PRABHAVAA.COM

ಚೆಕ್ ಸ್ವೀಕರಿಸಿದ ಸಿಎಂ ಶಿವಕುಮಾರ್ ಸರ್ಕಾರಕ್ಕೆ 143 ಕೋಟಿ ರೂ. ಲಾಭಾಂಶ ಕೊಟ್ಟ ಕೆಎಸ್ಐಐಡಿಸಿ: ಎಂ ಬಿ ಪಾಟೀಲ

Bengaluru Urban:

Font size:

ಚೆಕ್ ಸ್ವೀಕರಿಸಿದ ಸಿಎಂ ಶಿವಕುಮಾರ್ ಸರ್ಕಾರಕ್ಕೆ 143 ಕೋಟಿ ರೂ. ಲಾಭಾಂಶ ಕೊಟ್ಟ ಕೆಎಸ್ಐಐಡಿಸಿ: ಎಂ ಬಿ ಪಾಟೀಲ

ಚೆಕ್ ಸ್ವೀಕರಿಸಿದ ಸಿಎಂ ಶಿವಕುಮಾರ್
ಸರ್ಕಾರಕ್ಕೆ 143 ಕೋಟಿ ರೂ. ಲಾಭಾಂಶ ಕೊಟ್ಟ ಕೆಎಸ್ಐಐಡಿಸಿ: ಎಂ ಬಿ ಪಾಟೀಲ

ಬೆಂಗಳೂರು:
2024-25ನೇ ಸಾಲಿನಲ್ಲಿ ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಗಳಿಸಿದ ನಿವ್ವಳ ಲಾಭದಲ್ಲಿ 143.12 ಕೋಟಿ ರೂ.ಗಳ ಲಾಭಾಂಶವನ್ನು (ಡಿವಿಡೆಂಡ್) ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ ಬಿ ಪಾಟೀಲ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸೋಮವಾರ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ 3 ಕೋಟಿ ರೂ.ಗಳ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ನಿಗಮವು 2024-25ರಲ್ಲಿ ಒಟ್ಟು ತೆರಿಗೆ ಕಡಿತದ ಬಳಿಕ 188.41 ಕೋಟಿ ರೂ. ಲಾಭ ಗಳಿಸಿತ್ತು. ಜತೆಗೆ 2025-26ನೇ ಸಾಲಿನಲ್ಲಿ ಸಂಸ್ಥೆಗೆ 19.34 ಕೋಟಿ ರೂ.ಗಳಷ್ಟು ಹಣವು ವಿಶೇಷ ಡಿವಿಡೆಂಡ್ ಲಾಭದಲ್ಲಿ ಬಂದಿತ್ತು. ನಿಯಮಾನುಸಾರವಾಗಿ ಲಾಭಾಂಶದ ಪೈಕಿ ಶೇ.30ರಷ್ಟನ್ನು ಈಗ ಸರಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದಿದ್ದಾರೆ.

ಕೆಎಸ್ಐಐಡಿಸಿ ಸಂಸ್ಥೆಗೆ ಕ್ಯಾಮ್ಕೊ, ಕ್ಯಾಟ್ಕೊ, ಎಂಎಸ್ಐಎಲ್, ಎಚ್.ಜಿ.ಎಂ.ಎಲ್ ಮುಂತಾದ ಉದ್ದಿಮೆಗಳಿಂದ ಈ ಆದಾಯ ಬಂದಿದೆ. ಸಾರ್ವಜನಿಕ ಉದ್ದಿಮೆಗಳು ಲಾಭದ ಹಳಿಗೆ ಮರಳುತ್ತಿರುವುದು ಮತ್ತು ಕಳೆದ ಮೂರು ವರ್ಷಗಳಿಂದ ಇದು ಸಾರ್ವಕಾಲಿಕ ದಾಖಲೆಯ ಪ್ರಮಾಣದಲ್ಲಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಅವರು ನುಡಿದಿದ್ದಾರೆ.

ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್, ಕಾರ್ಯನಿರ್ವಾಹಕ ನಿರ್ದೇಶಕ ಚಿದಾನಂದ್ ಉಪಸ್ಥಿತರಿದ್ದರು.

Comments

Leave a Comment

Prev Post ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ವಿನಾಯಿತಿ – ಕರ್ನಾಟಕ ಸರ್ಕಾರದ ಮಹತ್ವದ ಆದೇಶ
Next Post 2007ರಲ್ಲಿ ಡಿಕೆಶಿ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಟೌನ್ ಶಿಪ್ ವಿರೋಧಿಸಿದ್ದರು: ಹೆಚ್.ಡಿ.ಕುಮಾರಸ್ವಾಮಿ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News