PRABHAVAA.COM

ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಾಯ, ಜನಶಕ್ತಿ ಮತ್ತು ಸಂಕಲ್ಪದ ಸಂಭ್ರಮ

Bengaluru Urban:

Font size:

ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಾಯ, ಜನಶಕ್ತಿ ಮತ್ತು ಸಂಕಲ್ಪದ ಸಂಭ್ರಮ

ಬೆಂಗಳೂರು, ಜೂ. 21- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಭಾನುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಮುಖ್ಯಮಂತ್ರಿ ಹಾಗೂ ನಿಕಟಪೂರ್ವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಧ್ವಜವನ್ನು ನೀಡಿ ಹರಿಪ್ರಸಾದ್ ಅವರಿಗೆ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರು, ಶಾಸಕರು, ಸಂಸದರು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪವನ್ನು ನಾಯಕರು ತೊಡಲಿದ್ದು, ಕಳೆದ ಮೂರು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಜನಪರ ಆಡಳಿತ ನೀಡಿದ ಕಾಂಗ್ರೆಸ್ ಮುಂದೆಯೂ ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡಿತು. ಡಿ.ಕೆ. ಶಿವಕುಮಾರ್ ಅವರು ಕಾರ್ಯಕರ್ತರ ಶಕ್ತಿಯಿಂದ 136 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತೆಂದು ನೆನಪಿಸಿಕೊಂಡು, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿ ಹೊಂದಿದ್ದಾರೆ.

ಪದಗ್ರಹಣ ಸಮಾರಂಭದಲ್ಲಿ ಘೋಷಣೆ ಕೂಗುತ್ತಿದ್ದ ಕಾರ್ಯಕರ್ತರ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗರಂ ಆಗಿ, ಕಾಂಗ್ರೆಸ್‌ನಲ್ಲಿ ವ್ಯಕ್ತಿಪೂಜೆ ನಡೆಯುವುದಿಲ್ಲ, ಶಿಸ್ತು ಮುಖ್ಯ ಎಂದು ಎಚ್ಚರಿಸಿದರು. ಶಿಸ್ತು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇರಿ, ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಮಾನ್ಯ ಕಾರ್ಯಕರ್ತನಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಂದಿದ್ದಾರೆ. ತಳಮಟ್ಟದಿಂದ ಬಂದ ಕಾರ್ಯಕರ್ತನನ್ನು ಕೆಪಿಸಿಸಿ ಅಧ್ಯಕ್ಷ ಮಾಡಿದ್ದೇವೆ. ಪಕ್ಷ ತತ್ವಗಳನ್ನು ಮೈಗೂಡಿಸಿಕೊಂಡವರಿಗೆ ಅಧಿಕಾರ ನೀಡಿದ್ದೇವೆ ಎಂದರು. ನಮ್ಮ ಮುಂದೆ ಅನೇಕ ದೊಡ್ಡ ಸಮಸ್ಯೆಗಳಿವೆ. ಅಗತ್ಯವಸ್ತುಗಳ ದರ ಏರಿಕೆ, ಹಣದುಬ್ಬರ ಸಮಸ್ಯೆಯಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ಪಠ್ಯ ಪುಸ್ತಕದ ದರ ಏರಿಕೆಯಾಗಿದೆ. ಬೆಲೆ ಏರಿಕೆ ವಿರುದ್ಧ ಹೋರಾಟದ ಹೊಣೆ ಬಿ.ಕೆ.ಹರಿಪ್ರಸಾದ್ ಮೇಲಿದೆ. ಬಿ.ಕೆ.ಹರಿಪ್ರಸಾದ್ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

71 ವರ್ಷದ ಬಿ.ಕೆ. ಹರಿಪ್ರಸಾದ್ ಅವರು ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿದ್ದು, ಎಐಸಿಸಿ ಕಾರ್ಯಕಾರಿ ಸಮಿತಿಯ ಶಾಶ್ವತ ಆಹ್ವಾನಿತ ಸದಸ್ಯರಾಗಿ ಹಾಗೂ ಹರಿಯಾಣ ರಾಜ್ಯದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇರಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿರುವ ಹರಿಪ್ರಸಾದ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಪಡಿಸಿ ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿರೀಕ್ಷೆ ವ್ಯಕ್ತವಾಗಿದೆ.

ಅರಮನೆ ಮೈದಾನದಲ್ಲಿ ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗವಹಿಸಿದ್ದು, ಉಪಹಾರ, ಊಟ, ಕುಡಿಯುವ ನೀರು, ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಇಡೀ ಮೈದಾನ ಕಾಂಗ್ರೆಸ್ ಬಾವುಟಗಳು, ಪೋಸ್ಟರ್‌ಗಳು, ಬ್ಯಾನರ್‌ಗಳಿಂದ ಕಾಂಗ್ರೆಸ್ ಮಯವಾಗಿತ್ತು.

