PRABHAVAA.COM

ದೇಶಾದ್ಯಂತ 1275 ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ ಯೋಜನೆ ರೂಪಿಸಿದೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

:

Font size:

ದೇಶಾದ್ಯಂತ 1275 ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ ಯೋಜನೆ ರೂಪಿಸಿದೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

ದೇಶಾದ್ಯಂತ 1275 ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ ಯೋಜನೆ ರೂಪಿಸಿದೆ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ
* ಅಮೃತ್ ಭಾರತ್ ಯೋಜನೆಯಲ್ಲಿ ನವೀಕರಣಗೊಂಡ ಅಳ್ನಾವರ ರೈಲು ನಿಲ್ದಾಣ ಲೋಕಾರ್ಪಣೆ
* ₹17.20 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕವಾಗಿ ರೂಪುಗೊಂಡ ನಿಲ್ದಾಣ
* ಪ್ರಧಾನಿ ನರೇಂದ್ರ ಮೋದಿ ಅವರಿಂದ ವರ್ಚುವಲ್ ಮೂಲಕ ರಾಜ್ಯದ 4 ಪ್ರಮುಖ ರೈಲು ನಿಲ್ದಾಣಗಳ ಉದ್ಘಾಟನೆ

ಅಳ್ನಾವರ: "ದೇಶಾದ್ಯಂತ ಒಟ್ಟು 1275 ರೈಲ್ವೆ ನಿಲ್ದಾಣಗಳನ್ನು ಅಮೃತ್ ಭಾರತ್ ಯೋಜನೆಯಡಿ ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದೆ" ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದರು.

ಅಮೃತ್ ಭಾರತ ಯೋಜನೆಯಡಿ ಅತ್ಯಾಧುನಿಕವಾಗಿ ನವೀಕರಣಗೊಂಡ ನೈರುತ್ಯ ರೈಲ್ವೆ ವಲಯದ ಅಳ್ನಾವರ ರೈಲ್ವೆ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಸಚಿವರು, ಅಮೃತ್ ಭಾರತ್ ರೈಲು ನಿಲ್ದಾಣಗಳ ಯೋಜನೆ ಭಾಗವಾಗಿ ಈಗಾಗಲೇ 261 ನಿಲ್ದಾಣಗಳನ್ನು ಜಾಗತಿಕ ಗುಣಮಟ್ಟಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಿದೆ ಎಂದು ಹೇಳಿದರು.

ರಾಜ್ಯದಲ್ಲಿನ ನಾಲ್ಕು ರೈಲು ನಿಲ್ದಾಣಗಳು ಸೇರಿದಂತೆ ದೇಶದ ಒಟ್ಟಾರೆ 75 ಅಮೃತ್ ಭಾರತ ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿರುವುದು ಭಾರತದ ವೇಗದ ಬೆಳವಣಿಗೆಗೆ ನಿದರ್ಶನವಾಗಿದೆ ಎಂದು ಜೋಶಿ ಬಣ್ಣಿಸಿದರು.

ದೇಶದ 75 ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ಅವರು ಪಂಜಾಬ್‌ನ ಜಲಂಧರ್ ಕಂಟೋನ್‌ಮೆಂಟ್ ರೈಲ್ವೆ ನಿಲ್ದಾಣದಲ್ಲಿ ವರ್ಚುವಲ್‌ ಕಾರ್ಯಕ್ರಮದ ಮೂಲಕ ಲೋಕಾರ್ಪಣೆ ಮಾಡಿದ್ದು, ರೈಲ್ವೆ ವಲಯಕ್ಕೆ ಉತ್ತೇಜನ ನೀಡುತ್ತ ದೇಶವನ್ನು ಅಭಿವೃದ್ಧಿ ಪರ್ವದತ್ತ ಕೊಂಡೊಯ್ಯುತ್ತಿದ್ದಾರೆ ಎಂದರು.

