ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳು ಮತದಾರರ ಪಟ್ಟಿಗೆ ಸೇರಿದರೆ ದೇಶದ ಭದ್ರತೆಗೆ ಅಪಾಯ: ಆರ್.ಅಶೋಕ್

Bengaluru Urban:

Font size:

ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳು ಮತದಾರರ ಪಟ್ಟಿಗೆ ಸೇರಿದರೆ ದೇಶದ ಭದ್ರತೆಗೆ ಅಪಾಯ: ಆರ್.ಅಶೋಕ್

ಬೆಂಗಳೂರು: ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳು ನಮ್ಮ ಮತದಾರರ ಪಟ್ಟಿಗೆ ಸೇರಿದರೆ ಅದು ದೇಶದ ಭದ್ರತೆಗೆ ಅಪಾಯಕಾರಿ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದ್ದಾರೆ.
ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‍ಐಆರ್) ಕಳ್ಳ ಓಟುಗಳನ್ನು ಸೇರಿಸಲು ಅವಕಾಶ ನೀಡಬಾರದು. ಪಾಕಿಸ್ತಾನ, ಬಾಂಗ್ಲಾ ದೇಶದವರು ಬಹಳಷ್ಟು ಜನರು ಕರ್ನಾಟಕಕ್ಕೆ ಬಂದಿದ್ದಾರೆ. ಅವರು ಈ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡರೆ ಖಾಯಂ ನಾಗರಿಕರಾಗುತ್ತಾರೆ. ಇದು ದೇಶದ ಭದ್ರತೆಗೆ ಅಪಾಯಕಾರಿ ಎಂದು ತಿಳಿಸಿದರು. ಇದರ ಕುರಿತು ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಕಾರ್ಯಾಗಾರದಲ್ಲಿ ಚರ್ಚೆ ಆಗಿದೆ. ನಾನು ಕೂಡ ಪಾಲ್ಗೊಂಡಿದ್ದೇನೆ ಎಂದರು.
ನಿನ್ನೆ ಸಿದ್ದರಾಮಯ್ಯನವರು ನಾನು ಸಮಾಜವಾದಿ, ಜಾತಿವಾದಿ ಅಲ್ಲ; ಕುಟುಂಬವಾದಿ ಅಲ್ಲ ಎಂದು ದೊಡ್ಡ ಭಾಷಣ ಮಾಡಿದ್ದಾರೆ. ನನ್ನ ಮಗನನ್ನೂ ಸ್ವಲ್ಪ ನೋಡ್ಕೊಳ್ರಿ ಎಂದಿದ್ದಾರೆ. ಇಷ್ಟು ದಿನ ಇವರನ್ನು ನೋಡಿಕೊಂಡಿದ್ದಾಗಿದೆ. ಇನ್ನು ಇವರ ಮಗನನ್ನೂ ನೋಡಿಕೊಳ್ಳಬೇಕು. ಇನ್ನೊಂದು ಆರು ತಿಂಗಳ ಬಳಿಕ ನನ್ನ ಮೊಮ್ಮಗನನ್ನೂ ನೋಡಿಕೊಳ್ರಿ ಎಂದರೆ, ರಾಜಕೀಯ ವ್ಯವಸ್ಥೆಯಲ್ಲಿ ಇದು ರಾಜರ ಆಡಳಿತವೇ ಎಂದು ಪ್ರಶ್ನಿಸಿದರು.
ಹಿಂದೆ ರಾಜರು ನಾನಾದ ಬಳಿಕ ನನ್ನ ಮಗ ಉತ್ತರಾಧಿಕಾರಿ, ಯುವರಾಜ ಎನ್ನುತ್ತಿದ್ದರು. ಈಗ ರಾಜ ಯುವರಾಜನ ಪಟ್ಟಾಭಿಷೇಕ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಡಾ. ಅಂಬೇಡ್ಕರ್ ಅವರು ಈ ರಾಜರ ಆಡಳಿತ ರದ್ದು ಮಾಡಿ ಮತದಾನ- ಪ್ರಜಾಪ್ರಭುತ್ವ ವ್ಯವಸ್ಥೆ ತಂದರು. ಡಾ. ಅಂಬೇಡ್ಕರ್ ಅವರ ತತ್ವಕ್ಕೆ ಸಿದ್ದರಾಮಯ್ಯನವರು ತಿಲಾಂಜಲಿ ಇಟ್ಟಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ; ಮತದಾನದ ಮೂಲಕ ಗೆದ್ದು ಬರಬೇಕು; ಅದನ್ನು ಬಿಟ್ಟು ನನ್ನ ಮಗನನ್ನು ಬೆಳೆಸಿ; ಮೊಮ್ಮಗನನ್ನು ಬೆಳೆಸಿ ಎನ್ನುವುದು ಡಾ. ಅಂಬೇಡ್ಕರ್ ಅವರ ಸಿದ್ಧಾಂತಕ್ಕೆ ಅಪಚಾರ ಎಂದು ತಿಳಿಸಿದರು.
