PRABHAVAA.COM

ಯಲಹಂಕದಲ್ಲಿ ಸಾಲುಮರದ ತಿಮ್ಮಕ್ಕರ 114ನೇ ಜಯಂತಿ – ಜೂನ್ 30ರಂದು ವೇದಿಕೆ ಉದ್ಘಾಟನೆ

Bengaluru Urban:

Font size:

ಯಲಹಂಕದಲ್ಲಿ ಸಾಲುಮರದ ತಿಮ್ಮಕ್ಕರ 114ನೇ ಜಯಂತಿ – ಜೂನ್ 30ರಂದು ವೇದಿಕೆ ಉದ್ಘಾಟನೆ

ಯಲಹಂಕದಲ್ಲಿ ಸಾಲುಮರದ ತಿಮ್ಮಕ್ಕರ 114ನೇ ಜಯಂತಿ – ಜೂನ್ 30ರಂದು ವೇದಿಕೆ ಉದ್ಘಾಟನೆ

ಬೆಂಗಳೂರು, ಜೂನ್ 25:
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವೇದಿಕೆ (ನೋಂ) ವತಿಯಿಂದ ಜೂನ್ 30ರಂದು ಯಲಹಂಕ ಉಪನಗರದಲ್ಲಿ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಪರಿಸರ ಸಂರಕ್ಷಣೆಗೆ ಹೆಸರಾದ ಸಾಲುಮರದ ತಿಮ್ಮಕ್ಕರವರ 114ನೇ ಜಯಂತಿ ಹಾಗೂ ವೇದಿಕೆಯ ಉದ್ಘಾಟನಾ ಸಮಾರಂಭದ ಅಂಗವಾಗಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಗಿಡ ನಾಟಿ ಕಾರ್ಯಕ್ರಮದೊಂದಿಗೆ ಸಮಾರಂಭಕ್ಕೆ ಚಾಲನೆ ನೀಡಲಾಗುವುದು. ಮಧ್ಯಾಹ್ನ 3 ಗಂಟೆಗೆ ಮದರ್ ಡೈರಿ ಸರ್ಕಲ್‌ನಿಂದ ನ್ಯೂಟೌನ್ ಕ್ಲಬ್ ವರೆಗೆ ಮೆರವಣಿಗೆ ನಡೆಯಲಿದೆ. ಸಂಜೆ 6ರಿಂದ ರಾತ್ರಿ 9ರವರೆಗೆ ನ್ಯೂಟೌನ್ ಕ್ಲಬ್ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಆರ್ಕೆಸ್ಟ್ರಾ ಹಾಗೂ ಕಲಾತಂಡಗಳ ಪ್ರದರ್ಶನ ನಡೆಯಲಿದೆ.

ಕಾರ್ಯಕ್ರಮವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಶ್ರೀ ಕೃಷ್ಣ ಬೈರೇಗೌಡ ಉದ್ಘಾಟಿಸಲಿದ್ದು, ಯಲಹಂಕ ಶಾಸಕರಾದ ಶ್ರೀ ಎಸ್.ಆರ್. ವಿಶ್ವನಾಥ್ ವೇದಿಕೆಯ ನಾವಫಲಕವನ್ನು ಅನಾವರಣಗೊಳಿಸಲಿದ್ದಾರೆ. ಅಧ್ಯಕ್ಷತೆ ವೇದಿಕೆಯ ರಾಜ್ಯಾಧ್ಯಕ್ಷ ಶ್ರೀ ಹೆಚ್. ಮಾರಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಕೆ. ಸುಧಾಕರ್ ಹಾಗೂ ಚಲನಚಿತ್ರ ನಿರ್ಮಾಪಕಿ ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾಗವಹಿಸಲಿದ್ದಾರೆ.

ಸಾಲುಮರದ ತಿಮ್ಮಕ್ಕರವರ ಸೇವಾ ಮನೋಭಾವವನ್ನು ಸ್ಮರಿಸುವ ಉದ್ದೇಶದಿಂದ, ಯಲಹಂಕದಲ್ಲಿ ಗಿಡ ನಾಟಿ, ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ವೇದಿಕೆ ಸಜ್ಜಾಗಿದೆ. ಪರಿಸರ ಸಂರಕ್ಷಣೆಯ ಸಂದೇಶವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.

Comments

Leave a Comment

Prev Post ದಲಿತರಿಗೆ ಸ್ವತಂತ್ರ ರಾಜಕೀಯ ಪಕ್ಷದ ಅಗತ್ಯ ವಿದೆ; ಚಿಂತಕ ಕೋಟಗಾನಹಳ್ಳಿ ರಾಮಯ್ಯ.
Next Post ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

25.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

25.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು:ಈಶ್ವರ ಖಂಡ್ರೆ

ಎಫ್.ಕೆ.ಸಿಸಿಐ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಶೃಂಗದ ಪೂರ್ವಭಾವಿ ಸಮಾರಂಭದಲ್ಲಿ ಭಾಗಿ ಪರಿಸರ ಸಂರಕ್ಷಣೆಯಲ್ಲಿ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದು:ಈಶ್ವರ ಖಂಡ್ರೆ

20.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

20.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Read all News