ಕರ್ನಾಟಕದ ಅಳ್ನಾವರ, ಬಾದಾಮಿ, ಕೊಪ್ಪಳ, ಬಂಟ್ವಾಳ ರೈಲ್ವೆ ನಿಲ್ದಾಣಗಳು ಇಂದು ಅಮೃತ್ ಭಾರತ ಯೋಜನೆಯಡಿ ಪುನರಾಭಿವೃದ್ಧಿಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸುರಕ್ಷಿತ, ಸುಸ್ಥಿರ ಸಂಚಾರ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ ಎಂದರು.

ಅಳ್ನಾವರ ನಿಲ್ದಾಣಕ್ಕೆ ₹17.20 ಕೋಟಿ: ಅಮೃತ್ ಸ್ಟೇಷನ್ ಯೋಜನೆಯಡಿ ಅಳ್ನಾವರ ರೈಲು ನಿಲ್ದಾಣವನ್ನು ‎₹17.20 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿಗೊಳಿಸಿದ್ದು, ಹೊಸ ಬುಕಿಂಗ್ ಕೇಂದ್ರ, ಅತ್ಯಾಧುನಿಕ ನಿರೀಕ್ಷಣಾ ಸಭಾಂಗಣ, ನವೀಕರಿಸಿದ ಶೌಚಾಲಯಗಳು, ಪ್ಲಾಟ್‌ಫಾರ್ಮ್‌ 1 ಮತ್ತು 2ಕ್ಕೆ ನೂತನ ಶೆಲ್ಟರ್‌ಗಳು, ಸುಧಾರಿತ ಪಾರ್ಕಿಂಗ್ ಹಾಗೂ ಸಂಚಾರ ವ್ಯವಸ್ಥೆ, ಆಕರ್ಷಕ ಪ್ರವೇಶ ದ್ವಾರಗಳನ್ನು ನಿರ್ಮಿಸಲಾಗಿದೆ.

₹7 ಕೋಟಿ ವೆಚ್ಚದ 12 ಮೀಟರ್ ಪಾದಚಾರಿ ಮೇಲ್ಸೇತುವೆ, ಎರಡು ಲಿಫ್ಟ್‌ಗಳು, LED ಮಾಹಿತಿ ಫಲಕ, PA ಸಿಸ್ಟಮ್ ಹಾಗೂ ಆಧುನಿಕ ಬೆಳಕಿನ ವ್ಯವಸ್ಥೆಗಳನ್ನು ಕಲ್ಪಿಸುವ ಮೂಲಕ ಅಳ್ನಾವರ ನಿಲ್ದಾಣಕ್ಕೆ ಜಾಗತಿಕ ಸ್ಪರ್ಶ ನೀಡಲಾಗಿದೆ ಎಂದರು.

ನಮ್ಮ ರಾಜ್ಯದ 4 ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರಿಗೆ ರಾಜ್ಯದ ಜನರ ಪರವಾಗಿ ಅನಂತ ಧನ್ಯವಾದಗಳನ್ನು ಅರ್ಪಿಸಿದರು ಸಚಿವ ಪ್ರಲ್ಹಾದ ಜೋಶಿ.

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ರೈಲ್ವೆ ಇಲಾಖೆ ಜನರಲ್ ಮ್ಯಾನೇಜರ್ ಪಿ. ಅನಂತ, ಜಿಲ್ಲಾಧಿಕಾರಿ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತದ‌ ಅಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Comments

Leave a Comment

Prev Post ಕರ್ನಾಟಕದಲ್ಲಿ 253 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ
Next Post ಸಚಿವ ಸಂಪುಟ ವಿಸ್ತರಣೆ; ವರಿಷ್ಠರಿಂದ ಸೂಕ್ತ ಮಾರ್ಗದರ್ಶನ ಪಡೆದು ಸಿದ್ಧತೆ: ಸಿಎಂ ಡಿ ಕೆ ಶಿವಕುಮಾರ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News