PRABHAVAA.COM

ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಭಾವುಕ ಅಂತ್ಯಕ್ರಿಯೆ: ಚೆನ್ನಮ್ಮ ದೇವೇಗೌಡರಿಗೆ ರಾಜ್ಯ ಗೌರವದ ವಿದಾಯ

Hassan:

Font size:

ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಭಾವುಕ ಅಂತ್ಯಕ್ರಿಯೆ: ಚೆನ್ನಮ್ಮ ದೇವೇಗೌಡರಿಗೆ ರಾಜ್ಯ ಗೌರವದ ವಿದಾಯ

ಹಾಸನ ಜಿಲ್ಲೆಯ ಹೊಳೆನರಸೀಪುರದ ಮಾವಿನಕೆರೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ದಿವಂಗತ ಚನ್ನಮ್ಮ ಅವರ ಅಂತಿಮ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ನೆರವೇರಿಸಲಾಯಿತು. ತನ್ನಿಮಿತ್ತ ಸಿಎಂ ಡಿ ಕೆ ಶಿವಕುಮಾರ್ ಅವರು ಅಂತಿಮ ನಮನ ಸಲ್ಲಿಸಿ, ಮಾಜಿ ಪ್ರಧಾನಿ ದೇವೇಗೌಡರಿಗೆ ರಾಷ್ಟ್ರಧ್ವಜ ನೀಡಿ, ಕಾಲಿಗೆ ನಮಸ್ಕರಿಸಿದರು. ನಂತರ ಅದೇ ತ್ರಿವರ್ಣ ಧ್ವಜವನ್ನು ಅವರ ಪುತ್ರ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಹಸ್ತಾಂತರಿಸಿದರು

ಹಾಸನ, ಜು.20 -ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡರ ಪಾರ್ಥೀವ ಶರೀರಕ್ಕೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ನೀಡಲಾಯಿತು. ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಗ್ರಾಮದ ತೋಟದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನಡೆದ ಈ ಅಂತ್ಯಕ್ರಿಯೆ, ಸಾವಿರಾರು ಜನರ ಕಣ್ಣೀರು ತರಿಸಿದ ಭಾವುಕ ಕ್ಷಣಗಳ ಸಾಕ್ಷಿಯಾಯಿತು.

72 ವರ್ಷಗಳ ದಾಂಪತ್ಯ ಯಾನವನ್ನು ಮುಗಿಸಿ, ಚೆನ್ನಮ್ಮ ದೇವೇಗೌಡರು ಮಣ್ಣಲ್ಲಿ ಮಣ್ಣಾದರು. ಪುತ್ರರಾದ ರಮೇಶ್, ಹೆಚ್‌.ಡಿ. ರೇವಣ್ಣ ಮತ್ತು ಮೊಮ್ಮಗ ಸೂರಜ್ ಪಲ್ಲಕ್ಕಿಗೆ ಹೆಗಲು ಕೊಟ್ಟು ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರು ಹೂವು, ತುಳಸಿ, ಪತ್ರೆ ಸಮರ್ಪಿಸಿ ಭಾವಪೂರ್ಣ ವಿದಾಯ ಹೇಳಿದರು.

ಅಂತ್ಯಕ್ರಿಯೆ ಸ್ಥಳದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರು ಶಿವರಾಜ್ ಸಿಂಗ್ ಚೌಹಾಣ್, ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ ಸೇರಿದಂತೆ ಅನೇಕ ರಾಜಕೀಯ ನಾಯಕರು ಉಪಸ್ಥಿತರಿದ್ದರು. ಎರಡು ನಿಮಿಷಗಳ ಮೌನಾಚರಣೆ ಬಳಿಕ ಸಿಎಂ ಶಿವಕುಮಾರ್ ಅವರು ದೇವೇಗೌಡರ ಕುಟುಂಬಕ್ಕೆ ರಾಷ್ಟ್ರಧ್ವಜ ಹಸ್ತಾಂತರಿಸಿ ಗೌರವ ಸಲ್ಲಿಸಿದರು. ಇದೇ ವೇಳೆ ಅವರು ದೇವೇಗೌಡರ ಕಾಲಿಗೆ ನಮಸ್ಕರಿಸಿ ಭಾವುಕರಾದರು.

