PRABHAVAA.COM

ರೈತರ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್: ಪರಿಹಾರದ ಚೆಕ್ ವಿತರಣೆ, ಸಾಂತ್ವನ

Belagavi:

Font size:

ರೈತರ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್: ಪರಿಹಾರದ ಚೆಕ್ ವಿತರಣೆ, ಸಾಂತ್ವನ

ರೈತರ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್: ಪರಿಹಾರದ ಚೆಕ್ ವಿತರಣೆ, ಸಾಂತ್ವನ

ಬೆಳಗಾವಿ

ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಹಾಗೂ ಆಕಸ್ಮಿಕವಾಗಿ ಸಾವನ್ನಪ್ಪಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಮಂಜೂರಾಗಿರುವ ಪರಿಹಾರಧನದ ಚೆಕ್‌ಗಳನ್ನು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ವಿತರಿಸಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಸರ್ಕಾರದ ಪರಿಹಾರ ಸೌಲಭ್ಯವನ್ನು ಶೀಘ್ರವಾಗಿ ಸಂತ್ರಸ್ತ ಕುಟುಂಬಗಳಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪರಿಹಾರದ ಚೆಕ್‌ಗಳನ್ನು ಹಸ್ತಾಂತರಿಸಿದ ಅವರು, ಕುಟುಂಬದ ಸದಸ್ಯರೊಂದಿಗೆ ಕೆಲಕಾಲ ಮಾತುಕತೆ ನಡೆಸಿ ಧೈರ್ಯ ತುಂಬಿದರು.
ಹಿಂಡಲಗಾ ಗ್ರಾಮದ ಅಶೋಕ ಮಾರುತಿ ಉಚಗಾಂವ್ಕರ್ ಅವರು ಆಕಸ್ಮಿಕವಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಲಾಯಿತು.
ಅರಳಿಕಟ್ಟಿ ಗ್ರಾಮದ ರೈತ ನೀಲಕಂಠ ಸಿದ್ದಪ್ಪ ಯಳ್ಳೂರ್ ಅವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಲಾಯಿತು.
ಅದೇ ರೀತಿ ಹಿರೇಬಾಗೇವಾಡಿ ಗ್ರಾಮದ ರೈತ ಈರಣಗೌಡ ಬಸನಗೌಡ ಹಾದಿಮನಿ ಅವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೂ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, "ಕುಟುಂಬದ ಆಧಾರಸ್ತಂಭವನ್ನು ಕಳೆದುಕೊಳ್ಳುವ ನೋವನ್ನು ಯಾವುದೇ ಪರಿಹಾರಧನ ಭರಿಸಲು ಸಾಧ್ಯವಿಲ್ಲ. ಆದರೆ ಇಂತಹ ಸಂಕಷ್ಟದ ಸಂದರ್ಭಗಳಲ್ಲಿ ಸರ್ಕಾರ ನಿಮ್ಮೊಂದಿಗಿದೆ ಎಂಬ ಭರವಸೆಯನ್ನು ನೀಡುವುದು ನಮ್ಮ ಕರ್ತವ್ಯ. ಸಂಕಷ್ಟದಲ್ಲಿರುವ ರೈತರ ಕುಟುಂಬಗಳಿಗೆ ಅಗತ್ಯ ನೆರವು ಹಾಗೂ ಸರ್ಕಾರಿ ಸೌಲಭ್ಯಗಳು ತಲುಪುವಂತೆ ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ," ಎಂದು ಹೇಳಿದರು.
ರಾಜ್ಯ ಸರ್ಕಾರ ರೈತರ ಕಲ್ಯಾಣಕ್ಕೆ ಅತ್ಯಂತ ಆದ್ಯತೆ ನೀಡಿದ್ದು, ರೈತರ ಕುಟುಂಬಗಳ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಸಂಕಷ್ಟದಲ್ಲಿರುವ ಯಾವುದೇ ರೈತ ಕುಟುಂಬ ಸರ್ಕಾರದ ನೆರವಿನಿಂದ ವಂಚಿತರಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಲಕ್ಷ್ಮೀತಾಯಿ ಫೌಂಡೇಶನ್‌ನಿಂದ ಭಾಗ್ಯಶ್ರೀ ಚಿಕಿತ್ಸೆಗೆ ಆರ್ಥಿಕ ನೆರವು
ಖಾನಾಪುರ ತಾಲೂಕಿನ ಲಾಲವಾಡಿ ಗ್ರಾಮದ ನಿವಾಸಿ ಜ್ಯೋತಿಬಾ ಉತ್ತೂರಕರ್ ಅವರ ಪುತ್ರಿ ಭಾಗ್ಯಶ್ರೀ ಅವರ ತುರ್ತು ಆರೋಗ್ಯ ಚಿಕಿತ್ಸೆಗೆ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವರು ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನೆರವಿನ ಚೆಕ್‌ ಅನ್ನು ಕುಟುಂಬದವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾಗ್ಯಶ್ರೀ ಅವರು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಿ ಆರೋಗ್ಯವಂತರಾಗಿ ಮರಳಲಿ ಎಂದು ಹಾರೈಸಿದರು. ಸಂಕಷ್ಟದ ಸಮಯದಲ್ಲಿ ಕುಟುಂಬದೊಂದಿಗೆ ನಿಲ್ಲುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಅಗತ್ಯವಿರುವವರಿಗೆ ನೆರವು ನೀಡುವ ಕಾರ್ಯವನ್ನು ಲಕ್ಷ್ಮೀತಾಯಿ ಫೌಂಡೇಶನ್ ನಿರಂತರವಾಗಿ ಮುಂದುವರಿಸಲಿದೆ ಎಂದು ತಿಳಿಸಿದರು.
ಈ ವೇಳೆ ಭಾಗ್ಯಶ್ರೀ ಅವರ ಪಾಲಕರು ಉಪಸ್ಥಿತರಿದ್ದು, ನೆರವಿಗಾಗಿ ಲಕ್ಷ್ಮೀತಾಯಿ ಫೌಂಡೇಶನ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

Comments

Leave a Comment

Prev Post ಉಪಜಾತಿಗಳ ಹೆಸರಿನಲ್ಲಿ ಛಿದ್ರವಾಗಿರುವ ಲಿಂಗಾಯತರಲ್ಲಿ ಆತ್ಮಾವಲೋಕನ ಅಗತ್ಯ: ಎಂ ಬಿ ಪಾಟೀಲ
Next Post ಅಂಗನವಾಡಿ ಕಾರ್ಯಕರ್ತೆಯರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ (BLO) ನೇಮಕ ಮಾಡುವುದನ್ನು ವಿರೋಧಿಸಿ ಐಎಫ್‌ಟಿಯು ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News