PRABHAVAA.COM

ಸಚಿವ ಸಂಪುಟ ವಿಸ್ತರಣೆ; ವರಿಷ್ಠರಿಂದ ಸೂಕ್ತ ಮಾರ್ಗದರ್ಶನ ಪಡೆದು ಸಿದ್ಧತೆ: ಸಿಎಂ ಡಿ ಕೆ ಶಿವಕುಮಾರ್

:

Font size:

ಗ್ರಾಮ ಪಂಚಾಯಿತಿಯಿಂದ ಕಾರ್ಪೊರೇಷನ್ ವರೆಗೆ ಈ ಬಾರಿ ಯುವಕರಿಗೆ ಹಾಗೂ ಹೊಸಬರಿಗೆ ಅವಕಾಶ ಡಿಸೆಂಬರ್ ಅಂತ್ಯದೊಳಗೆ ಜಿಬಿಎ, ಮಾರ್ಚ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ

ಸಚಿವ ಸಂಪುಟ ವಿಸ್ತರಣೆ; ವರಿಷ್ಠರಿಂದ ಸೂಕ್ತ ಮಾರ್ಗದರ್ಶನ ಪಡೆದು ಸಿದ್ಧತೆ: ಸಿಎಂ ಡಿ ಕೆ ಶಿವಕುಮಾರ್

ಗ್ರಾಮ ಪಂಚಾಯಿತಿಯಿಂದ ಕಾರ್ಪೊರೇಷನ್ ವರೆಗೆ ಈ ಬಾರಿ ಯುವಕರಿಗೆ ಹಾಗೂ ಹೊಸಬರಿಗೆ ಅವಕಾಶ

ಡಿಸೆಂಬರ್ ಅಂತ್ಯದೊಳಗೆ ಜಿಬಿಎ, ಮಾರ್ಚ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ

ನವದೆಹಲಿ, ಜುಲೈ 17:

"ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು ಶನಿವಾರ ಭೇಟಿ ಮಾಡಲಾಗುವುದು. ವರಿಷ್ಠರಿಂದ ಮಾರ್ಗದರ್ಶನ ಪಡೆದು ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಹಳೇ ಕಚೇರಿ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಮಾರ್ಚ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ

“ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಿಂದಾಗಿ ಜಿಬಿಎ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಡಿಸೆಂಬರ್ 31 ರವರೆಗೆ ಕಾಲಾವಕಾಶವನ್ನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಇಂದು ಸುಪ್ರೀಂ ಕೋರ್ಟ್ ಕಾಲಾವಕಾಶವನ್ನು ವಿಸ್ತರಿಸಿದೆ. ಜಿಬಿಎ ಚುನಾವಣೆಯಲ್ಲದೇ ಮಾರ್ಚ್ ಅಂತ್ಯದೊಳಗೆ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿ ಚುನಾವಣೆಗಳನ್ನು ನಡೆಸಲಾಗುವುದು” ಎಂದು ತಿಳಿಸಿದರು.

ಚುನಾವಣೆಯಲ್ಲಿ ಯುವಕರಿಗೆ ಅವಕಾಶ

“ಗ್ರಾಮ ಪಂಚಾಯಿತಿಯಿಂದ ಕಾರ್ಪೊರೇಷನ್ ವರೆಗೆ ಈ ಬಾರಿಯ ಚುನಾವಣೆಯಲ್ಲಿ ಯುವಕರಿಗೆ ಹಾಗೂ ಹೊಸ ಮುಖಗಳಿಗೆ ಅವಕಾಶ ನೀಡಲಾಗುವುದು. ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಲು ಮತ್ತು ಅಧಿಕಾರ ವಿಕೇಂದ್ರೀಕರಣವನ್ನು ತರಲು ಸಂವಿಧಾನಕ್ಕೆ ಮಾಡಲಾದ 73 ನೇ ಮತ್ತು 74 ನೇ ತಿದ್ದುಪಡಿಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.

ಎಐಸಿಸಿ ಕಚೇರಿ ನಮ್ಮ ದೇವಾಲಯ

“ಎಐಸಿಸಿ ಕಚೇರಿ ನಮಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ದೇವಾಲಯವಿದ್ದಂತೆ. ನಾವು ಅದರೊಂದಿಗೆ ಬೆಳೆದಿದ್ದೇವೆ. ನಮ್ಮ ಪಕ್ಷದ ಕಾರ್ಯದರ್ಶಿಯನ್ನು ದೇವಾಲಯದಲ್ಲಿಯೇ ಭೇಟಿಯಾಗುವುದು ನಮ್ಮ ಕರ್ತವ್ಯವಾಗಿದೆ” ಎಂದರು.

Comments

Leave a Comment

Prev Post ದೇಶಾದ್ಯಂತ 1275 ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ ಯೋಜನೆ ರೂಪಿಸಿದೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News