ವಿಧಾನಸಭೆಯಲ್ಲಿ 2026ನೇ ಸಾಲಿನ ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕ ಅಂಗೀಕಾರ

:

Font size:

ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಿಗೆ ನಿಗದಿತ ಸಮಯಕ್ಕೆ ಉತ್ತರ ಒದಗಿಸದವರ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ-ಡಾ: ಜಿ.ಪರಮೇಶ್ವರ

ವಿಧಾನಸಭೆಯಲ್ಲಿ 2026ನೇ ಸಾಲಿನ ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕ ಅಂಗೀಕಾರ
ಬೆಂಗಳೂರು, ಮಾರ್ಚ್ 16

2026ನೇ ಸಾಲಿನ ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕವನ್ನು ಗೃಹ ಸಚಿವ ಡಾ: ಜಿ.ಪರಮೇಶ್ವರ್ ಅವರು ಪರ್ಯಾಲೋಚಿಸಿ ಅಂಗೀಕರಿಸಬೇಕೆಂದು ಕೋರಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಅತ್ಯಂತ ಪ್ರಮುಖವಾದ 'ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕ, 2026' ಅನ್ನು ಮಂಡಿಸಿದರು
ಈ ವಿಧೇಯಕದ ಪ್ರಮುಖ ಅಂಶಗಳು :
ವರ್ಗಾವಣೆ ಅಧಿಕಾರದಲ್ಲಿ ಬದಲಾವಣೆ
ಈ ವಿಧೇಯಕದ ಮುಖ್ಯ ಉದ್ದೇಶವೆಂದರೆ, ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ತಮ್ಮ ಕೆಳಗಿನ ಅಧಿಕಾರಿಗಳ ಮೇಲೆ ಹೆಚ್ಚಿನ ಶಿಸ್ತಿನ ನಿಯಂತ್ರಣವನ್ನು ನೀಡುವುದು.
ಡೈರೆಕ್ಟ್ ಆಕ್ಷನ್: ಕರ್ತವ್ಯ ಲೋಪ, ದುರ್ನಡತೆ ಅಥವಾ ಅಶಿಸ್ತು ತೋರುವ ಡಿವೈಎಸ್ಪಿ (DySP) ಶ್ರೇಣಿಯವರೆಗಿನ ಅಧಿಕಾರಿಗಳನ್ನು ಸರ್ಕಾರದ ಪೂರ್ವಾನುಮತಿಗಾಗಿ ಕಾಯದೆ ನೇರವಾಗಿ ವರ್ಗಾವಣೆ ಮಾಡುವ ಅಧಿಕಾರವನ್ನು ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಬೋರ್ಡ್ (PEB) ಗೆ ನೀಡಲು ಉದ್ದೇಶಿಸಲಾಗಿದೆ.
ಕನಿಷ್ಠ ಅವಧಿಯ ವಿನಾಯಿತಿ: ಈ ಮೊದಲು ಯಾವುದೇ ಅಧಿಕಾರಿಯನ್ನು ವರ್ಗಾಯಿಸಲು ಕನಿಷ್ಠ ಎರಡು ವರ್ಷಗಳ ಕಾಲಾವಕಾಶ ಇರಬೇಕಿತ್ತು. ಆದರೆ ಹೊಸ ತಿದ್ದುಪಡಿಯ ಪ್ರಕಾರ, ಗಂಭೀರ ಲೋಪಗಳು ಕಂಡುಬಂದಲ್ಲಿ ಈ ಕನಿಷ್ಠ ಅವಧಿಯ ನಿಯಮ ಅನ್ವಯಿಸುವುದಿಲ್ಲ.
ವಿಧೇಯಕದ ಉದ್ದೇಶಗಳು ಶಿಸ್ತು ಪಾಲನೆ :
ಇಲಾಖೆಯಲ್ಲಿ ಪಾರದರ್ಶಕತೆ ತರುವುದು ಮತ್ತು ಭ್ರಷ್ಟಾಚಾರ ಅಥವಾ ಕರ್ತವ್ಯದ ನಿರ್ಲಕ್ಷ್ಯವನ್ನು ತಡೆಯುವುದು.
ರಾಜಕೀಯ ಹಸ್ತಕ್ಷೇಪಕ್ಕೆ ಬ್ರೇಕ್:
ವರ್ಗಾವಣೆ ಪ್ರಕ್ರಿಯೆಯನ್ನುಲ ಸಂಪೂರ್ಣವಾಗಿ ಇಲಾಖೆಯ ಉನ್ನತ ಮಟ್ಟದ ಸಮಿತಿಯ (PEB) ಸುಪರ್ದಿಗೆ ನೀಡುವುದರಿಂದ ರಾಜಕೀಯ ಪ್ರಭಾವವನ್ನು ಕಡಿಮೆ ಮಾಡುವುದು.

