ಶಿವಕುಮಾರ್ ಮಾಸ್ಟರ್‌ಸ್ಟ್ರೋಕ್: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ, ಅಡ್ಡಮತದಾನ-ಗೌಪ್ಯ ಮತದಾನ ವಿವಾದದ ನಡುವೆ ಸಿಎಂ ಡಿ.ಕೆ. ಶಿವಕುಮಾರ್ ಯಶಸ್ವಿ ರಾಜಕೀಯ ಕಾರ್ಯಾಚರಣೆ
ಶಿವಕುಮಾರ್ ಮಾಸ್ಟರ್‌ಸ್ಟ್ರೋಕ್: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ, ಅಡ್ಡಮತದಾನ-ಗೌಪ್ಯ ಮತದಾನ ವಿವಾದದ ನಡುವೆ ಸಿಎಂ ಡಿ.ಕೆ. ಶಿವಕುಮಾರ್ ಯಶಸ್ವಿ ರಾಜಕೀಯ ಕಾರ್ಯಾಚರಣೆ
ಬೆಂಗಳೂರು, ಜೂ. 18- ರಾಜ್ಯ ರಾಜಕೀಯದಲ್ಲಿ ಬಾರೀ ಕುತೂಹಲ ಮೂಡಿಸಿದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು ಪ್ರಕಟವಾಗಿದ್ದು, ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ನಡೆಸಿದ ಯಶಸ್ವಿ ರಾಜಕೀಯ ಕಾರ್ಯಾಚರಣೆ ಯಶಸ್ವಿಯಾಗಿದ್ದು
ಏಳು ಸ್ಥಾನಗಳ ಕಾಳಗದಲ್ಲಿ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದರೆ, ಬಿಜೆಪಿ ಎರಡು ಸ್ಥಾನಗಳನ್ನು ಪಡೆದಿದೆ. ಜೆಡಿಎಸ್ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಆದರೆ ಈ ಫಲಿತಾಂಶದ ಹಿಂದೆ ಅಡ್ಡಮತದಾನ, ಗೌಪ್ಯ ಮತದಾನ ವಿವಾದ, ಪಕ್ಷಾಂತರ ಬೆಂಬಲ ರಾಜಕೀಯದಲ್ಲಿ ಅಪರೂಪದ ಕುತೂಹಲ ಮೂಡಿಸಿದ ಘಟನೆಯಾಗಿ ಪರಿಣಮಿಸಿತ್ತು. ಸುಮಾರು 11 ಮತಗಳು ಅಡ್ಡಮತದಾನಗೊಂಡಿದ್ದು, ಜೆಡಿಎಸ್ ಹಾಗೂ ಬಿಜೆಪಿ ಶಾಸಕರಲ್ಲಿ ಮೂವರು ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕದೆ ಬೇರೆ ಅಭ್ಯರ್ಥಿಗಳಿಗೆ ಮತ ಹಾಕಿರುವುದು ಲಿಂಗರಾಜ ಪಾಟೀಲ್ ಗೆಲುವಿಗೆ ಕಾರಣವಾಯಿತು. ಈ ಅಡ್ಡಮತದಾನದಿಂದ ಜೆಡಿಎಸ್ ಅಭ್ಯರ್ಥಿ ಸೋಲು ಕಂಡಿದ್ದು, ಕಾಂಗ್ರೆಸ್ ತನ್ನ ಸಂಖ್ಯಾಬಲವನ್ನು ಯಶಸ್ವಿಯಾಗಿ ಪ್ರದರ್ಶಿಸಿದೆ. ಶಾಸಕರನ್ನು ಒಗ್ಗೂಡಿಸಿ, ತರಬೇತಿ ನೀಡಿ, ಯಾವುದೇ ತಂತ್ರಗಾರಿಕೆ ಇಲ್ಲದೆ ಸ್ವಇಚ್ಛೆಯಿಂದ ಮತ ಹಾಕುವಂತೆ ಮಾಡಿದ ಡಿ.ಕೆ. ಶಿವಕುಮಾರ್ ಅವರ ಕಾರ್ಯಾಚರಣೆ, ಈ ಚುನಾವಣೆಯನ್ನು ಅವರ ನಾಯಕತ್ವದ ಮೊದಲ ದೊಡ್ಡ ಯಶಸ್ವಿ ಪರೀಕ್ಷೆಯಾಗಿ ದಾಖಲಿಸಿದೆ.
