PRABHAVAA.COM

ಆರ್ಟ್ ಆಫ್ ಲಿವಿಂಗ್ ಆಶ್ರಮದ ಜಮೀನು ತೆರವುಗೊಳಿಸದಿದ್ದರೆ ಧರಣಿ ಸತ್ಯಾಗ್ರಹ ಮುಂದುವರಿಯಲಿದೆ”-ಸಮತಾ ಸೈನಿಕ ದಳ ಎಚ್ಚರಿಕೆ

Bengaluru Urban:

Font size:

ಆರ್ಟ್ ಆಫ್ ಲಿವಿಂಗ್ ಆಶ್ರಮದ ಜಮೀನು ತೆರವುಗೊಳಿಸದಿದ್ದರೆ ಧರಣಿ ಸತ್ಯಾಗ್ರಹ ಮುಂದುವರಿಯಲಿದೆ”-ಸಮತಾ ಸೈನಿಕ ದಳ ಎಚ್ಚರಿಕೆ

ಆರ್ಟ್ ಆಫ್ ಲಿವಿಂಗ್ ಆಶ್ರಮದ ಜಮೀನು ತೆರವುಗೊಳಿಸದಿದ್ದರೆ ಧರಣಿ ಸತ್ಯಾಗ್ರಹ ಮುಂದುವರಿಯಲಿದೆ”-ಸಮತಾ ಸೈನಿಕ ದಳ ಎಚ್ಚರಿಕೆ

ಬೆಂಗಳೂರು,ಜು.23-ದಿನಾಂಕ 17 ಜುಲೈ 2026ರಿಂದ ಆರಂಭವಾದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಫಲವಾಗಿ, ರಾಜ್ಯ ಸರ್ಕಾರವು ಆರ್ಟ್ ಆಫ್ ಲಿವಿಂಗ್ ಆಶ್ರಮದ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆಗೆ ಆದೇಶ ನೀಡಿರುವುದನ್ನು ಸಮತಾ ಸೈನಿಕ ದಳ ರಾಜ್ಯಾಧ್ಯಸಮತಾ ಸೈನಿಕ ದಳ ಎಚ್ಚರಿಕೆ – ಕ್ಷ ಜಿ.ಸಿ. ವೆಂಕಟರಮಣಪ್ಪ ಅವರು ಸ್ವಾಗತಿಸಿದರು.

ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು “ಕಂದಾಯ ಇಲಾಖೆಯ ಅಧಿಕಾರಿಗಳು ಈಗಾಗಲೇ ಸರ್ವೆ ಕಾರ್ಯ ನಡೆಸಿ, ಸರ್ಕಾರಿ, ದಲಿತರ ಹಾಗೂ ಬಡವರ ಜಮೀನುಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿರುವ ದಾಖಲೆಗಳನ್ನು ಜಿಲ್ಲಾಧಿಕಾರಿಗಳ ಬಳಿ ಸಲ್ಲಿಸಿದ್ದಾರೆ. ಆದರೂ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸದೆ ಇರುವುದರಿಂದ ಅನುಮಾನಗಳು ಹೆಚ್ಚುತ್ತಿವೆ. ಎಸ್.ಐ.ಟಿ ತನಿಖೆ ಯಾವುದೇ ಒತ್ತಡಕ್ಕೆ ಮಣಿಯದೆ ಪಾರದರ್ಶಕವಾಗಿ ನಡೆಯಬೇಕು” ಎಂದು ಒತ್ತಾಯಿಸಿದರು.

ಇದೇ ವೇಳೆ, ಪಿಟಿಸಿಎಲ್ 1978 ಕಾಯ್ದೆಯ ಪ್ರಕಾರ ಜಿಲ್ಲಾಧಿಕಾರಿಗಳು ಆದೇಶ ಮಾಡಿರುವ ಜಮೀನುಗಳನ್ನು ಆರ್ಟ್ ಆಫ್ ಲಿವಿಂಗ್ ಆಶ್ರಮದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ಕೂಡ ಅವರು ಉಲ್ಲೇಖಿಸಿದರು.

“ಎಸ್.ಐ.ಟಿ ತನಿಖೆಗೂ ಪಿಟಿಸಿಎಲ್ ಆದೇಶಕ್ಕೂ ಸಂಬಂಧವಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳು ತಕ್ಷಣವೇ ಆ ಜಮೀನುಗಳನ್ನು ತೆರವುಗೊಳಿಸಿ, ದಲಿತರಿಗೆ ಹಸ್ತಾಂತರಿಸಬೇಕು. ಇಲ್ಲವಾದಲ್ಲಿ ನಮ್ಮ ಧರಣಿ ಸತ್ಯಾಗ್ರಹ ಮುಂದುವರಿಯುತ್ತದೆ” ಎಂದು ಎಚ್ಚರಿಸಿದರು.

