PRABHAVAA.COM

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಾ. ಯತೀಂದ್ರ ಸಿದ್ದರಾಮಯ್ಯ

Bengaluru Urban:

Font size:

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಾ. ಯತೀಂದ್ರ ಸಿದ್ದರಾಮಯ್ಯ

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಾ. ಯತೀಂದ್ರ ಸಿದ್ದರಾಮಯ್ಯ

ಎಂಎಸ್‌ಎಂಇ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಭರವಸೆ

ಬೆಂಗಳೂರು: ರಾಜ್ಯ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂ.ಎಸ್.ಎಂ.ಇ.) ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವುಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವರರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ಹಮ್ಮಿಕೊಂಡಿದ್ದ ‘ಇ-ಖಾತಾ ಮತ್ತು ನಗರ ಅಭಿವೃದ್ಧಿ' ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ ಮತ್ತು ದೇಶದಲ್ಲಿ ಅತಿ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿರುವುದು ಎಂಎಸ್‌ಎಂಇ ವಲಯವಾಗಿದೆ. ದೇಶದ ಜಿಡಿಪಿಗೆ ಶೇ. 31 ರಷ್ಟು ಹಾಗೂ ರಫ್ತು ವಲಯಕ್ಕೆ ಶೇ. 45 ರಿಂದ 48 ರಷ್ಟು ಕೊಡುಗೆಯನ್ನು ಈ ವಲಯ ನೀಡುತ್ತಿದ್ದು, ಇದನ್ನು ಯಾವುದೇ ಸರ್ಕಾರ ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು.

ಗ್ರಾಮೀಣ ಅಥವಾ ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾಗುವ ಕೈಗಾರಿಕಾ ಪ್ರದೇಶಗಳ ಆಸ್ತಿ ತೆರಿಗೆ ಪಾವತಿ ಕುರಿತು ಇರುವ ಗೊಂದಲಗಳನ್ನು ಬಗೆಹರಿಸಲಾಗುವುದು. ಈ ಬಗ್ಗೆ ಕೆಐಎಡಿಬಿ (KIADB) ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಆಸ್ತಿಗಳನ್ನು ಪಾಲಿಕೆ ವ್ಯಾಪ್ತಿಗೆ ಸಮರ್ಪಕವಾಗಿ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಪಾರದರ್ಶಕತೆ ಹಾಗೂ ತ್ವರಿತ ಸೇವೆಗಾಗಿ ಇ-ಖಾತಾ ವ್ಯವಸ್ಥೆಯನ್ನು ತರಲಾಗಿದೆ. ಪ್ರಸ್ತುತ ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿರುವ ಸುಮಾರು 20.26 ಲಕ್ಷ ಆಸ್ತಿಗಳ ಪೈಕಿ ಶೇ. 40 ರಷ್ಟು ಆಸ್ತಿಗಳಿಗೆ ಮಾತ್ರ ಇ-ಖಾತಾ ನೀಡಲಾಗಿದೆ. ತಾಂತ್ರಿಕ ತೊಂದರೆಗಳು ಮತ್ತು ಕಾಗುಣಿತ ದೋಷಗಳ  ತಿದ್ದುಪಡಿಗೆ ಈಗಾಗಲೇ ಶೇ. 10 ರಷ್ಟು ವಿನಾಯಿತಿ ನೀಡಲಾಗಿದ್ದು, ಇದನ್ನು ಇನ್ನಷ್ಟು ಸರಳಗೊಳಿಸಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಕೈಗಾರಿಕಾ ಪ್ರದೇಶಗಳಿಗೆ ಟ್ಯಾಂಕರ್ ಮುಕ್ತ ನೀರು ಸರಬರಾಜು ಮತ್ತು ಒಳಚರಂಡಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಆದ್ಯತೆ ನೀಡಲಿದೆ. ಅಲ್ಲದೆ, ಕೈಗಾರಿಕೆಗಳಿಗೆ ಹೊರೆಯಾಗುತ್ತಿರುವ ನೀರಿನ ದರ ಹಾಗೂ ಆಸ್ತಿ ತೆರಿಗೆಯನ್ನು ಮರುಪರಿಶೀಲಿಸಿ, ಉದ್ಯಮ ಸ್ನೇಹಿಯಾಗಿ ಪರಿಷ್ಕರಿಸುವ ಪ್ರಯತ್ನ ಮಾಡಲಾಗುವುದು ಎಂದರು.

ವಿವಿಧ ಇಲಾಖೆಗಳಿಂದ ಪರವಾನಗಿ ಮತ್ತು ಪ್ರಮಾಣಪತ್ರಗಳನ್ನು ಪಡೆಯಲು ಉದ್ಯಮಿಗಳಿಗೆ ಆಗುತ್ತಿರುವ ಸಮಯದ ವಿಳಂಬವನ್ನು ತಪ್ಪಿಸಲು, ಕೈಗಾರಿಕೆಗಳಿಗಾಗಿಯೇ ಪ್ರತ್ಯೇಕವಾಗಿ 'ಏಕಗವಾಕ್ಷಿ' ವ್ಯವಸ್ಥೆಯನ್ನು ಜಾರಿಗೆ ತರುವ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.

