PRABHAVAA.COM

ಬೆಂಗಳೂರಿಗೆ ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

Bengaluru Urban:

Font size:

ಬೆಂಗಳೂರಿಗೆ ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರಿಗೆ ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್
ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ಜೂನ್ 27,

ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ ಇಂದು ದಿನಾಂಕ 27-06-2026 ರಂದು ಬೆಂಗಳೂರು ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ನಾಡಪ್ರಭು ಕೆಂಪೇಗೌಡ ಅವರ 517 ಜಯಂತಿ ಕಾರ್ಯಕ್ರಮ ಹಾಗೂ ದಿನಾಂಕ : 28-06-2026 ರಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 30 ನೇ‌ ಸಂಸ್ಥಾಪನಾ ದಿನಾಚರಣೆ ಮತ್ತು ನಶಾ ಮುಕ್ತ ಭಾರತ್ ಕಾನ್ ಕ್ಲೈವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಗೌರವಾನ್ವಿತ ಭಾರತದ ಉಪರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಯು.ಟಿ.ಖಾದರ್ ಫರೀದ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ‌ ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು. ಪಿ.ಎಸ್ ಸೇರಿದಂತೆ ಗಣ್ಯರು ‌ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಕಾಂಗ್ರೆಸ್ ಕಚೇರಿಯೇ ನನ್ನ ದೇಗುಲ: ವಿ.ಪ.ಸದಸ್ಯ ಪಿ.ವಿ.ಮೋಹನ್
Next Post ನಾಡಪ್ರಭು ಕೆಂಪೇಗೌಡರಿಗೆ ಗೌರವ ನಮನ; ಅರ್ಥಪೂರ್ಣವಾಗಿ ನಡೆದ ಬೆಂಗಳೂರು ನಿರ್ಮಾತೃವಿನ 517 ನೇ ಜಯಂತಿ

ರೈತರ ಸಬಲೀಕರಣಕ್ಕಾಗಿ "PM ಕುಸುಮ್-2.0'ಗೆ ಕೇಂದ್ರ ಸಿದ್ಧತೆ

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ * 500 GW ಪಳೆಯುಳಿಕೆ ರಹಿತ ಇಂಧನ ಗುರಿ ಸಾಧಿಸಲು ಕೃಷಿ ಭೂಮಿ, ಛಾವಣಿಗಳು ಮತ್ತು ಗ್ರಾಮೀಣ ಉದ್ಯಮಗಳಲ್ಲಿ ವಿಕೇಂದ್ರೀಕೃತ ನವೀಕರಿಸಿದ ಇಂಧನ ಸಂಪನ್ಮೂಲಗಳು ಅಗತ್ಯ. * PM-KUSUM ಅಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸ್ವತಂತ್ರ ಸೌರ ಪಂಪ್ ಸ್ಥಾಪನೆ * 13 ಲಕ್ಷ ಗ್ರಿಡ್-ಸಂಪರ್ಕಿತ ಪಂಪ್‌ಗಳ ಸೌರೀಕರಣ

ಸೋಮವಾರದಿಂದಲೇ ತಂಬಾಕು ಖರೀದಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಭರವಸೆ ಕೊಟ್ಟ ಕೇಂದ್ರ ಸಚಿವ ಪಿಯೂಷ್ ಗೋಯಲ್

ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆಗೆ ವಾಣಿಜ್ಯ ಸಚಿವರ ಸೂಚನೆ ಸಭೆಯಲ್ಲಿ ಮೈಸೂರು, ಚಾಮರಾಜನಗರ ಹಾಸನ ಜಿಲ್ಲೆಗಳ ಜನಪ್ರತಿನಿಧಿಗಳು, ನಾಯಕರು ಭಾಗಿ ಸಚಿವ ಹೆಚ್ಡಿಕೆ ಅವರ ಪಾರ್ಲಿಮೆಂಟ್ ಭವನದ ಕಚೇರಿಯಲ್ಲಿ ನಡೆದ ಸಭೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಪ್ರೀತಿ, ಮೋದಿ ಜತೆ ಮದುವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್.ಡಿ. ದೇವೇಗೌಡರ ತಿರುಗೇಟು ರಾಜ್ಯಸಭೆಯಲ್ಲಿಯೇ ಖರ್ಗೆಗೆ ಖಡಕ್ ಉತ್ತರ ಕೊಟ್ಟ ಮಾಜಿ ಪ್ರಧಾನಿಗಳು

ಕಾಂಗ್ರೆಸ್ ಎಸಗಿದ ದ್ರೋಹದ ವಿವರ ಕೊಟ್ಟ ಗೌಡರು ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭವಾಯಿತು

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

Read all News