ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ: ವಿಜಯೇಂದ್ರ

Bengaluru Urban:

Font size:

ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ: ವಿಜಯೇಂದ್ರ

ಬೆಂಗಳೂರು: ಸ್ವತಃ ಕರ್ನಾಟಕ ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರು ಈ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ಬೇಸತ್ತು ಸದನದಿಂದ ಹೊರನಡೆದಿರುವುದು ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರು ಈ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ಬೇಸತ್ತು ಸದನದಿಂದ ಹೊರನಡೆದಿರುವುದು ರಾಜ್ಯದಲ್ಲಿ ಆಡಳಿತ ಯಂತ್ರ ಎಷ್ಟು ನಿಷ್ಕ್ರಿಯಗೊಂಡಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಲಾಗದಷ್ಟು ಅಸಮರ್ಥವಾಗಿರುವ ಕಾಂಗ್ರೆಸ್ ಪಕ್ಷದ ಕರ್ನಾಟಕ ಸರಕಾರವು ಶಾಸನಸಭೆಗೆ ಕನಿಷ್ಠ ಗೌರವವನ್ನೂ ನೀಡದೆ ತನ್ನದೇ ರಾಜಕೀಯದಲ್ಲಿ ಮುಳುಗಿದೆ ಎಂದು ಆಕ್ಷೇಪಿಸಿದ್ದಾರೆ.
ಸನ್ಮಾನ್ಯ ಸಭಾಧ್ಯಕ್ಷರು ಈಗಾಗಲೇ ನಾಲ್ಕು ಬಾರಿ ಎಚ್ಚರಿಕೆ ನೀಡಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು, ಸದನದಲ್ಲಿ ಸಭಾಧ್ಯಕ್ಷರ ಎಚ್ಚರಿಕೆಗೆ ಕವಡೆ ಕಾಸಿನ ಕಿಮ್ಮತ್ತನ್ನೂ ಕೂಡ ನೀಡುತ್ತಿಲ್ಲ. ಇದಕ್ಕೆ ಪೂರಕ ಎನ್ನುವಂತೆ ಸರ್ಕಾರದ ಅಧಿಕಾರಿಗಳು ಕೂಡ ಅಸಡ್ಡೆ ತೋರುತ್ತಿದ್ದಾರೆ. ಕಾಂಗ್ರೆಸ್ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಸಂವಿಧಾನದ ಆಶಯಗಳು ಜೀವಂತವಾಗಿವೆಯೇ ಎಂದು ಶಾಸಕರು ಮಾತ್ರವಲ್ಲ, ಜನರು ಕೂಡ ಕೇಳುವಂತಾಗಿದೆ. ಈ ಭ್ರಷ್ಟ ಕಾಂಗ್ರೆಸ್ ಸರ್ಕಾರ ತನ್ನ ನಿಷ್ಕ್ರಿಯತೆಯಿಂದ ಕೇವಲ ಸಭಾಧ್ಯಕ್ಷರ ಪೀಠಕ್ಕೆ ಅವಮಾನ ಮಾಡುತ್ತಿಲ್ಲ, ಇದು ನಮ್ಮ ಪ್ರಜಾಪ್ರಭುತ್ವದ ದೇಗುಲಕ್ಕೆ ಮತ್ತು ರಾಜ್ಯದ 7 ಕೋಟಿ ಜನತೆಗೆ ಮಾಡಿದ ದ್ರೋಹ ಎಂದು ಟೀಕಿಸಿದ್ದಾರೆ.

ಜನರ ಸಮಸ್ಯೆಗಳಿಗೆ ಉತ್ತರಿಸಲಾಗದ ಈ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ. ಸಚಿವರು ಸದನಕ್ಕೆ ಬರುವುದಿಲ್ಲ, ಬಂದರೂ ಉತ್ತರ ತರುವುದಿಲ್ಲ. ಈ 'ಅಹಂಕಾರದ ಆಡಳಿತ' ನೋಡಿ ಶಾಸಕರಿರಲಿ, ಸಭಾಧ್ಯಕ್ಷರೇ ಬೇಸತ್ತಿದ್ದಾರೆ. ಈಗ ಮುಖ್ಯಮಂತ್ರಿಗಳು ಕೇವಲ ಸಂಧಾನ ಸಭೆ ನಡೆಸಿದರೆ ಸಾಲದು, ತಮ್ಮ ಸಚಿವರ ಅಶಿಸ್ತಿಗೆ ಜನತೆಯ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಶಾಸಕಾಂಗವೇ ಸರ್ವೋಚ್ಚ, ಆದರೆ ಇಲ್ಲಿ ಕಾಯಾರ್ಂಗವು ಶಾಸಕಾಂಗಕ್ಕೆ ನೀಡುತ್ತಿರುವ ಅಗೌರವಕ್ಕೆ ಈ ಕಾಂಗ್ರೆಸ್ ಸರ್ಕಾರವೇ ಹೊಣೆ. ಈ ರಾಜ್ಯ ಸರ್ಕಾರವು ಈಗಲಾದರೂ ತನ್ನ ಕುಂಭಕರ್ಣ ನಿದ್ರೆಯಿಂದ ಎಚ್ಚೆತ್ತು ಲಿಖಿತ ಉತ್ತರಗಳನ್ನು ನೀಡಲಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರ ಪೀಠದ ಘನತೆಯನ್ನು ಎತ್ತಿ ಹಿಡಿಯಲಿ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡದೆ ಸದನಕ್ಕೆ ಅಗೌರವ ತಂದಿರುವಂತಹ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ, ಇವರ ಕೆಟ್ಟ ಆಡಳಿತದ ವಿರುದ್ಧ ನಮ್ಮ ಹೋರಾಟ ನಿಲ್ಲದು ಎಂದು ಎಚ್ಚರಿಸಿದ್ದಾರೆ.

Comments

Leave a Comment

Prev Post ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ ಟಿ.ಎಸ್. ಕರಿಬಸಯ್ಯ ಪುತ್ಥಳಿ ಅನಾವಣಗೊಳಿಸಿ, ವಜ್ರಮಹೋತ್ಸವ ಆಚರಿಸಬೇಕು : ಕಲಾ ಕಂಠೀರವ ದಿ. ಟಿ.ಎಸ್. ಕರಿಬಸಯ್ಯ ಸೇವಾ ಟ್ರಸ್ಟ್ ಆಗ್ರಹ
Next Post ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಪ್ರಸ್ತಾವಿತ ಜಾಗ ಪರಿಶೀಲಿಸಿದ ARAI ಅಧಿಕಾರಿಗಳು ಬಸರಾಳು ಸಮೀಪದ 110 ಎಕರೆ ಸರಕಾರಿ ಭೂಮಿ ವೀಕ್ಷಣೆ; ಜಿಲ್ಲಾಧಿಕಾರಿ ಜತೆ ತಂಡದ ಸಮಾಲೋಚನೆ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News