PRABHAVAA.COM

ಮತದಾರರ ಹಕ್ಕು ರಕ್ಷಣೆಗಾಗಿ ‘ನಾಗರಿಕ ಮತ ಕಾವಲು ಸಮಿತಿ’ ರಚನೆ – ಬಾರ್ಮ್/ಸಿತಾರಾಮ್-ಎಎಡಿ ಘೋಷಣೆ

Bengaluru Urban:

Font size:

ಮತದಾರರ ಹಕ್ಕು ರಕ್ಷಣೆಗಾಗಿ ‘ನಾಗರಿಕ ಮತ ಕಾವಲು ಸಮಿತಿ’ ರಚನೆ – ಬಾರ್ಮ್/ಸಿತಾರಾಮ್-ಎಎಡಿ ಘೋಷಣೆ

ಮತದಾರರ ಹಕ್ಕು ರಕ್ಷಣೆಗಾಗಿ ‘ನಾಗರಿಕ ಮತ ಕಾವಲು ಸಮಿತಿ’ ರಚನೆ – ಬಾರ್ಮ್/ಸಿತಾರಾಮ್-ಎಎಡಿ ಘೋಷಣೆ

ಬೆಂಗಳೂರು, ಜು. 6 -ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಅವೈಜ್ಞಾನಿಕ, ಅಸಂವಿಧಾನಿಕ ಮತ್ತು ದುರುದ್ದೇಶಪೂರಿತವಾಗಿದೆ ಎಂದು ನಾಗರಿಕ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳು ಆರೋಪಿಸಿ, ಮತದಾರರ ಹಕ್ಕುಗಳನ್ನು ರಕ್ಷಿಸಲು “ನಾಗರಿಕ ಮತ ಕಾವಲು ಸಮಿತಿ”ಯನ್ನು ರಚಿಸಿರುವುದಾಗಿ ಬಾರ್ಮ್/ಸಿತಾರಾಮ್-ಎಎಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.

ಅವರು ಹೇಳಿದರು, “SIR ಪ್ರಕ್ರಿಯೆಯಿಂದ ಲಕ್ಷಾಂತರ ಅರ್ಹ ಮತದಾರರು, ವಿಶೇಷವಾಗಿ ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ಅಲೆಮಾರಿ ಆದಿವಾಸಿಗಳು, ಅಲ್ಪಸಂಖ್ಯಾತರು ಹಾಗೂ ಬಡವರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವ ಅಪಾಯ ಎದುರಿಸುತ್ತಿದ್ದಾರೆ. ಬಂಗಾಳದಲ್ಲಿ ಜಾರಿಗೆ ತಂದ ‘ಲಾಜಿಕಲ್ ಡಿಸ್ಕ್ರೆಪೆನ್ಸಿ’ ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲೂ ಬಳಸಲು ತೀರ್ಮಾನಿಸಿರುವುದರಿಂದ ಒಂದು ಕೋಟಿಗಿಂತ ಹೆಚ್ಚು ಜನರಿಗೆ ನೋಟಿಸ್ ಜಾರಿಯಾಗುವ ಸಾಧ್ಯತೆ ಇದೆ. ಇದರಿಂದ ಜನರು ದಾಖಲೆಗಳನ್ನು ಜೋಡಿಸಲು ಪರದಾಡಬೇಕಾದ ಅರಾಜಕ ಪರಿಸ್ಥಿತಿ ನಿರ್ಮಾಣವಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಮತ ಕಾವಲು ಸಮಿತಿಯು ಐದು ಪ್ರಮುಖ ಗುರಿಗಳನ್ನು ಹೊಂದಿದೆ. ಜನರಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಪ್ರತಿದಿನ ಗ್ರೌಂಡ್ ರಿಪೋರ್ಟ್ ಸಂಗ್ರಹಿಸಿ ಅಧಿಕಾರಿಗಳ ಗಮನಕ್ಕೆ ತರುವುದು, ಜನರ ಗೊಂದಲಗಳಿಗೆ ಪರಿಹಾರ ಸೂಚಿಸಿ ನೋಂದಾವಣಿ ಪ್ರಕ್ರಿಯೆಗೆ ನೆರವಾಗುವುದು, ಸರ್ಕಾರ ಪ್ರಾರಂಭಿಸುವ ಹೆಲ್ಪ್‌ಡೆಸ್ಕ್ ಹಾಗೂ ಶಾಶ್ವತ ವಾಸ ಧೃಡೀಕರಣ ಪತ್ರ ವಿತರಣೆ ಪ್ರಕ್ರಿಯೆಯನ್ನು ನಿಗಾ ವಹಿಸುವುದು, ಪ್ರತಿ ಬೂತ್‌ನಲ್ಲಿರುವ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಿ ನೋಟಿಸ್ ಪಡೆದವರನ್ನು ಗುರುತಿಸಿ ನೆರವಾಗುವುದು ಮತ್ತು ಅರ್ಹ ಮತದಾರರ ರಕ್ಷಣೆಗಾಗಿ ವಿಶೇಷ ಗ್ರಾಮ/ವಾರ್ಡ್ ಸಭೆಗಳನ್ನು ಕರೆಯುವಂತೆ ಸರ್ಕಾರಕ್ಕೆ ಒತ್ತಡ ಹಾಕುವುದು.

ಈ ಗುರಿಗಳನ್ನು ಸಾಧಿಸಲು ಜುಲೈ 8ರಿಂದ 15ರವರೆಗೆ ರಾಜ್ಯ ಮಟ್ಟದಿಂದ ಬೂತ್ ಮಟ್ಟದ ತನಕ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. “ಪ್ರಜಾತಂತ್ರದ ಬುನಾದಿಯನ್ನು ಭದ್ರಗೊಳಿಸಲು ಈ ಅಭಿಯಾನದಲ್ಲಿ ಎಲ್ಲಾ ಜವಾಬ್ದಾರಿಯುತ ನಾಗರಿಕರು, ವಿಶೇಷವಾಗಿ ಯುವಕರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸ್ವಯಂಸೇವಕರಾಗಿ ಭಾಗವಹಿಸಲು ಬಯಸುವವರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬಹುದು ಅಥವಾ 96060 87560ಗೆ ಮಿಸ್ ಕಾಲ್ ನೀಡಬಹುದು” ಎಂದು ಬಾರ್ಮ್/ಸಿತಾರಾಮ್-ಎಎಡಿ ಮನವಿ ಮಾಡಿದರು.

Comments

Leave a Comment

Prev Post ಅಂಬೇಡ್ಕರ್ ಪ್ರತಿಮೆ ಅನಾವರಣ: “ಎಲ್ಲ ವರ್ಗಗಳ ನಾಯಕ, ಸಮಾನತೆಯ ಶಿಲ್ಪಿ” ಎಂದು ಸಿಎಂ ಶಿವಕುಮಾರ್
Next Post ಬಡವರು, ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯಲು ವಿರೋಧ ಪಕ್ಷಗಳ ಕುತಂತ್ರ: ಸಿಎಂ ಡಿ ಕೆ ಶಿವಕುಮಾರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News