ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ.
From Jayaram Udupi
ಮಂಗಳೂರು:
ಪ್ರಧಾನ ಮಂತ್ರಿ ನಿವಾಸದ ಬಳಿ ಪ್ರತಿಭಟನೆ ನಡೆಸಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ಮಂಗಳೂರಿನ ಲಾಲ್‌ಬಾಗ್‌ನ ನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಧುರೀಣ ಪದ್ಮರಾಜ್ ಆರ್ ಪೂಜಾರಿ ಮಾತನಾಡಿದರು.
ಇದೇ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು.






Comments
Leave a Comment