PRABHAVAA.COM

ಅಡ್ಡ ಮತದಾನ ಮಾಡಿದವರ ಕ್ಷಮಿಸುವ ಪ್ರಶ್ನೆ ಇಲ್ಲ: ಬಿ.ವೈ. ವಿಜಯೇಂದ್ರ

Bengaluru Urban:

Font size:

ಅಡ್ಡ ಮತದಾನ ಮಾಡಿದವರ ಕ್ಷಮಿಸುವ ಪ್ರಶ್ನೆ ಇಲ್ಲ: ಬಿ.ವೈ. ವಿಜಯೇಂದ್ರ

ಅಡ್ಡ ಮತದಾನ ಮಾಡಿದವರ ಕ್ಷಮಿಸುವ ಪ್ರಶ್ನೆ ಇಲ್ಲ: ಬಿ.ವೈ. ವಿಜಯೇಂದ್ರ

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಮೀರ್ ಸಾದಿಕರ ವಿರುದ್ಧ ಖಂಡಿತ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಅಡ್ಡ ಮತದಾನವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಎಂದರು.
ಎಂಟತ್ತು ದಿನಗಳ ಹಿಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕರೆ ಮಾಡಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸೋಣ ಎಂದು ಹೇಳಿದ್ದರು. ನೀವಾದರೂ ಹಾಕಿ ನಾವಾದರೂ ಹಾಕ್ತೇವೆ. ಒಳ್ಳೆ ಉದ್ದೇಶ ಇಟ್ಟುಕೊಂಡು ಫೈಟ್ ಮಾಡೋಣ ಎಂದಿದ್ದರು. ಆಗ ನೀವೇ ಅಭ್ಯರ್ಥಿ ಹಾಕಿ ಒಟ್ಟಾಗಿ ಸೆಣಸಾಟ ಮಾಡೋಣ ಎಂದು ತಿಳಿಸಿದ್ದೆ. ಎರಡೂ ಪಕ್ಷಗಳ ಉದ್ದೇಶ ಒಂದೇ ಆಗಿತ್ತು. ನಿನ್ನೆ ನಡೆದ ಮತದಾನದಲ್ಲಿ ಜೆಡಿಎಸ್‍ಯಿಂದ ಆರೇಳು ಅಡ್ಡ ಮತದಾನ ಆಗಿದೆ. ಬಿಜೆಪಿಯಿಂದ ನಾಲ್ಕೈದು ಅಡ್ಡ ಮತದಾನ ಆಗಿದೆ. ಇದರಿಂದ ಎರಡೂ ಪಕ್ಷಗಳಿಗೆ ಬೇಸರವಾಗಿದೆ ಎಂದು ಹೇಳಿದರು.
ಯಾರು ಅಡ್ಡ ಮತದಾನ ಮಾಡಿ ಆಟ ಆಡಿರಬಹುದು ಎಂಬ ಮಾಹಿತಿ ಸಿಕ್ಕಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಮಾಹಿತಿ ನೀಡಲು ಭೇಟಿ ಮಾಡಲು ಅವಕಾಶಕ್ಕೆ ಮನವಿ ಮಾಡಿದ್ದೇನೆ. ಅವರು ಯಾವಾಗ ಅವಕಾಶ ಕೊಟ್ಟರೂ ಭೇಟಿ ಮಾಡಿ ವಿವರ ನೀಡಲಿದ್ದೇನೆ ಎಂದು ವಿವರಿಸಿದರು.
ಬಿಜೆಪಿ ಟೆಕೆಟ್‍ನಲ್ಲಿ ಗೆದ್ದು ಚುನಾವಣೆಯಲ್ಲಿ ಈ ರೀತಿ ಮತದಾನ ಮಾಡ್ತಾರೆ ಎಂದರೆ ಅವರಿಗೆ ಗೆರೆ ಎಳೆಯುವ ಕೆಲಸವನ್ನು ಪಕ್ಷ ಮಾಡಲಿದೆ. ಎಲ್ಲಕ್ಕೂ ಒಂದು ಮಿತಿ ಇದೆ. ಬಿಜೆಪಿಯಲ್ಲಿನ ಸಣ್ಣಪುಟ್ಟ ಗೊಂದಲದಿಂದಾಗಿ ಕಾರ್ಯಕರ್ತರು ಬೇಸತ್ತಿದ್ದಾರೆ. ಈಗ ಇಂತಹ ಬೆಳವಣಿಗೆ ನಡೆದಿದೆ. ಇದರಿಂದ ನೋವಾಗಿದೆ. ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಎರಡೂ ಪಕ್ಷದ ಮುಖಂಡರು ಕುಳಿತು ತೀರ್ಮಾನ ಮಾಡಿದ್ದೆವು. ನಮ್ಮ ಪಕ್ಷದ ಇಬ್ಬರು ಗೆಲವು ಸಾಧಿಸಿರಬಹುದು. ಆದರೆ ಅಡ್ಡ ಮತದಾನದಿಂದ ಅಪಮಾನ ಆಗಿದೆ. ಇದನ್ನೆಲ್ಲ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದರು.
ಗಂಭೀರವಾಗಿ ಪರಿಗಣನೆ...
ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಪಕ್ಷದ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಅಧ್ಯಕ್ಷನಾಗುವುದಕ್ಕೂ ಮೊದಲು ನಾನು ಕಾರ್ಯಕರ್ತ. ಪಕ್ಷದ ಹೈಕಮಾಂಡ್ ಕಾಲಕಾಲಕ್ಕೆ ಏನೇನು ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ. ಇಂತಹ ಮಹತ್ವದ ಚುನಾವಣೆಯಲ್ಲಿ ಹೀಗೆ ಆಗುತ್ತದೆ ಎಂಬ ಕಲ್ಪನೆ ಇರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಣಕ್ಯ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಹಳ ಜನ ಚಾಣಕ್ಯರನ್ನು ರಾಜ್ಯದ ಜನ ನೋಡಿದ್ದಾರೆ. ಕುದುರೆ ಓಡೋ ಟೈಮಲ್ಲಿ ಓಡುತ್ತದೆ ಬೀಳೋ ಟೈಮಲ್ಲಿ ಬೀಳುತ್ತದೆ. ಬಿಜೆಪಿಗೆ ಎಲ್ಲವನ್ನೂ ಎದುರಿಸುವ ಶಕ್ತಿ ಇದೆ. ದೊಡ್ಡ ಸಂಘಟನೆ ಇದೆ. ಕಾರ್ಯಕರ್ತರ ಶಕ್ತಿ ಇದೆ. ಯಾರನ್ನು ಯಾವಾಗ ಹೇಗೆ ಬಗ್ಗಿಸಬೇಕು ಎಂಬುದು ತಿಳಿದಿದೆ ಎಂದರು.
ಸಿಎಂ ಯಾರೇ ಆದರೂ ಹೆದರುವ ಪ್ರಶ್ನೆ ಇಲ್ಲ. ಸರ್ಕಾರ ಬಗ್ಗಿಸಲೂ ನಮಗೆ ಗೊತ್ತಿದೆ. ಇಂತಹ ಸಣ್ಣ ಪುಟ್ಟ ಘಟನೆಯಿಂದ ವಿಚಲಿತ ಆಗಿ ಓಡಿ ಹೋಗಲ್ಲ. ಎಲ್ಲವನ್ನು ಅರಗಿಸಿಕೊಳ್ಳಬಲ್ಲೇ ಎಂದರು.

Comments

Leave a Comment

Prev Post ಶಿವಕುಮಾರ್ ಮಾಸ್ಟರ್‌ಸ್ಟ್ರೋಕ್: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ, ಅಡ್ಡಮತದಾನ-ಗೌಪ್ಯ ಮತದಾನ ವಿವಾದದ ನಡುವೆ ಸಿಎಂ ಡಿ.ಕೆ. ಶಿವಕುಮಾರ್ ಯಶಸ್ವಿ ರಾಜಕೀಯ ಕಾರ್ಯಾಚರಣೆ
Next Post ಕ್ರಾಸ್ ವೋಟಿಂಗ್ ಮಾಡಿದವರ ವಿರುದ್ಧ ಸಮಯ ನೋಡಿಕೊಂಡು ಕ್ರಮ: ಹೆಚ್.ಡಿ.ಕುಮಾರಸ್ವಾಮಿ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News