ಅರ್ಚಕರ ನೇತೃತ್ವದಲ್ಲಿ ದೇಹ ಶುದ್ಧೀಕರಣ, ಸ್ತೋತ್ರ ಪಠಣ ಹಾಗೂ ಅಂತಿಮ ಪೂಜಾ ವಿಧಿಗಳು ನಡೆಯಿತು. ದೇವೇಗೌಡರು ಮತ್ತು ಕುಟುಂಬದವರು ಪಾರ್ಥೀವ ಶರೀರಕ್ಕೆ ಪೂಜೆ ಸಲ್ಲಿಸಿ ಕಣ್ಣೀರು ಹಾಕಿದರು. ನಂತರ ಪಲ್ಲಕ್ಕಿಯಲ್ಲಿ ಮೂರು ಸುತ್ತು ಮೆರವಣಿಗೆ ನಡೆಸಿ, ಹಿರಿಯ ಪುತ್ರ ರಮೇಶ್ ದೇವೇಗೌಡರು ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ನೆರವೇರಿಸಿದರು.

ಪಂಚಭೂತಗಳಲ್ಲಿ ಚೆನ್ನಮ್ಮ ದೇವೇಗೌಡರ ಪಾರ್ಥೀವ ಶರೀರ ಲೀನವಾಯಿತು. ಸರ್ಕಾರಿ ಗೌರವವಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಮೇಲುಕೋಟೆಯ ಪುರೋಹಿತರಾದ ಕಣ್ಣನ್ ಸ್ವಾಮಿ ಶಾಸ್ತ್ರೋಕ್ತ ವಿಧಿವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಸದಸ್ಯರು ಎಚ್‌.ಡಿ. ಕುಮಾರಸ್ವಾಮಿ, ಎಚ್‌.ಡಿ. ರೇವಣ್ಣ, ಎಚ್‌.ಡಿ. ಬಾಲಕೃಷ್ಣೇಗೌಡ, ಡಾ. ಎಚ್‌.ಡಿ. ರಮೇಶ್, ಪುತ್ರಿಯರಾದ ಅನುಸೂಯ, ಶೈಲಜಾ, ಅಳಿಯಂದಿರಾದ ಡಾ. ಸಿ.ಎನ್. ಮಂಜುನಾಥ್, ಡಾ. ಚಂದ್ರಶೇಖರ್ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು ಎಲ್ಲರೂ ಅಂತಿಮ ವಿಧಿವಿಧಾನಗಳಲ್ಲಿ ಭಾಗವಹಿಸಿದರು.

ಸಾವಿರಾರು ಜನರ ಮಧ್ಯೆ ಕುಮಾರಸ್ವಾಮಿ ತಾಯಿಯ ಮುಖವನ್ನು ನೋಡಿ ಮುತ್ತಿಟ್ಟು ವಿದಾಯ ಹೇಳಿದ ಕ್ಷಣ ಎಲ್ಲರ ಕಣ್ಣಂಚಲ್ಲಿ ನೀರು ತರಿಸಿತು. ಹಾಸನದ ಅಂತ್ಯಕ್ರಿಯೆ ಸ್ಥಳಕ್ಕೆ ಸಾರ್ವಜನಿಕರು ದಂಡು ದಂಡಾಗಿ ಆಗಮಿಸಿ ಅಂತಿಮ ದರ್ಶನ ಪಡೆದರು.