ಉದ್ಯಮಿಗಳ ಸಮಸ್ಯೆಗಳಿಗೆ ಕೇವಲ ಭರವಸೆ ನೀಡದೆ, ಎಫ್.ಕೆ.ಸಿ.ಸಿ.ಐ. ನೀಡುವ ನಿರ್ದಿಷ್ಟ ಸಮಸ್ಯೆಗಳ ಲಿಖಿತ ವರದಿಯನ್ನು ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಮುಂಬರುವ ದಿನಗಳಲ್ಲೂ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕ ಮತ್ತು ಸಮಾಲೋಚನೆ ನಡೆಸುವ ಮೂಲಕ ಕೈಗಾರಿಕಾ ವಲಯದ ಏಳಿಗೆಗೆ ಶ್ರಮಿಸುವುದಾಗಿ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ‌ ಬಿ.ಬಿ.ಕಾವೇರಿ, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷರಾದ ಉಮಾ ರೆಡ್ಡಿ, ನಿಕಟಪೂರ್ವ ಅಧ್ಯಕ್ಷರಾದ ಆರ್. ಶಿವಕುಮಾರ್, ಹಿರಿಯ ಉಪಾಧ್ಯಕ್ಷರಾದ ಸಾಯಿರಾಂ ಪ್ರಸಾದ್, ಉಪಾಧ್ಯಕ್ಷರಾದ ಶಶಿಧರ್, ಅರವಿಂದ್ ಬುರ್ಜಿ, ತಲ್ಲಂ ವೆಂಕಟೇಶ್, ಸುಗ್ನೇನ್ ಹಿರೇಮಠ್ ಸೇರಿದಂತೆ FKCCIಯ ಪದಾಧಿಕಾರಿಗಳು, ವಿವಿಧ ಕೈಗಾರಿಕಾ ಸಂಘಗಳ ಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾದ ರಾಜ್ಯ ಚುನಾವಣಾ ಆಯೋಗ: ಛಲವಾದಿ ನಾರಾಯಣಸ್ವಾಮಿ

ಸವಾಲು ಎದುರಿಸಲು ಆಧುನಿಕ ಜ್ಞಾನಸೃಷ್ಟಿ ಅಗತ್ಯ: ಎಂ ಬಿ ಪಾಟೀಲ

ಅಗಸ್ತ್ಯ ಇಂಟರ್ನ್ಯಾಷನಲ್ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿ

ಮೇ ತಿಂಗಳಲ್ಲಿ ಪ್ಯಾನ್-ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

ಮೇ ತಿಂಗಳಲ್ಲಿ ಪ್ಯಾನ್-ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

ಕಲಬುರಗಿಯಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್ ಯೋಜನೆ

ಕೆಐಎಡಿಬಿ ಮೂಲಕ ಮೊದಲ ಹಂತ ಅಭಿವೃದ್ಧಿಗೆ ತೀರ್ಮಾನ: ಎಂ ಬಿ ಪಾಟೀಲ

ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನಕ್ಕೆ ಅನುಗುಣವಾಗಿ ಹೆಚ್‌ಎಂಟಿ ಉನ್ನತಿಗೆ ಕ್ರಮ ಎಂದ ಹೆಚ್‌ʼಡಿಕೆ

ಇಡೀ ದಿನ ಕಾರ್ಖಾನೆಯಲ್ಲೇ ಸಂಚರಿಸಿದ ಸಚಿವರು; ಆಡಳಿತ ವರ್ಗ, ಕಾರ್ಮಿಕರು, ಇನ್ನಿತರ ಪ್ರಮುಖರೊಂದಿಗೆ ವಿಸ್ತೃತ ಸಮಾಲೋಚನೆ

7,506 ಕೋಟಿ ರೂ. ಹೂಡಿಕೆಯ 55 ಯೋಜನೆಗಳಿಗೆ ಅಸ್ತು: ಎಂ ಬಿ ಪಾಟೀಲ

7,506 ಕೋಟಿ ರೂ. ಹೂಡಿಕೆಯ 55 ಯೋಜನೆಗಳಿಗೆ ಅಸ್ತು: ಎಂ ಬಿ ಪಾಟೀಲ

ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ: ರಾಜ್ಯದ ನೇತೃತ್ವದಲ್ಲಿ ಪಾಲುದಾರರ ಕಾರ್ಯಾಗಾರ

50ಕ್ಕೂ ಹೆಚ್ಚು ಉನ್ನತ ಪ್ರತಿನಿಧಿಗಳು ಭಾಗಿ, ಕರ್ನಾಟಕಕ್ಕೆ ನೀತಿ ನಿರೂಪಣೆಯ ಅವಕಾಶ

Read all News