PRABHAVAA.COM

ಆ.15ರೊಳಗೆ 5927 ಗ್ರಾ.ಪಂ.ಗಳಿಗೆ ಮಹಾತ್ಮಾಗಾಂಧಿ ಹೆಸರು: ಈಶ್ವರ ಖಂಡ್ರೆ

Bengaluru Urban:

Font size:

ಆ.15ರೊಳಗೆ 5927 ಗ್ರಾ.ಪಂ.ಗಳಿಗೆ ಮಹಾತ್ಮಾಗಾಂಧಿ ಹೆಸರು: ಈಶ್ವರ ಖಂಡ್ರೆ

ಬೆಂಗಳೂರು, ಜು.14: ಆಗಸ್ಟ್ 15ರ ಸ್ವಾತಂತ್ರ್ಯದಿನದೊಳಗೆ ರಾಜ್ಯದ ಎಲ್ಲ 5927 ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾ ಗಾಂಧೀ .... ಪಂಚಾಯತಿ ಎಂದು ನಾಮಕರಣ ಮಾಡಲು ಗಡುವು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಇಲಾಖೆಯ ಆಯುಕ್ತಾಲಯದಲ್ಲಿಂದು ಪಿಡಿಓ, ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆ ಕೌನ್ಸಲಿಂಗ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟ್ರಪಿತ ಮಹಾತ್ಮಾ ಗಾಂಧೀ ಹೆಸರನ್ನು ಚಿರಸ್ಥಾಯಿಗೊಳಿಸಲು 2026-27ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 279ರಲ್ಲಿ ಘೋಷಣೆ ಮಾಡಿರುವಂತೆ ಎಲ್ಲ ಪಂಚಾಯ್ತಿಗಳ ಹೆಸರು ಬದಲಾವಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.
ಯುಪಿಎ ಕಾರ್ಯಕಾಲದಲ್ಲಿ ಗ್ರಾಮ ಸ್ವರಾಜ್ಯದ ಪ್ರತಿಪಾದಕರಾಗಿದ್ದ ರಾಷ್ಟ್ರಪಿತ ಗಾಂಧೀ ಗೌರವಾರ್ಥ ಮಹಾತ್ಮಾಗಾಂಧೀ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ -ಮನ್ರೇಗಾ ಎಂದು ಹೆಸರಿಡಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಜುಲೈ 1ರಿಂದ ಜಾರಿಗೆ ತಂದಿರುವ ವಿ ಬಿ ಜಿ ರಾಮ್ ಜಿಯಲ್ಲಿ ಮಹಾತ್ಮಾ ಗಾಂಧೀ ಹೆಸರನ್ನೇ ತೆಗೆದು ಹಾಕಿದೆ. ಹೀಗಾಗಿ ರಾಜ್ಯ ಸರ್ಕಾರ ಎಲ್ಲ ಪಂಚಾಯತಿಗಳಿಗೆ ಗಾಂಧೀ ಹೆಸರಿಡಲು ತೀರ್ಮಾನಿಸಿದೆ ಎಂದರು.
ತಾವು ಕಳೆದ ತಿಂಗಳು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲ ರಾಜ್ಯಗಳ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಸಮಾವೇಶದಲ್ಲಿ ದೇಶದಲ್ಲಿರುವ ಎಲ್ಲ 2.68 ಕೋಟಿ ಗ್ರಾಮ ಪಂಚಾಯತಿಗಳಿಗೂ ಮಹಾತ್ಮಾ ಗಾಂಧೀ ಹೆಸರಿಡುವಂತೆ ಆಗ್ರಹಿಸಿದ್ದಾಗಿ ತಿಳಿಸಿದರು.
ಅದೇ ರೀತಿ ವಿ ಬಿ ಜಿ ರಾಮ್ ಜಿ ಹೆಸರಿನ ಮುಂದೆ ಗಾಂಧೀ ಹೆಸರಿಟ್ಟು ಮಹಾತ್ಮಾ ಗಾಂಧೀ ವಿಬಿಜಿ ರಾಮ್ ಜಿ ಎಂದು ಮರು ನಾಮಕರಣ ಮಾಡುವಂತೆ ಒತ್ತಾಯಿಸಿದ್ದಾಗಿಯೂ ಈಶ್ವರ ಖಂಡ್ರೆ ತಿಳಿಸಿದರು.

Comments

Leave a Comment

Prev Post ಮಂಗಳೂರು ನಗರದಲ್ಲಿ ಬಾಂಗ್ಲಾದೇಶಿ ಅಕ್ರಮ ವಲಸೆ ಜಾಲ ಭೇದನೆ – ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳು ಬಂಧನ
Next Post ಕರ್ನಾಟಕ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ (KN:1994) ವಿರುದ್ಧ ನಡೆದಿದ್ದ ವಿಭಾಗೀಯ ವಿಚಾರಣೆ ಪ್ರಕ್ರಿಯೆಯನ್ನು ಅಧಿಕೃತವಾಗಿ ಮುಕ್ತಾಯಗೊಳಿಸಿದೆ.

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News