ಕಾಂಗ್ರೆಸ್ ಪರವಾಗಿ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಾಮಕನೂರು, ಪಿ.ವಿ. ಮೋಹನ್, ಬಿ.ಎಸ್. ಶಿವಣ್ಣ ಹಾಗೂ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಇವರಲ್ಲಿ ವಿನಯ್ ಕಾರ್ತಿಕ್ 32 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ನೇರವಾಗಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಪರವಾಗಿ ರಘು ಕೌಟಿಲ್ಯ 29 ಮತಗಳನ್ನು ಪಡೆದು ಜಯ ಸಾಧಿಸಿದ್ದು, ಲಿಂಗರಾಜ ಪಾಟೀಲ್ 27 ಮತಗಳನ್ನು ಪಡೆದರೂ ಅಡ್ಡಮತದಾನದಿಂದ ಅಂತಿಮವಾಗಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಕೇವಲ 14 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ಕರ್ನಾಟಕ ವಿಧಾನ ಸಭೆಯಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ಚುನಾವಣೆ ಪಲಿತಾಂಶ ಮೊದಲ ಪ್ರಾಶಸ್ತ್ಯ ಮತಗಳ ಪ್ರಕಾರ
ಬಿ.ಕೆ. ಹರಿಪ್ರಸಾದ್ 30, ಪಿ.ವಿ. ಮೋಹನ್ 29, ಬಿ.ಎಸ್. ಶಿವಣ್ಣ 30, ತಿಪ್ಪಣಪ್ಪ ಕಮಕನೂರ 30, ವಿನಯ್ ಕಾರ್ತಿಕ್ 32, ರಘು ಕೌಟಿಲ್ಯ 29, ಲಿಂಗರಾಜ ಪಾಟೀಲ್ 27 ಹಾಗೂ ಜೆಡಿಎಸ್‌ನ ಗೋವಿಂದರಾಜು ಕೇವಲ 14 ಮತಗಳನ್ನು ಪಡೆದಿದ್ದಾರೆ.
ಒಟ್ಟು 222 ಶಾಸಕರು ಮತ ಚಲಾಯಿಸಿದ್ದು, ಶೇ.100ರಷ್ಟು ಮತದಾನ ದಾಖಲಾಗಿದೆ. ಒಂದು ಮತ ಅಸಿಂಧು ಎಂದು ಘೋಷಿಸಲಾಯಿತು. ಪ್ರತಿಯೊಬ್ಬ ಅಭ್ಯರ್ಥಿಗೆ ಗೆಲುವಿಗಾಗಿ 28 ಮತಗಳು ಅಗತ್ಯವಾಗಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸಂಖ್ಯಾಬಲವನ್ನು ಯಶಸ್ವಿಯಾಗಿ ಪ್ರದರ್ಶಿಸಿದ್ದು, ಬಿಜೆಪಿ ಎರಡು ಸ್ಥಾನಗಳನ್ನು ಉಳಿಸಿಕೊಂಡಿದೆ. ಜೆಡಿಎಸ್‌ಗೆ ಒಂದು ಸ್ಥಾನವೂ ಲಭಿಸದಿರುವುದು ದೊಡ್ಡ ಹಿನ್ನಡೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಬಿಜೆಪಿ ಉಚ್ಛಾಟಿತ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಕಾಂಗ್ರೆಸ್ ನಾಯಕರ ಜೊತೆ ಗುರುತಿಸಿಕೊಂಡಿದ್ದು, ಅಡ್ಡಮತದಾನ ನಡೆದಿರುವ ಸಾಧ್ಯತೆಗಳ ಬಗ್ಗೆ ಊಹಾಪೋಹಗಳು ವ್ಯಕ್ತವಾಗಿವೆ. ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಮತದಾನ ಕುರಿತು ಪತ್ರ ಬರೆದಿರುವುದು ವಿವಾದಕ್ಕೆ ಕಾರಣವಾಯಿತು. ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ಅವರು ಗೌಪ್ಯ ಮತದಾನ ನಿಯಮ ಉಲ್ಲಂಘನೆ ನಡೆದಿದೆ ಎಂದು ಚುನಾವಣಾಧಿಕಾರಿಗೆ ದೂರು ನೀಡಿದರು. ಆದರೆ ಯತ್ನಾಳ್ ತಮ್ಮ ಮತದಾನ ಗೌಪ್ಯವಾಗಿಯೇ ನಡೆದಿದ್ದು, ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, “ನಾವು ಯಾವುದೇ ತಂತ್ರಗಾರಿಕೆ ಮಾಡಿಲ್ಲ. ಶಾಸಕರು ತಮ್ಮ ಸ್ವಇಚ್ಛೆಯಿಂದ ಮತ ಹಾಕಿದ್ದಾರೆ. ಅಡ್ಡಮತದಾನ ಅಗತ್ಯವಿಲ್ಲ” ಎಂದು ಪ್ರತಿಕ್ರಿಯಿಸಿದರು. ಅವರು ಶಾಸಕರಿಗೆ ತರಬೇತಿ ನೀಡಲು ರೆಸಾರ್ಟ್‌ನಲ್ಲಿ ಕೂತಿದ್ದೆವು ಎಂದು ವಿವರಿಸಿದರು.