ಅಂತ್ಯಕ್ರಿಯೆ ವೇಳೆ ಆದಿ ಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿ, ಕೇಂದ್ರ ಸಚಿವರು, ವಿಧಾನಸಭೆ ಸಭಾಪತಿ ಬಸವರಾಜ್ ಹೊರಟಿ, ಸಚಿವರು ಕೃಷ್ಣಬೈರೇಗೌಡ, ಕೆ.ಜೆ. ಜಾರ್ಜ್, ವಿಪಕ್ಷ ನಾಯಕ ಆರ್‌. ಅಶೋಕ್, ಸಂಸದರು ಬಸವರಾಜ್ ಬೊಮಾಯಿ, ಗೋವಿಂದ್ ಕಾರಜೋಳ್, ಬಿ.ವೈ. ರಾಘವೇಂದ್ರ, ಬಿ.ವೈ. ವಿಜಯೇಂದ್ರ ಮತ್ತು ಹಲವಾರು ರಾಜಕೀಯ ನಾಯಕರು ಅಂತಿಮ ನಮನ ಸಲ್ಲಿಸಿದರು.

ಶನಿವಾರ ಸಂಜೆ ನಿಧನವಾದ ಚೆನ್ನಮ್ಮ ದೇವೇಗೌಡರ ಪಾರ್ಥೀವ ಶರೀರವನ್ನು ಪದನಾಭನಗರದ ನಿವಾಸಕ್ಕೆ ತಂದು ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ನಿನ್ನೆ ಮಧ್ಯಾಹ್ನ ಹಾಸನದ ಕಡೆಗೆ ವಾಹನದಲ್ಲಿ ಕೊಂಡೊಯ್ಯುವಾಗ ಮಾರ್ಗದ ಹಲವೆಡೆ ಜನರು ಅಂತಿಮ ದರ್ಶನ ಪಡೆದರು. ಹಾಸನ ನಗರದಲ್ಲಿ ಸಾರ್ವಜನಿಕ ದರ್ಶನ ನಡೆಯಿತು.

ಬೆಳಗ್ಗೆ ಹೊಳೆನರಸೀಪುರದ ರೇವಣ್ಣ ನಿವಾಸದಲ್ಲಿ ಪಾರ್ಥೀವ ಶರೀರ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು ಅನೇಕ ಗಣ್ಯರು, ರಾಜಕೀಯ ಪಕ್ಷದ ನಾಯಕರು, ಸಂಘ ಪ್ರತಿನಿಧಿಗಳು ಮತ್ತು ಅಭಿಮಾನಿಗಳು ಅಂತಿಮ ದರ್ಶನ ಪಡೆದರು.

ಅಂತ್ಯಕ್ರಿಯೆಯ ವಿಧಿವಿಧಾನಗಳ ನಂತರ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಭಾವುಕರಾಗಿ ಹೇಳಿದರು: “ನನ್ನ ಹೆಂಡತಿ ಅನ್ನಪೂರ್ಣೆ, ಆಕೆ ನಗು ನಗುತ್ತಲೇ ವಿದಾಯ ಹೇಳಿದ್ದಾಳೆ. ನನ್ನ ಜೀವನದ ಯಶಸ್ಸಿನ ಹಿಂದೆ ಅವಳ ಶ್ರಮ ಮತ್ತು ತ್ಯಾಗ ಅಡಗಿದೆ. ಅವಳ ಆತ್ಮಕ್ಕೆ ಶಾಂತಿ ಸಿಗಲಿ.”ಎಂದರು.

Comments

Leave a Comment

Prev Post ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ ಸಿಎಂ ಡಿ.ಕೆ.ಶಿವಕುಮಾರ್ ರಿಂದ ಚಾಲನೆ
Next Post ಕ್ವಿನ್ ಸಿಟಿಯಲ್ಲಿ ಲಕ್ಸಂಬರ್ಗ್ ಸಹಭಾಗಿತ್ವಕ್ಕೆ ಆಹ್ವಾನ,ಜಪಾನ್‌ನಲ್ಲಿ ಹೂಡಿಕೆ ಆಕರ್ಷಣೆ: ಸಚಿವ ಎಂ ಬಿ ಪಾಟೀಲ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News