ಸಾರ್ವಜನಿಕ ಸಂಬಂಧ: ಪೊಲೀಸ್ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಉತ್ತಮ ಸಂಬಂಧ ಹೊಂದಲು ಮತ್ತು ಅಪರಾಧ ತಡೆಗಟ್ಟುವಿಕೆಯಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಲು ಈ ಕ್ರಮ ಪೂರಕವಾಗಲಿದೆ ಎಂದು ಸಚಿವರು ತಿಳಿಸಿದರು.
ಚರ್ಚೆಯ ನಂತರ ವಿಧೇಯಕವು ಒಮ್ಮತದಿಂದ ಅಂಗೀಕಾರವಾಯಿತು.
ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ ಅಂಗೀಕಾರ
2026ನೇ ಸಾಲಿನ ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಅವರು ಪರ್ಯಾಲೋಚಿಸಿ ಅಂಗೀಕರಿಸಬೇಕೆಂದು ಸದನದಲ್ಲಿ ಕೋರಿದರು.
ಈ ವಿಧೇಯಕ ಉದ್ದೇಶವು ಜಾಹೀರಾತುಗಳ ಮೇಲೆ ಶುಲ್ಕವನ್ನು ವಿಧಿಸುವುದು ಮತ್ತು ಸಂಗ್ರಹಿಸುವುದು, ಅನಧಿಕೃತ ಜಾಹೀರಾತುಗಳನ್ನು ನಿಯಂತ್ರಿಸುವುದು ಮತ್ತು ಹಾಗೆ ಸಂಗ್ರಹಿಸಲಾದ ಅಂಥ ಶುಲ್ಕ ಮತ್ತು ದಂಡಗಳನ್ನು ಸಿಂದುಗೊಳಿಸುವುದಾಗಿದೆ ಎಂದು ವಿಧೇಯಕದ ಬಗ್ಗೆ ಸದನದಲ್ಲಿ ವಿವರಿಸಿದರು. ಚರ್ಚೆಯ ಬಳಿಕ ವಿಧೇಯಕವು ಅಂಗೀಕಾರವಾಯಿತು.
***
ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಿಗೆ ನಿಗದಿತ ಸಮಯಕ್ಕೆ ಉತ್ತರ ಒದಗಿಸದವರ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ-ಡಾ: ಜಿ.ಪರಮೇಶ್ವರ
ಬೆಂಗಳೂರು, ಮಾರ್ಚ್ 16

ವಿಧಾನಸಭೆಯಲ್ಲಿ ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಿಗೆ ಉತ್ತರಗಳನ್ನು ಕಡಿಮೆ ಸಂಖ್ಯೆಯಲ್ಲಿ ಉತ್ತರಿಸಲಾಗುತ್ತಿದೆ. ಹಲವು ಇಲಾಖೆಗಳಿಂದ ಉತ್ತರಗಳು ನಿಗದಿತ ಸಂಖ್ಯೆಯಲ್ಲಿ ಒದಗಿಸುತ್ತಿಲ್ಲದಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಸಭೆ ನಡೆಸಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ವಿಧಾನಸಭೆಯ ಅಧಿವೇಶನದಲ್ಲಿ ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ರವರು ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಿಗೆ ನಿಗದಿತ ಸಂಖ್ಯೆಯಲ್ಲಿ ಉತ್ತರಗಳನ್ನು ಒದಗಿಸದೇ ಇರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸಭಾಧ್ಯಕ್ಷರು ಗಮನಹರಿಸಬೇಕೆಂದು ಕಳೆದ 4-5 ವಿಧಾನಸಭೆಯ ಅಧಿವೇಶನದಲ್ಲಿ ಕೋರಿದ್ದಾಗ್ಯೂ ನಿಗದಿತ ಸಂಖ್ಯೆಯಲ್ಲಿ ಉತ್ತರಗಳು ಬರುತ್ತಿಲ್ಲ. ಈ ಬಗ್ಗೆ ಸಭಾಧ್ಯಕ್ಷರು ನಿರ್ದೇಶನ ನೀಡಬೇಕೆಂದು ಸದನವನ್ನು ಕೋರಿದ್ದರು.

