PRABHAVAA.COM

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಪದಾಧಿಕಾರಿಗಳ ನಿಯೋಗ ಭೇಟಿ

Bengaluru Urban:

Font size:

ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ ಅರ್ಜಿ ಆಹ್ವಾನದ ಕರಪತ್ರ ಬಿಡುಗಡೆ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಪದಾಧಿಕಾರಿಗಳ ನಿಯೋಗ ಭೇಟಿ

ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ ಅರ್ಜಿ ಆಹ್ವಾನದ ಕರಪತ್ರ ಬಿಡುಗಡೆ

ಎಲ್ಲ ವರ್ಗದ ಬಡವರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ‌ ಜಿ.ಪರಮೇಶ್ವರ

ಬೆಂಗಳೂರು, ಜುಲೈ 21:- ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ 2026-27ನೇ ಸಾಲಿಗೆ ಅರ್ಜಿ ಆಹ್ವಾನಿಸಿರುವ ಕುರಿತ ಕರಪತ್ರವನ್ನು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಇಂದು ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿ, ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಮತ್ತು ಇನ್ನಿತರ ಯೋಜನೆಗಳನ್ನು ರೂಪಿಸಿ, ಬ್ರಾಹ್ಮಣ ಸಮುದಾಯದ ಬಡವರ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿದೆ. ಎಲ್ಲ ವರ್ಗದ ಬಡವರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಪರಮೇಶ್ವರ ಅವರು ಹೇಳಿದರು.

ನಮ್ಮ ಸರ್ಕಾರವು 2025-26ನೇ ಸಾಲಿನಲ್ಲಿ ನೂತನವಾಗಿ 'ವಿಪ್ರ ಸ್ವ ಉದ್ಯಮ ನೇರ ಸಾಲ' ಯೋಜನೆಯನ್ನು ಮಂಡಳಿಯ ವತಿಯಿಂದ ಪ್ರಾರಂಭಿಸಿ, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಹಸು ಸಾಕಾಣಿಕೆಯಂತಹ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ನೀಡಲಾಗಿದೆ. ಈ ಯೋಜನೆಯ ಅಡಿಯಲ್ಲಿ ಕನಿಷ್ಠ ರೂ. 1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ಸಾಲ-ಸಹಾಯಧನ ನೀಡಲಾಗಿರುತ್ತದೆ. ಇದರಲ್ಲಿ ಶೇ 20 ಸಬ್ಸಿಡಿಯನ್ನು ನೀಡಲಾಗಿರುತ್ತದೆ. ಉಳಿಕೆ ಶೇ. 80 ಸಾಲದ ಮೊತ್ತಕ್ಕೆ ಶೇ 4ರಷ್ಟು ಬಡ್ಡಿಯಂತೆ ಒಟ್ಟು 34 ಕಂತುಗಳಲ್ಲಿ ಸಾಲ ಮರು ಪಾವತಿಸಬೇಕಾಗಿದೆ. ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದಲ್ಲಿ ಹಿಂದುಳಿದವರು ಈ ಸಾಲ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಉಪಮುಖ್ಯಮಂತ್ರಿಗಳಾದ
ಡಾ. ಜಿ. ಪರಮೇಶ್ವರ ಅವರು ಹೇಳಿದರು.

2025-26ನೇ ಸಾಲಿನಲ್ಲಿ ಒಟ್ಟು 1333 ಅರ್ಜಿ ಸ್ವೀಕೃತವಾಗಿದ್ದು, ಇದರಲ್ಲಿ ರೂ. 20.60 ಕೋಟಿ ವೆಚ್ಚದಲ್ಲಿ ಒಟ್ಟು 1048 ಫಲಾನುಭವಿಗಳಿಗೆ ಸಾಲ ಸಹಾಯಧನ ಮಂಜೂರು ಮಾಡಲಾಗಿರುತ್ತದೆ. ಸಾಲ ಮರುಪಾವತಿಯ ಮೊದಲ ಹಾಗೂ ಎರಡನೇ ಕಂತಿನಲ್ಲಿ ಶೇ 98ರಷ್ಟು ಸಾಲ ಮರುಪಾವತಿಯನ್ನು ಪಡೆಯುವಲ್ಲಿ ಮಂಡಳಿಯು ಯಶಸ್ವಿಯಾಗಿರುತ್ತದೆ. ಇದು ಒಂದು ಹೆಮ್ಮೆಯ ವಿಷಯವಾಗಿರುತ್ತದೆ. ಮಂಡಳಿಯಿಂದ ಸಾಲ ಪಡೆದ ಎಲ್ಲಾ ಫಲಾನುಭವಿಗಳು ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಿದ್ದಲ್ಲಿ, ಮಂಡಳಿಯಿಂದ ಸಮುದಾಯದ ಇನ್ನು ಹೆಚ್ಚಿನ ಸಮುದಾಯದವರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

2026-27 ನೇ ಸಾಲಿನಲ್ಲಿ “ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ” ಗೆ ಅರ್ಜಿ ಆಹ್ವಾನಿಸಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಬ್ರಾಹ್ಮಣ ಸಮುದಾಯದಲ್ಲಿ ಹಿಂದುಳಿದವರು ಅರ್ಜಿ ಸಲ್ಲಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು.
ಅರ್ಜಿಸಲ್ಲಿಸಲು ಮಂಡಳಿಯ ವೆಬ್ ಸೈಟ್ : Ksbdb.Karnataka.gov.in
ಸಹಾಯವಾಣಿ : 080-29605888 or 8762249230
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 31.08.2026 ಸಂಜೆ 5:30 ರ ವರೆಗೆ
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಭಾ.ಆ.ಸೇ ಅವರು, ಮಂಡಳಿಯ ಅಧ್ಯಕ್ಷರಾದ ಅಸಗೋಡು ಜಯಸಿಂಹ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ ಹಾಗೂ ಮಂಡಳಿಯ ನಿರ್ದೇಶಕರುಗಳಾದ ಮಹೇಶ್ ಕುಮಾರ್, ಕಶ್ಯಪ್ ನಂದನ್, ಶ್ರೀಧರ್ ಬೆಳ್ಳೂರು ಹಾಗೂ
ಪಿ ಶ್ರೀನಿವಾಸ್ ಮೂರ್ತಿ ಉಪಸ್ಥಿತರಿದ್ದರು.

Comments

Leave a Comment

Prev Post "ಮೂರು ದಶಕಗಳ ಪಯಣ ಪೂರೈಸಿದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ – ರಾಜ್ಯದ ಏಕೈಕ ದೂರಶಿಕ್ಷಣ ಕೇಂದ್ರ"
Next Post ಜುಲೈ 25, 26 ರಂದು ಎಸ್‍ಐಆರ್ ಮಹಾಸಂಪರ್ಕ ಅಭಿಯಾನ ಒಂದು ಕೋಟಿ ಮನೆ ತಲುಪುವ ಗುರಿ: ವಿಜಯೇಂದ್ರ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News