ಚುನಾವಣಾ ದಿನದಂದು ಜಿ.ಟಿ. ದೇವೇಗೌಡ ಪ್ರತ್ಯೇಕವಾಗಿ ಬಂದು ಮತ ಚಲಾಯಿಸಿದ್ದು, ಜೆಡಿಎಸ್‌ಗೆ ಮತ ತಪ್ಪಿರುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯಿತು. ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ವ್ಹೀಲ್‌ಚೇರ್‌ನಲ್ಲಿ ಬಂದು ಮತ ಚಲಾಯಿಸಿದ್ದು, ಅನಾರೋಗ್ಯದ ನಡುವೆಯೂ ಇಕ್ಬಾಲ್ ಹುಸೇನ್ ಮತದಾನದಲ್ಲಿ ಭಾಗವಹಿಸಿದ್ದು ಗಮನ ಸೆಳೆದಿದೆ.
ಈ ಚುನಾವಣೆಯಲ್ಲಿ ಸುಮಾರು 11 ಮತಗಳು ಅಡ್ಡಮತದಾನಗೊಂಡಿರುವ ಮಾಹಿತಿ ಹೊರಬಂದಿದ್ದು, ಜೆಡಿಎಸ್ ಹಾಗೂ ಬಿಜೆಪಿ ಶಾಸಕರಲ್ಲಿ ಮೂವರು ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕದೆ ಬೇರೆ ಅಭ್ಯರ್ಥಿಗಳಿಗೆ ಮತ ಹಾಕಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಅಡ್ಡಮತದಾನದಿಂದಲೇ ಲಿಂಗರಾಜ ಪಾಟೀಲ್ ಗೆಲುವು ಸಾಧಿಸಿದ್ದು, ಜೆಡಿಎಸ್ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಈ ಫಲಿತಾಂಶವು ಕಾಂಗ್ರೆಸ್‌ಗೆ ರಾಜಕೀಯವಾಗಿ ಬಲ ತುಂಬಿದ್ದು, ಬಿಜೆಪಿ ತನ್ನ ಸ್ಥಾನಗಳನ್ನು ಉಳಿಸಿಕೊಂಡಿದೆ. ಜೆಡಿಎಸ್‌ಗೆ ದೊಡ್ಡ ಹಿನ್ನಡೆ ಉಂಟಾಗಿದೆ. ಅಡ್ಡಮತದಾನ, ಗೌಪ್ಯ ಮತದಾನ ವಿವಾದ ಹಾಗೂ ಪಕ್ಷಾಂತರ ಬೆಂಬಲದ ವಿಷಯಗಳು ಈ ಚುನಾವಣೆಯನ್ನು ರಾಜ್ಯ ರಾಜಕೀಯದಲ್ಲಿ ಅತ್ಯಂತ ಕುತೂಹಲಕರ ಹಾಗೂ ತೀವ್ರ ಚರ್ಚೆಗೆ ಕಾರಣವಾಗಿತ್ತು.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಮೊದಲನೇ ಮತ ಚಲಾಯಿಸಿದ್ದರೆ, ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಕೊನೆಯದಾಗಿ ಮತ ಹಾಕಿದ್ದಾರೆ. ರಾಜ್ಯದ ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಈ ಚುನಾವಣೆ ಕೆಲವು ಸ್ವಾರಸ್ಯಕರರ ಘಟನೆಗಳಿಗೂ ಸಾಕ್ಷಿಯಾಯಿತು.
ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಚುನಾವಣೆ ವೇಳೆ ಕಾಂಗ್ರೆಸ್ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದು ಕಂಡುಬಂತು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ನಾಯಕರಿದ್ದ ಕೊಠಡಿಯಲ್ಲಿ ಹೆಬ್ಬಾರ್, ಸೋಮಶೇಖರ್ ಕೂಡ ಉಪಸ್ಥಿತರಿದ್ದರು.
ಡಿಸಿಎಂಗಾಗಿ ಕಾದು ಕಾದು ಮತ ಚಲಾಯಿಸಿದ ಸಿಎಂ
ಡಿಸಿಎಂ ಪರಮೇಶ್ವರ್ ಜೊತೆ ಮತಚಲಾಯಿಸಲೆಂದು ಕಾದು ಕಾದು ಕೊನೆಗೆ ಸಿಎಂ ಡಿ.ಕೆ. ಶಿವಕುಮಾರ್ ಒಬ್ಬರೇ ತೆರಳಿ ಮತ ಚಲಾಯಿಸಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಡಾ.ಪರಮೇಶ್ವರ್ ಬರ್ತಾರೆ ಎನ್ನಲಾಗಿತ್ತಾದರೂ 1.30 ಕಳೆದರೂ ಬಂದಿರಲಿಲ್ಲ. ಅನಾರೋಗ್ಯದ ಹಿನ್ನೆಲೆ ತಡವಾಗಿ ಪರಮೇಶ್ವರ್ ಆಗಮಿಸಿದ್ದು, ಮಾಸ್ಕ್ ಹಾಕಿಕೊಂಡು ಬಂದು ಮತ ಚಲಾವಣೆ ಮಾಡಿದರು.
ಇನ್ನು ಬಿಜೆಪಿ ಉಚ್ಛಾಟಿತ ಶಾಸಕ ಯತ್ನಾಳ್ ಮತ ಹಾಕಲು ಬಂದ ವೇಳೆ ಭಾರಿ ಹೈಡ್ರಾಮಾವೇ ನಡೆಯಿತು, ಯತ್ನಾಳ್ ಮತ ಹಾಕಲು ಬಂದಾಗ ಮತಕೇಂದ್ರದಲ್ಲಿದ್ದ ಕಾಂಗ್ರೆಸ್ನ ಉಗ್ರಪ್ಪ ಆಕ್ಷೇಪ ತೆಗೆದಿದ್ದು, ಮತ ಹಾಕುವ ಬಗ್ಗೆ ಅವರು ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಹೀಗಾಗಿ ಅವರ ಮತವನ್ನು ಮತಪೆಟ್ಟಿಗೆಗೆ ಹಾಕಬೇಡಿ ಎಂದು ಚುನಾವಣಾಧಿಕಾರಿಯನ್ನು ಒತ್ತಾಯಿಸಿದ್ದಾರೆ. ಆದರೆ ಇದನ್ನು ಬಿಜೆಪಿ ಮತಗಟ್ಟೆ ಏಜೆಂಟ್ ಗಳಾದ ಎನ್. ರವಿಕುಮಾರ್ ಮತ್ತು ಕೆ.ಎಸ್. ನವೀನ್ ವಿರೋಧಿಸಿದ್ದು, ಅಂತಿಮವಾಗಿ ಉಗ್ರಪ್ಪ ಆಕ್ಷೇಪವನ್ನು ತಿರಸ್ಕರಿಸಿ ಯತ್ನಾಳ್ಗೆ ಮತ ಹಾಕಲು ಚುನಾವಣಾಧಿಕಾರಿ ಅವಕಾಶ ನೀಡಿದರು.
ವ್ಹೀಲ್ ಚೇರ್ನಲ್ಲಿ ಬಂದ ಕಾಗವಾಡ ಶಾಸಕ
ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಆರೋಗ್ಯ ಸಮಸ್ಯೆಯ ನಡುವೆಯೂ ವ್ಹೀಲ್ ಚೇರ್ನಲ್ಲಿ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತ್ತೋರ್ವ ಶಾಸಕ ಇಕ್ಬಾಲ್ ಹುಸೇನ್ ಕೂಡ ಅನಾರೋಗ್ಯದ ನಡುವೆಯೂ ಆಗಮಿಸಿ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿರೋದು ಗಮನ ಸೆಳೆದಿದೆ.






Comments
Leave a Comment