PRABHAVAA.COM

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ಮಂಗಳವಾರ ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನ

Dakshina Kannada:

Font size:

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ಮಂಗಳವಾರ ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನ

From Jayram Udupi

ಸುಳ್ಯ/ದಕ್ಷಿಣ ಕನ್ನಡ:

ಭಾರತದಾದ್ಯಂತ 125ಕ್ಕೂ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿ ‘ಬ್ರಿಡ್ಜ್‌ಮ್ಯಾನ್ ಆಫ್ ಇಂಡಿಯಾ’ ಹಾಗೂ ‘ಸೇತುಬಂಧು’ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ಮಂಗಳವಾರ ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

1989ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ತಮ್ಮ ಮೊದಲ ತೂಗುಸೇತುವೆಯನ್ನು ನಿರ್ಮಿಸುವ ಮೂಲಕ ಸೇತುನಿರ್ಮಾಣ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದ ಡಾ. ಭಾರದ್ವಾಜ್, ದೇಶದ ವಿವಿಧ ರಾಜ್ಯಗಳ ಗ್ರಾಮೀಣ ಪ್ರದೇಶಗಳಲ್ಲಿ 125ಕ್ಕೂ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿದ್ದರು. ಕೇರಳದಲ್ಲಿ ಸುಮಾರು 30, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಎರಡು ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಅನೇಕ ಸೇತುವೆಗಳನ್ನು ನಿರ್ಮಿಸಿ ಸಾವಿರಾರು ಗ್ರಾಮಸ್ಥರ ಸಂಚಾರಕ್ಕೆ ನೆರವಾದ ಸಾಧಕರಾಗಿದ್ದರು.

ಗ್ರಾಮೀಣ ಅಭಿವೃದ್ಧಿ ಮತ್ತು ಜನಸೇವೆಯಲ್ಲಿನ ಅವರ ಅಪೂರ್ವ ಕೊಡುಗೆಯನ್ನು ಗುರುತಿಸಿ ಭಾರತ ಸರ್ಕಾರವು 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Comments

Leave a Comment

Prev Post ಕಿತ್ತೂರ ಕರ್ನಾಟಕದ ಅಲ್ಪಸಂಖ್ಯಾತರ ಪರವಾಗಿ – ಗೋಕಾಕದ ನಜೀರ ಅಹ್ಮದ್ ಶೇಖ ಸಾ. ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಮನವಿ"

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News