ ಭವನದ ಕಚೇರಿಯಲ್ಲಿ ನಡೆದ ಸಭೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಪ್ರೀತಿ, ಮೋದಿ ಜತೆ ಮದುವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್.ಡಿ. ದೇವೇಗೌಡರ ತಿರುಗೇಟು ರಾಜ್ಯಸಭೆಯಲ್ಲಿಯೇ ಖರ್ಗೆಗೆ ಖಡಕ್ ಉತ್ತರ ಕೊಟ್ಟ ಮಾಜಿ ಪ್ರಧಾನಿಗಳು

ಕಾಂಗ್ರೆಸ್ ಎಸಗಿದ ದ್ರೋಹದ ವಿವರ ಕೊಟ್ಟ ಗೌಡರು ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭವಾಯಿತು

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

Read all News