ಆರ್ಟ್ ಆಫ್ ಲಿವಿಂಗ್ ಆಶ್ರಮದ ಜಮೀನು ಒತ್ತುವರಿ ಪ್ರಕರಣದ ಕುರಿತು ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿ “ದಿನಾಂಕ 17 ಜುಲೈ 2026ರಿಂದ ನಾವು ಆರಂಭಿಸಿದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಪರಿಣಾಮವಾಗಿ, ರಾಜ್ಯ ಸರ್ಕಾರವು ಆರ್ಟ್ ಆಫ್ ಲಿವಿಂಗ್ ಆಶ್ರಮದ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆಗೆ ಆದೇಶ ನೀಡಿರುವುದು ಸ್ವಾಗತಾರ್ಹ. ಆದರೆ, ಎರಡು ವರ್ಷಗಳ ಹಿಂದೆ ನಮ್ಮ ಹೋರಾಟದ ಫಲವಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಡಿ.ಡಿ.ಎಲ್.ಆರ್ ಅಧಿಕಾರಿಗಳು ಸರ್ವೆ ಕಾರ್ಯ ನಡೆಸಿ, ಸರ್ಕಾರಿ, ದಲಿತರ ಹಾಗೂ ಬಡವರ ಜಮೀನುಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿರುವ ದಾಖಲೆಗಳನ್ನು ಸಿದ್ಧಪಡಿಸಿದ್ದರು. ಇಷ್ಟು ದಿನಗಳಾದರೂ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸದೆ ಇರುವುದು ಅನುಮಾನಗಳು ಹೆಚ್ಚುತ್ತಿವೆ ಎಂದು ಜಿ.ಸಿ. ವೆಂಕಟರಮಣಪ್ಪ ಹೇಳಿದರು.

ಅವರು ಮುಂದುವರೆದು, “ಎಸ್.ಐ.ಟಿ ತನಿಖೆ ಯಾವುದೇ ರೀತಿಯ ಒತ್ತಡಕ್ಕೆ ಮಣಿಯದೆ, ಪಾರದರ್ಶಕವಾಗಿ ನಡೆಯಬೇಕು. ಕಂದಾಯ ಇಲಾಖೆಯ ಅಧಿಕಾರಿಗಳು ಸರ್ವೆ ಕಾರ್ಯ ಮುಗಿಸಿ ದಾಖಲೆಗಳನ್ನು ಜಿಲ್ಲಾಧಿಕಾರಿಗಳ ಬಳಿ ಸಲ್ಲಿಸಿರುವುದರಿಂದ, ತನಿಖೆ ತ್ವರಿತವಾಗಿ ನಡೆಯಬೇಕು. ಆದರೆ, ಪಿಟಿಸಿಎಲ್ 1978 ಕಾಯ್ದೆಯ ಪ್ರಕಾರ ಜಿಲ್ಲಾಧಿಕಾರಿಗಳು ಆದೇಶ ಮಾಡಿರುವ ಜಮೀನುಗಳನ್ನು ಆರ್ಟ್ ಆಫ್ ಲಿವಿಂಗ್ ಆಶ್ರಮದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಜಮೀನುಗಳನ್ನು ತಕ್ಷಣವೇ ತೆರವುಗೊಳಿಸಿ, ದಲಿತರಿಗೆ ಹಸ್ತಾಂತರಿಸಬೇಕು. ಇಲ್ಲವಾದಲ್ಲಿ ನಮ್ಮ ಧರಣಿ ಸತ್ಯಾಗ್ರಹ ಮುಂದುವರಿಯುತ್ತದೆ” ಎಂದು ಮತ್ತೋಮ್ಮೆಎಚ್ಚರಿಸಿದರು.

ಪ್ರೆಸ್ ಮೀಟ್‌ನಲ್ಲಿ ಅವರು ಸರ್ಕಾರದ ನಿರ್ಲಕ್ಷ್ಯವನ್ನು ತೀವ್ರವಾಗಿ ಟೀಕಿಸಿ, “ನಾವು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ನಿವಾಸಕ್ಕೆ ತೆರಳಿ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಅವರು ತನಿಖೆಗೆ ಆದೇಶ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ತನಿಖೆಯೊಂದಿಗೆ ತೆರವು ಕಾರ್ಯಾಚರಣೆ ಕೂಡ ನಡೆಯಬೇಕು. ಕೇವಲ ತನಿಖೆ ನಡೆಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ” ಎಂದು ಹೇಳಿದರು.

Comments

Leave a Comment

Prev Post ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ ಬಿ ಪಾಟೀಲ
Next Post ರಾಜ್ಯದ ಸಿಎಸ್ಆರ್ ನಿಧಿಯ ಪ್ರತಿ ಪೈಸೆಯೂ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗ: ಸಿಎಂ ಡಿ ಕೆ ಶಿವಕುಮಾರ್

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News