ಬೆಂಗಳೂರಿನಿಂದ ಬೀದರ್, ಕಲಬುರಗಿಗೆ ವಿಮಾನಸೇವೆ, 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ: ಎಂ ಬಿ ಪಾಟೀಲ

:

Font size:

ಬೆಂಗಳೂರಿನಿಂದ ಬೀದರ್, ಕಲಬುರಗಿಗೆ ವಿಮಾನಸೇವೆ, 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ: ಎಂ ಬಿ ಪಾಟೀಲ

ಬೆಂಗಳೂರು:

ರಾಜಧಾನಿಯಿಂದ ಬೀದರ್ ಮತ್ತು ಕಲಬುರಗಿಗೆ ವೈಮಾನಿಕ ಸೇವೆ ಆರಂಭಿಸುವ ಬಗ್ಗೆ ವಿಮಾನಯಾನ ಸಂಸ್ಥೆಗಳು ಇದೇ 23ರೊಳಗೆ ತಮ್ಮ ಪ್ರಸ್ತಾವನೆ ಸಲ್ಲಿಸಬೇಕು. ಇದರ ಬಗ್ಗೆ ಮುಂದಿನ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಈ ಸಂಬಂಧ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸೋಮವಾರ ವಿವಿಧ ವಿಮಾನಯಾನ ಸಂಸ್ಥೆಗಳೊಂದಿಗೆ ಅವರು ತಮ್ಮ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ರಹೀಂಖಾನ್ ಮತ್ತು ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ (ಕೆ.ಕೆ.ಆರ್.ಡಿ.ಬಿ) ಅಧ್ಯಕ್ಷ ಡಾ.ಅಜೇಯ್ ಸಿಂಗ್ ಭಾಗವಹಿಸಿದ್ದರು.

ಈ ಬಗ್ಗೆ ಮಾತನಾಡಿರುವ ಸಚಿವ ಎಂ ಬಿ ಪಾಟೀಲ, `ಕಲಬುರಗಿ ವಿಮಾನ ನಿಲ್ದಾಣದಿಂದ ಈಗ ವಿಮಾನಸೇವೆ ಸ್ತಬ್ಧವಾಗಿದೆ. ಬೀದರಿನಲ್ಲಿ ಕೆ.ಕೆ.ಆರ್.ಡಿ.ಬಿ ನೆರವಿನಿಂದ ದಿನಕ್ಕೆ ಒಂದು ವಿಮಾನ ಮಾತ್ರ ಸಂಚರಿಸುತ್ತಿದೆ. ಕೇಂದ್ರ ಸರಕಾರವು ಪ್ರಾದೇಶಿಕ ಮಟ್ಟದಲ್ಲಿ ವಿಮಾನಯಾನ ಉತ್ತೇಜಿಸಲು ಉಡಾನ್ ಯೋಜನೆ ಮೂಲಕ ಮೂರು ವರ್ಷ ನೆರವು ನೀಡಿತು. ಆ ಅವಧಿ ಮುಗಿದ ನಂತರ ಹೀಗಾಗುತ್ತಿದೆ. ಕಲಬುರಗಿಯಲ್ಲಿ 742 ಎಕರೆಯಲ್ಲಿ ವಿಮಾನ ನಿಲ್ದಾಣವಿದೆ. ಇಂದಿನ ಸಭೆಯಲ್ಲಿ ವೈಮಾನಿಕ ಸೇವೆ ಎಷ್ಟರ ಮಟ್ಟಿಗೆ ಕಾರ್ಯಸಾಧು, ವಿಮಾನ ನಿಲ್ದಾಣಗಳ ಪ್ರಾಧಿಕಾರ ಎರಡೂ ಕಡೆ ಒದಗಿಸಿರುವ ಸೌಲಭ್ಯಗಳು ಮುಂತಾದವನ್ನು ಚರ್ಚಿಸಲಾಯಿತು’ ಎಂದಿದ್ದಾರೆ.

ಕಲಬುರಗಿಯಲ್ಲಿ ರಾತ್ರಿ ವೇಳೆ ವಿಮಾನ ನಿಲ್ಲಿಸುವ ಸೌಲಭ್ಯ ಸೇರಿದಂತೆ ಎಲ್ಲ ಬಗೆಯ ವಿಮಾನಗಳು ಬಂದಿಳಿಯಲು ಅನುಕೂಲವಿದೆ. ಅಲ್ಲಿಂದ ಬೆಂಗಳೂರು ಮತ್ತು ಉಳಿದ ಅನೇಕ ರಾಜ್ಯಗಳಿಗೆ ದಿನನಿತ್ಯದ ವಿಮಾನಸೇವೆ ಆರಂಭಿಸಬಹುದು ಎಂದು ವಿಮಾನ ಸಂಸ್ಥೆಗಳು ಹೇಳಿವೆ. ಮತ್ತೊಂದು ವಿಮಾನ ಸಂಸ್ಥೆಯು ನಿತ್ಯವೂ ಬೆಂಗಳೂರಿನಿಂದ ಬೆಳಿಗ್ಗೆ ಹೊತ್ತು ಬೀದರಿಗೆ ಮತ್ತು ಸಂಜೆ ಕಲಬುರಗಿಗೆ ವಿಮಾನಸೇವೆ ಆರಂಭಿಸಲು ಯೋಚಿಸುತ್ತಿರುವುದಾಗಿ ಹೇಳಿದೆ. ಜೊತೆಗೆ ಬೆಂಗಳೂರು-ಕಲಬುರಗಿ-ಹೈದರಾಬಾದ್-ಬೆಂಗಳೂರು ಮಾರ್ಗವಾಗಿ ಸೇವೆ ಆರಂಭಿಸುವ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಮುಖ್ಯವಾಗಿ, ವಿಮಾನಯಾನ ಸಂಸ್ಥೆಗಳು ವಿಮಾನಸೇವೆ ವಾಣಿಜ್ಯ ದೃಷ್ಟಿಯಿಂದ ಎಷ್ಟು ಲಾಭದಾಯಕ ಎನ್ನುವುದನ್ನು ನೋಡುತ್ತವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನಯಾನ ಸೇವೆ ಲಭ್ಯವಾದರೆ ಆರ್ಥಿಕ ಚಟುವಟಿಕೆಗಳು ಗರಿಗೆದರಬಹುದು ಎನ್ನುವ ಲೆಕ್ಕಾಚಾರವಿದೆ ಎಂದು ಪಾಟೀಲ ನುಡಿದಿದ್ದಾರೆ.

ಇಂಡಿಗೋ, ಏರ್ ಇಂಡಿಯಾ, ಅಲಯನ್ಸ್ ಏರ್, ಸ್ಟಾರ್ ಏರ್, ಆಕಾಶ ಏರ್ ಸಂಸ್ಥೆಯ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಆರ್.ವಿಶಾಲ್ ಹಾಗೂ ಕೆಎಸ್ ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್ ಚೌಧರಿ ಭಾಗವಹಿಸಿದ್ದರು.

Comments

Leave a Comment

Prev Post ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ಮನೆ ಬಾಗಿಲಿಗೆ ಬರುತ್ತದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Next Post ವಿಧಾನಸಭೆಯಲ್ಲಿ 2026ನೇ ಸಾಲಿನ ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕ ಅಂಗೀಕಾರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News