ಎಲ್‍ಪಿಜಿ ಸಿಲಿಂಡರ್ ದುರುಪಯೋಗ ತಡೆಗೆ ಎಸ್ಮಾ ಜಾರಿಗೊಳಿಸಲಾಗಿದೆ. ಕಾಳಸಂತೆಯನ್ನು ತಡೆಗಟ್ಟುವ ಕೆಲಸವನ್ನು ರಾಜ್ಯ ಸರಕಾರ ಮಾಡಬೇಕು ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಇದು ಯುದ್ಧದ ಸಂದರ್ಭ. ಜನರು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಸಿದ್ದರಾಮಯ್ಯನವರು ಯುದ್ಧದ ಸಂದರ್ಭದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಇದು ಡಿನ್ನರ್ ಪಾರ್ಟಿ ಸರಕಾರ..
ಸಿದ್ದರಾಮಯ್ಯನವರ ಗ್ಯಾಂಗ್ ಪ್ರತಿದಿನ ಡಿನ್ನರ್ ಮಾಡಿಸಲು ಆದೇಶ ನೀಡಿದೆಯಂತೆ. ಇದು ನನಗಿರುವ ಮಾಹಿತಿ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ರಾಜ್ಯದ ಜನರು ಗೊಜ್ಜನ್ನ, ಅನ್ನ ಸಾಂಬಾರ್ ತಿನ್ನುತ್ತಿದ್ದಾರೋ ಗೊತ್ತಿಲ್ಲ; ಈ ಡಿನ್ನರಂತೂ ಸಕಲ ಪದಾರ್ಥ ಸಿಗುವಂತೆ ಮಾಡುತ್ತಿದ್ದಾರೆ. ಇದು ಡಿನ್ನರ್ ಪಾರ್ಟಿ ಸರಕಾರ ಎಂದು ಆಕ್ಷೇಪಿಸಿದರು. ಇವರಿಗೆ ಜನರ ಕಷ್ಟಗಳ ಬಗ್ಗೆ ಗಮನವೇ ಇಲ್ಲ ಎಂದು ದೂರಿದರು. ಬಜೆಟ್ ಸರಿ ಇಲ್ಲವೆಂದು ಕಾಂಗ್ರೆಸ್ಸಿನವರೆಲ್ಲ ಲಾಂಜ್‍ನಲ್ಲಿ ಹೇಳುತ್ತಿದ್ದಾರೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

Comments

Leave a Comment

Prev Post ವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರು/ARAI ಪರೀಕ್ಷಾ ಕೇಂದ್ರ ಸ್ಥಾಪನೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದ ಕೇಂದ್ರ ಸಚಿವರು ಈ ಕೇಂದ್ರ ಬಂದರೆ ಮಂಡ್ಯ, ಅಕ್ಕಪಕ್ಕದ ಜಿಲ್ಲೆಗಳಿಗೂ ಅನುಕೂಲ; ಉದ್ಯೋಗವಕಾಶ ಹೆಚ್ಚುತ್ತೆ
Next Post ಯಶವಂತಪುರದಲ್ಲಿ ಟೆಕ್ಸ್‌ಟೈಲ್‌ ಮಾರ್ಕೆಟ್‌: ಮುಖ್ಯಮಂತ್ರಿಗಳೊಂದಿಗೆ ಜೊತೆ ಚರ್ಚಿಸಿ ಶೀಘ್ರ ಶಂಕುಸ್ಥಾಪನೆ: ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News