ಎಸ್.ಐ.ಆರ್. ಮಹಾ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡ ಬಿ.ವೈ.ವಿಜಯೇಂದ್ರ
ಎಸ್.ಐ.ಆರ್. ಮಹಾ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡ ಬಿ.ವೈ.ವಿಜಯೇಂದ್ರ
ಬೆಂಗಳೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್.) ಮಹಾ ಸಂಪರ್ಕ ಅಭಿಯಾನ ಪ್ರಯುಕ್ತ ಶಾಸಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮನೆ ಮನೆಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಎಸ್‍ಐಆರ್ ಮಹತ್ವದ ಕುರಿತು ಮಾಹಿತಿ ನೀಡಿದರು.
ರಾಜ್ಯದಾದ್ಯಂತ ಇಂದು ಮತ್ತು ನಾಳೆ ಬಿಜೆಪಿ ವತಿಯಿಂದ ಎಸ್‍ಐಆರ್ ಮಹಾ ಸಂಪರ್ಕ ಅಭಿಯಾನ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿಯೊಬ್ಬ ಪ್ರಮುಖ ಕಾರ್ಯಕರ್ತ 20 ಮನೆಗಳಿಗೆ ತೆರಳುವಂತೆ ಗುರಿ ನೀಡಿದ್ದೇವೆ. ಆ ಮನೆಯವರಿಗೆ ಫಾರ್ಮ್ ಸಿಕ್ಕಿದೆಯೇ ಎಂದು ವಿಚಾರಿಸುತ್ತಿದ್ದಾರೆ ಎಂದು ವಿವರಿಸಿದರು. ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರತಿಯೊಬ್ಬ ಕಾರ್ಯಕರ್ತರು ದಿನಕ್ಕೆ 10 ಮನೆಯಂತೆ ಭೇಟಿ ಮಾಡುತ್ತಿದ್ದಾರೆ. ಮತದಾರರ ಜೊತೆ ಐದ್ಹತ್ತು ನಿಮಿಷ ಕಾಲ ಕಳೆದು ಕರಡು ಮತದಾರರ ಪಟ್ಟಿ ಬಳಿಕ ಏನು ಎಂಬ ವಿವರ ನೀಡಲು ತಿಳಿಸಿದ್ದೇವೆ ಎಂದು ಎಸ್.ಐ.ಆರ್ ಮಹಾಭಿಯಾನದ ಸಂಚಾಲಕ ಮತ್ತು ಬಿಜೆಪಿ ಪ್ರಕೋಷ್ಟಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಅವರು ತಿಳಿಸಿದ್ದಾರೆ.
ನಮ್ಮ ಪಕ್ಷದ ಎಲ್ಲ ಪ್ರಮುಖರು, ಕಾರ್ಯಕರ್ತರಿಗೆ ಎಸ್‍ಐಆರ್ ಕುರಿತಂತೆ ಕಳೆದ 6 ತಿಂಗಳಿನಿಂದ ತರಬೇತಿ ಕೊಡಲಾಗಿದೆ. ಇದಲ್ಲದೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರನ್ನು ಪ್ರಭಾರಿಯಾಗಿ ನೇಮಿಸಿ, ಅವರು ಎಸ್‍ಐಆರ್ ಚಟುವಟಿಕೆ ನೋಡಿಕೊಳ್ಳಲು ತಿಳಿಸಿದ್ದೇವೆ ಎಂದು ವಿವರಿಸಿದರು.
ಎನ್ಯುಮರೇಷನ್ ಫಾರ್ಮ್ ಭರ್ತಿ ಮಾಡಿ ಬಿಎಲ್‍ಒಗಳಿಗೆ ಕೊಡಬೇಕಿದೆ. ಎನ್ಯುಮರೇಷನ್ ಫಾರ್ಮ್ ಭರ್ತಿ ಮಾಡುವ ವಿಚಾರದಲ್ಲೂ ತರಬೇತಿ ಕೊಟ್ಟಿದ್ದೇವೆ. ಆದರೂ ಇದರ ವಿಚಾರದಲ್ಲಿ ಗೊಂದಲ- ಆತಂಕವಿದೆ ಎಂದು ಹೇಳಿದರು. ಮತದಾರರಿಗೆ ಮಾಹಿತಿ ಕೊಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಎಲ್ಲ ಮನೆಗಳನ್ನು ತಲುಪುವ ಉದ್ದೇಶ ಇದರ ಹಿಂದಿದೆ ಎಂದು ಹೇಳಿದ್ದಾರೆ. ಶಾಸಕರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ಹಾಲಿ ಮಾಜಿ ಜನಪ್ರತಿನಿಧಿಗಳು ಕೂಡ ಇದರಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.






Comments
Leave a Comment