PRABHAVAA.COM

ಕಾಂಗ್ರೆಸ್ ಕಚೇರಿಯೇ ನನ್ನ ದೇಗುಲ: ವಿ.ಪ.ಸದಸ್ಯ ಪಿ.ವಿ.ಮೋಹನ್

Dakshina Kannada:

Font size:

ಕಾಂಗ್ರೆಸ್ ಕಚೇರಿಯೇ ನನ್ನ ದೇಗುಲ: ವಿ.ಪ.ಸದಸ್ಯ ಪಿ.ವಿ.ಮೋಹನ್

From : Jayaram Udupi:

ಮಂಗಳೂರು:

"ಕಾಂಗ್ರೆಸ್ ಕಚೇರಿ ನನ್ನ ದೇಗುಲ. ಪಕ್ಷವೇ ನನ್ನ ತಾಯಿ. ನನಗೆ ಹಾರ-ತುರಾಯಿ ಬೇಡ. ಹೋರಾಟದ ರಾಜಕೀಯದ ಮೂಲಕ ಬೆಳೆದವನಾದ ನಾನು ಸದಾ ನಿಮ್ಮವನಾಗಿರುತ್ತೇನೆ" ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ನೂತನ ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಹೇಳಿದರು.

ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಅವರನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ನಾನು ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕರ್ತ. ನನ್ನ ತಂದೆ-ತಾಯಿ ರಾಜಕೀಯದಲ್ಲಿರಲಿಲ್ಲ. ಕಾಲೇಜು ದಿನಗಳ ಹೋರಾಟಗಳೇ ನನ್ನನ್ನು ರಾಜಕೀಯಕ್ಕೆ ಕರೆತಂದವು" ಎಂದು ಭಾವುಕರಾಗಿ ಹೇಳಿದರು.

ತಮ್ಮ ಮೊದಲ ಹೋರಾಟವನ್ನು ನೆನಪಿಸಿಕೊಂಡ ಅವರು, "ನಗರದ ಹೋಟೆಲ್‌ಗಳಲ್ಲಿ ಇಡ್ಲಿ, ದೋಸೆಯ ಬೆಲೆ ಏರಿಕೆಯ ವಿರುದ್ಧ ವಿದ್ಯಾರ್ಥಿಗಳೊಂದಿಗೆ ಮೂರು ದಿನಗಳ ಕಾಲ ನಡೆಸಿದ ಹೋರಾಟದ ಫಲವಾಗಿ ಹೋಟೆಲ್ ಮಾಲೀಕರು ಐದು ಪೈಸೆ ದರ ಇಳಿಸಲು ಒಪ್ಪಿಕೊಂಡಿದ್ದರು. ಅದೇ ನನ್ನ ಹೋರಾಟದ ಮೊದಲ ಗೆಲುವು" ಎಂದರು.

ಹೋರಾಟದ ರಾಜಕೀಯದಿಂದ ಅಧಿಕಾರ ರಾಜಕೀಯಕ್ಕೆ ಬಂದಿರುವ ತಮಗೆ ಜನಸೇವೆ ಮಾಡುವ ಅವಕಾಶ ದೊರೆತಿದ್ದು, ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಸಂಕಲ್ಪ ಹೊಂದಿದ್ದೇನೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯನಾಗಿ ಕೇವಲ ಒಂಬತ್ತು ದಿನಗಳಲ್ಲೇ ಹಲವು ಒತ್ತಡಗಳು ಮತ್ತು ಸವಾಲುಗಳನ್ನು ಎದುರಿಸಬೇಕಾಗಿದೆ. ಟಿಕೆಟ್ ಘೋಷಣೆಯಾದ ತಕ್ಷಣವೇ ಅನುದಾನ, ವರ್ಗಾವಣೆ ಹಾಗೂ ಇತರ ವಿಚಾರಗಳಿಗೆ ಸಂಬಂಧಿಸಿದಂತೆ ಹಲವರು ಸಂಪರ್ಕಿಸಿದ್ದು, ಜನಪ್ರತಿನಿಧಿಗಳ ಮೇಲಿರುವ ಒತ್ತಡದ ಅರಿವು ಈಗಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ರಾಜಕೀಯದ ಕಠಿಣ ಅನುಭವವಾಗಿದೆ ಎಂದು ಹೇಳಿದರು.

"ಕಾಂಟ್ರಾಕ್ಟ್ ಹಾಗೂ ವರ್ಗಾವಣೆ ವಿಚಾರಗಳಿಗೆ ನನ್ನ ಬಳಿ ಬರಬೇಡಿ. 'ನೋ ಕಾಂಟ್ರಾಕ್ಟ್, ನೋ ಟ್ರಾನ್ಸ್‌ಫರ್'. ಊರಿನ ಅಭಿವೃದ್ಧಿ ಮತ್ತು ಜನರ ಸಮಸ್ಯೆಗಳಿದ್ದರೆ ಮಾತ್ರ ಬನ್ನಿ" ಎಂದು ಅವರು ಸ್ಪಷ್ಟಪಡಿಸಿದರು.

ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಪಕ್ಷದಲ್ಲಿ ಹಲವು ಸಕಾರಾತ್ಮಕ ಬದಲಾವಣೆಗಳಾಗಿದ್ದು, ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಸಿಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಒಗ್ಗಟ್ಟಿನಿಂದ ದುಡಿಯಬೇಕು ಎಂದು ಕರೆ ನೀಡಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮಾತನಾಡಿದ ಅವರು, "ಯಾವುದೇ ಮತದಾರರ ಹೆಸರು ಪಟ್ಟಿಯಿಂದ ಕೈ ತಪ್ಪದಂತೆ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು" ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಪದ್ಮರಾಜ್ ಆರ್. ಪೂಜಾರಿ, ಶಶಿಧರ್ ಹೆಗ್ಡೆ, ಲುಕ್ಮಾನ್ ಬಂಟ್ವಾಳ, ಮಮತಾ ಗಟ್ಟಿ, ಶಾಲೆಟ್ ಪಿಂಟೊ, ವಿಶ್ವಾಸ್ ಕುಮಾರ್‌ದಾಸ್, ಇಬ್ರಾಹಿಂ ನವಾಜ್, ಮನೋರಾಜ್ ರಾಜೀವ್, ಸುಭಾಷ್ ಶೆಟ್ಟಿ, ಚಿತ್ತರಂಜನ್ ಶೆಟ್ಟಿ, ಅಪ್ಪಿ ಎಸ್., ಶುಬೋದಯ ಆಳ್ವ, ಡೆನ್ನಿಸ್ ಡಿಸೋಜ, ಟಿ.ಕೆ. ಸುಧೀರ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು
[9:41 am, 27/6/2026] Jayram Udupi: ಕಾಂಗ್ರೆಸ್ ಕಚೇರಿಯೇ ನನ್ನ ದೇಗುಲ: ವಿ.ಪ.ಸದಸ್ಯ ಪಿ.ವಿ.ಮೋಹನ್

Comments

Leave a Comment

Prev Post ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಾ. ಯತೀಂದ್ರ ಸಿದ್ದರಾಮಯ್ಯ
Next Post ಬೆಂಗಳೂರಿಗೆ ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News