ಮೂರು ದಶಕಗಳ ಸೇವೆಯ ನಂತರ, ಸಾಮಾನ್ಯ ಕಾರ್ಯಕರ್ತನಾಗಿ ಆರಂಭಿಸಿ, ಪಕ್ಷದ ಸಾರಥಿಯಾಗುವವರೆಗೂ ಹರಿಪ್ರಸಾದ್ ಅವರ ಪಯಣವು ಕಾಂಗ್ರೆಸ್ ಕುಟುಂಬದ ತ್ಯಾಗ, ನಿಷ್ಠೆ ಮತ್ತು ಶ್ರಮದ ಪ್ರತೀಕವಾಗಿ ಪರಿಣಮಿಸಿದೆ. "ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ" ಎಂದು ಡಿ.ಕೆ. ಶಿವಕುಮಾರ್ ಇದೇ ಸಂದರ್ಭದ್ಲ್ಲಿ ನೆನಪಿಸಿದರು.

ಮೈದಾನದಲ್ಲಿ ಎಲ್ಲೆಡೆ ಬಾವುಟಗಳ ಅಲೆ, ನಾಯಕರುಗಳಿಗೆ ಅಭಿನಂದನೆ ಸಲ್ಲಿಸುವ ಪೋಸ್ಟರ್‌ಗಳು, ಘೋಷಣೆಗಳ ಗದ್ದಲ—ಇವೆಲ್ಲವೂ ಒಂದೇ ಭಾವನೆ ಸಾರುತ್ತಿದ್ದವು: ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಜಯಶೀಲವಾಗಬೇಕು, 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಮಂತ್ರಿಯಾಗಬೇಕು ಎಂಬ ಶಪಥವನ್ನು ನಾಯಕರು ಕಾರ್ಯಕರ್ತರೊಂದಿಗೆ ಹಂಚಿಕೊಂಡಂತಿತ್ತು

ಈ ಉತ್ಸಾಹದ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ಗದರಿಕೆ ಕಾರ್ಯಕರ್ತರಿಗೆ ಶಿಸ್ತು ಎಂಬ ಪಾಠವನ್ನು ನೆನಪಿಸಿತು. "ಯೂಸ್‌ಲೆಸ್ ಫೆಲೋಸ್" ಎಂದು ಗರಂ ಆದ ಕ್ಷಣ, ಪಕ್ಷದೊಳಗಿನ ಶಿಸ್ತು ಮತ್ತು ತತ್ವಗಳ ಮಹತ್ವವನ್ನು ಎಲ್ಲರೂ ಮನಸ್ಸಿನಲ್ಲಿ ಅಚ್ಚುಕಟ್ಟಾಗಿ ಬರೆದಿಟ್ಟರು.

71 ವರ್ಷದ ಹರಿಪ್ರಸಾದ್ ಅವರ ಮುಖದಲ್ಲಿ ಹೊಳೆಯುತ್ತಿದ್ದ ನಿಷ್ಠೆಯ ಕಿರಣ, ಕಾರ್ಯಕರ್ತರ ಕಣ್ಣಲ್ಲಿ ಭರವಸೆಯ ಬೆಳಕು. ಸಾಮಾನ್ಯ ಕಾರ್ಯಕರ್ತನಿಂದ ಪಕ್ಷದ ಅಧ್ಯಕ್ಷನಾಗುವವರೆಗಿನ ಅವರ ಪಯಣವು, ಕಾಂಗ್ರೆಸ್ ಕುಟುಂಬದ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ. ಇಡೀ ಮೈದಾನದಲ್ಲಿ ಹರಿದಾಡುತ್ತಿದ್ದ ಭಾವನೆ ಒಂದೇಆಗಿತ್ತು "ಇದು ನಮ್ಮ ಪಕ್ಷ, ಇದು ನಮ್ಮ ಶಕ್ತಿ, ಇದು ನಮ್ಮ ಭವಿಷ್ಯ."

ಈ ಪದಗ್ರಹಣ ಸಮಾರಂಭವು ಕೇವಲ ಅಧಿಕಾರ ಹಸ್ತಾಂತರವಲ್ಲ, ಅದು ಭಾವನೆಗಳ ಹಬ್ಬ, ನಿಷ್ಠೆಯ ಸಂಭ್ರಮ, ಮತ್ತು ಮುಂದಿನ ಹೋರಾಟದ ಸಂಕಲ್ಪ. ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಮತ್ತೆ ಜನರ ಹೃದಯ ಗೆಲ್ಲುವ ಭರವಸೆ ಕಾರ್ಯಕರ್ತರ ಕಣ್ಣಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿತ್ತು.

ಈ ಪದಗ್ರಹಣ ಸಮಾರಂಭವು ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದು, ಮುಂದಿನ ಚುನಾವಣಾ ರಾಜಕಾರಣದಲ್ಲಿ ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವದ ಮೇಲೆ ಇದೀಗ ಎಲ್ಲರ ಚಿತ್ತ ನೆಟ್ಟಿದೆ.

Comments

Leave a Comment

Prev Post ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶೀಘ್ರವೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಬಿ.ವೈ.ವಿಜಯೇಂದ್ರ
Next Post ಪಂಚಾಯ್ತಿ, ವಾರ್ಡ್ ಮಟ್ಟದ ಗ್ಯಾರಂಟಿ ಸಮಿತಿಗಳ ರಚನೆ: ಸಿಎಂ ಡಿ.ಕೆ. ಶಿವಕುಮಾರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News