ಇಂದಿನ ಸದನದ ಕಲಾಪದಲ್ಲಿ ಮತ್ತೆ ನಿರೀಕ್ಷಿತ ಸಂಖ್ಯೆಯಲ್ಲಿ ಉತ್ತರಗಳು ಬಾರದ ಹಿನ್ನೆಲೆಯಲ್ಲಿ ಸದನಕ್ಕೆ ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಿಗೆ ಉತ್ತರಿಸುವ ಮಂತ್ರಿಗಳ ಹಾಗೂ ಇಲಾಖೆಯ ಅಧಿಕಾರಿಗಳ ಆದ್ಯ ಕರ್ತವ್ಯವಾಗಿರುತ್ತದೆ. ಇದು ಗಂಭೀರವಾದ ವಿಷಯವಾಗಿದ್ದು ಈ ಬಗ್ಗೆ ಚರ್ಚೆ ಅಗತ್ಯವೆಂದು ಸದನವನ್ನು ಸಭಾಧ್ಯಕ್ಷರು ಮೊಟಕುಗೊಳಿಸಿರುವುದು ಇತಿಹಾಸ ಎಂದು ಡಾ: ಜಿ.ಪರಮೇಶ್ವರ್ ತಿಳಿಸಿದರು.
ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಕುರಿತು ಸಭಾಧ್ಯಕ್ಷರು ಸಭೆ ನಡೆಸಿ, ಮುಖ್ಯಮಂತ್ರಿಗಳು, ಸರ್ಕಾರದ ಕಾರ್ಯದರ್ಶಿಗಳು, ವಿರೋಧ ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಾಯಿತು. ಲಿಖಿತ ರೂಪದ ಪ್ರಶ್ನೆಗಳಿಗೆ ಸಭೆಯಲ್ಲಿ ನಿಗದಿತ ಸಮಯದಲ್ಲಿ ಉತ್ತರವನ್ನು ಒದಗಿಸದ ಅಧಿಕಾರಿಗಳ ವಿರುದ್ಧ ಕೂಡಲೇ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ತೀರ್ಮಾನಿಸಲಾಗಿದೆ.
ಸರ್ಕಾರದ ಎಲ್ಲಾ ಕಾರ್ಯದರ್ಶಿಗಳಿಗೆ ಈ ಕುರಿತು ಪರಿಶೀಲನೆ ಮಾಡಿ ಯಾವ ಯಾವ ಇಲಾಖೆಯಲ್ಲಿ ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು ಬಾಕಿ ಉಳಿದಿವೆ ಎಂಬುದರ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ನಿರ್ದೇಶನ ನೀಡಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಕ್ರಮ ವಹಿಸಲಾಗುವುದು ಎಂದು ಡಾ: ಜಿ.ಪರಮೇಶ್ವರ್ ಸದನದಲ್ಲಿ ಉತ್ತರಿಸಿದರು.
ಸಭಾಧ್ಯಕ್ಷರ ಈ ನಡೆಗೆ ವಿರೋಧಪಕ್ಷದ ನಾಯಕರು ಹಾಗೂ ಶಾಸಕರಿಂದ ಸಭಾಧ್ಯಕ್ಷರಿಗೆ ಸದನದಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು.
***

Comments

Leave a Comment

Prev Post ಬೆಂಗಳೂರಿನಿಂದ ಬೀದರ್, ಕಲಬುರಗಿಗೆ ವಿಮಾನಸೇವೆ, 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ: ಎಂ ಬಿ ಪಾಟೀಲ
Next Post ವಂದನಾ ಪ್ರಶಸ್ತಿ - 2026" ಕ್ಕೆ ಡಾ. ಆರ್.ಕೆ.ನಾಯರ್ ಆಯ್ಕೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News