PRABHAVAA.COM

ವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ: ಎಂ ಬಿ ಪಾಟೀಲ

Bengaluru Urban:

Font size:

ವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ: ಎಂ ಬಿ ಪಾಟೀಲ

ವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ: ಎಂ ಬಿ ಪಾಟೀಲ

ಬೆಂಗಳೂರು: ಅಜ್ಞಾತವಾಗಿದ್ದು, ಎಲ್ಲೆಲ್ಲೋ ಚೆಲ್ಲಾಪಿಲ್ಲಿಯಾಗಿದ್ದ ವಚನ ಸಾಹಿತ್ಯವನ್ನು ಸಂಗ್ರಹಿಸಿ ಬೆಳಕಿಗೆ ತಂದ ಕೀರ್ತಿಯು ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಅವರಿಲ್ಲದೆ ಹೋಗಿದ್ದರೆ ಶರಣ ಸಂಸ್ಕೃತಿ, ಲಿಂಗಾಯತ ಧರ್ಮ, ಬಸವಾದಿ ಶರಣರು ಎಲ್ಲವೂ ಕಳೆದು ಹೋಗುತ್ತಿತ್ತು' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಗುರುವಾರ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಮುದ್ರಣಕಾರರ ಸಂಘ ಮತ್ತು ವಿಜಯಪುರದ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರ ಜತೆಗೂಡಿ ಇಲ್ಲಿನ ತಮ್ಮ ನಿವಾಸದಲ್ಲಿ ಏರ್ಪಡಿಸಿದ್ದ ಹಳಕಟ್ಟಿ ಜನ್ಮ ದಿನ ಮತ್ತು ವಚನ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಧಾರವಾಡ ಸೀಮೆಯ ಹಳಕಟ್ಟಿಯವರು ವಿಜಯಪುರವನ್ನು ತಮ್ಮ ಕಾರ್ಯಕ್ಷೇತ್ರ ಮಾಡಿಕೊಂಡು, ಅಗಾಧ ಕೆಲಸ ಮಾಡಿದರು. ಅವರಿಂದಾಗಿ ನೂರಾರು ವಚನಕಾರರು ನಾಡಿಗೆ ಗೊತ್ತಾದರು. ಇದಲ್ಲದೆ ಅವರು ಮುದ್ರಣಾಲಯ ಸ್ಥಾಪಿಸಿದ ಸಾಹಸಿಗಳೂ ಆಗಿದ್ದರು ಎಂದು ಅವರು ಬಣ್ಣಿಸಿದ್ದಾರೆ.

ಸರಕಾರವು ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪವನ್ನು ನಿರ್ಮಿಸುತ್ತಿದೆ. ಇಲ್ಲಿ ಏನೇನಾಗಬೇಕು ಎಂಬ ಬಗ್ಗೆ ಶರಣ ಸಾಹಿತ್ಯ ಪರಿಷತ್ತು ಸಲಹೆ ನೀಡಿದೆ. ಇವುಗಳನ್ನು ಸರಕಾರದ ಮಟ್ಟದಲ್ಲಿ ಚರ್ಚಿಸಿ, ಜಾರಿಗೆ ತರಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಮಾತನಾಡಿ, ಹಳಕಟ್ಟಿ ಅವರಿಂದಾಗಿ ವಿಶ್ವಗುರು ಬಸವಣ್ಣ ಮುಂತಾದವರು ಗೊತ್ತಾದರು. ವಚನ ಸಂಸ್ಕೃತಿ ಇಂದು ಹೆಮ್ಮರವಾಗಿ ಬೆಳೆಯಲು ಅವರೇ ಮೂಲಕಾರಣ ಎಂದು ನೆನೆದಿದ್ದಾರೆ.

ವಚನ ಸಾಹಿತ್ಯವನ್ನು ಸಂಗ್ರಹಿಸುವ ಕೆಲಸವನ್ನು ಹಳಕಟ್ಟಿ ಮಾಡಿದರೆ ಅದನ್ನು ಲೋಕಕ್ಕೆ ಪಸರಿಸುವ ಕೆಲಸವನ್ನು ಎಂ.ಬಿ.ಪಾಟೀಲ ನೇತೃತ್ವದ ಬಿಎಲ್ ಡಿಇ ಸಂಸ್ಥೆ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಿ. ಸೋಮಶೇಖರ್, ಅಖಿಲ ಭಾರತ ಮುದ್ರಣಕಾರರ ಸಂಘದ ಅಧ್ಯಕ್ಷ ಸಿ.ಆರ್.ಜನಾರ್ದನ ಮಾತನಾಡಿದರು.

ಮಾಜಿ ಉಪ ಮೇಯರ್ ಪುಟ್ಟರಾಜು, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ, ಮುದ್ರಣಕಾರರ ಸಂಘದ ಪದಾಧಿಕಾರಿಗಳಾದ ಅಶೋಕ್ ಕುಮಾರ್, ಸ್ವ್ಯಾನ್ ಕೃಷ್ಣಮೂರ್ತಿ, ಮರಳವಾಡಿ ಶಿವಶಂಕರ್, ಮಲ್ಲಿಕಾರ್ಜುನ, ಫಾಲನೇತ್ರ, ರಾಜಶೇಖರ ಮುಂತಾದವರು ಉಪಸ್ಥಿತರಿದ್ದರು.

Caption

ಕರ್ನಾಟಕ ಮುದ್ರಣಕಾರರ ಸಂಘ ಮತ್ತು ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರ ಜತೆಗೂಡಿ ಸಚಿವ ಎಂ ಬಿ ಪಾಟೀಲರ ಬೆಂಗಳೂರು ನಿವಾಸದಲ್ಲಿ ಗುರುವಾರ ಹಳಕಟ್ಟಿಯವರ ಜನ್ಮದಿನ ಮತ್ತು ವಚನ ಸಂರಕ್ಷಣಾ ದಿನಾಚರಣೆ ಏರ್ಪಡಿಸಿದ್ದವು. ಈ ಸಂದರ್ಭದಲ್ಲಿ ಗೊ.ರು. ಚನ್ನಬಸಪ್ಪ, ಸಿ. ಸೋಮಶೇಖರ್, ಜನಾರ್ದನ, ಅಶೋಕ ಕುಮಾರ್, ಸ್ವಾನ್ ಕೃಷ್ಣಮೂರ್ತಿ ಮುಂತಾದವರು ಹಳಕಟ್ಟಿಯವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದರು.

Comments

Leave a Comment

Prev Post ಟಿ.ಕೋನಪ್ಪರೆಡ್ಡಿ – ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ, ತಮ್ಮ ವಿರುದ್ಧದ ಆರೋಪಗಳಿಗೆ ದಾಖಲೆ ಸಮೇತ ಸ್ಪಷ್ಟನೆ
Next Post ವಿಧಾನ ಪರಿಷತ್‌ಗೆ ಆಯ್ಕೆಯಾದ ಏಳು ಸದಸ್ಯರ ಪ್ರಮಾಣ ವಚನ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News