PRABHAVAA.COM

ಯೋಧರ ತ್ಯಾಗವೇ ನಮ್ಮ ಧೈರ್ಯ, ಸ್ವಾತಂತ್ರ್ಯ, ಹೆಮ್ಮೆ: ಸಿಎಂ ಡಿ ಕೆ ಶಿವಕುಮಾರ್

Bengaluru Urban:

Font size:

ಕರ್ನಾಟಕ ನಮ್ಮ ರಕ್ಷಣಾ ವಲಯದ ಬೆನ್ನೆಲುಬು ಯೋಧರ ಕುಟುಂಬಗಳ ಹಿತ ಕಾಯಲು ನಮ್ಮ ಸರ್ಕಾರ ಬದ್ಧ

ಬೆಂಗಳೂರು, ಜು. 26:

"ನಮ್ಮ ಯೋಧರ ತ್ಯಾಗವೇ ನಮ್ಮ ಧೈರ್ಯ, ಸ್ವಾತಂತ್ರ್ಯ, ಹೆಮ್ಮೆಯಾಗಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ನೆಹರೂ ತಾರಾಲಯದ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಭಾನುವಾರ ನಡೆದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.

"27 ವರ್ಷಗಳ ಹಿಂದೆ ನಮ್ಮ ವೀರ ಯೋಧರು ಹಿಮಾಲಯದ ತಪ್ಪಲಿನಲ್ಲಿ ಶತ್ರುಗಳನ್ನು ಸದೆ ಬಡಿದು ದೇಶದ ತ್ರಿವರ್ಣ ಧ್ವಜ ಹಾರಿಸಿದರು. ನಮ್ಮ ಹೀರೊಗಳು ಹುತಾತ್ಮರಾಗಿರಬಹುದು ಆದರೆ ಅವರ ಪರಂಪರೆ ಶಾಶ್ವತ, ದೇಶಕ್ಕಾಗಿ ಹುತಾತ್ಮರಾದ ನಮ್ಮ ವೀರ ಯೋಧರಿಗೆ ಹೃತ್ಪೂರ್ವಕ ನಮನ" ಎಂದು ತಿಳಿಸಿದರು.

"ನಮ್ಮ ತಾಯ್ನಾಡನ್ನು ರಕ್ಷಿಸಲು 527 ಯೋಧರು ಹುತಾತ್ಮರಾಗಿದ್ದಾರೆ. ಅದರಲ್ಲಿ ಕರ್ನಾಟಕದ 13 ಯೋಧರು ಸೇರಿದ್ದಾರೆ. ನಾನು ಕಾಂಗ್ರೆಸ್ ಪಕ್ಷದಿಂದ ಬಂದಿದ್ದು, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ನಮ್ಮ ಯೋಧರು ಎಲ್ಲಾ ಪರಿಸ್ಥಿತಿಯಲ್ಲೂ ದೇಶದ ರಕ್ಷಣೆಗೆ ಬದ್ಧರಾಗಿದ್ದಾರೆ. ಭಾರತ- ಪಾಕಿಸ್ತಾನ ಯುದ್ಧವಾಗಿರಲಿ, ಭಾರತ- ಚೀನಾ ಯುದ್ಧವಾಗಲಿ, ಗಡಿ ಅತಿಕ್ರಮಣ ಪರಿಸ್ಥಿತಿಯೇ ಆಗಿರಲಿ, ನಮ್ಮ ಯೋಧರು ಕೆಚ್ಚೆದೆಯಿಂದ ದೇಶದ ಗಡಿ ರಕ್ಷಣೆಗೆ ಪ್ರತಿ ಕ್ಷಣ, ದಿನವೂ ಸಿದ್ಧರಾಗಿರುತ್ತಾರೆ" ಎಂದು ಬಣ್ಣಿಸಿದರು.

ಕರ್ನಾಟಕ ನಮ್ಮ ರಕ್ಷಣಾ ವಲಯದ ಬೆನ್ನೆಲುಬು

"ಯೋಧರಿಂದಾಗಿ ನಾವು ನಮ್ಮ ಮನೆಗಳಲ್ಲಿ ನೆಮ್ಮದಿಯಾಗಿ ಮಲಗುತ್ತಿದ್ದೇವೆ. ಭಾರತದ ರಕ್ಷಣಾ ಪಡೆಗೆ ಕರ್ನಾಟಕ ಬೆನ್ನೆಲುಬಾಗಿದೆ. ಬೆಮೆಲ್, ಡಿಆರ್ ಡಿಒ, ಇಸ್ರೋ ಸೇರಿದಂತೆ ಅನೇಕ ಸಂಸ್ಥೆಗಳು ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿವೆ. ನಾವು ಭಾರತದ ಮೊದಲ ಸೇನಾ ಮುಖ್ಯಸ್ಥರಾದ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ ಕೊಡುಗೆ ಮರೆಯಲು ಸಾಧ್ಯವಿಲ್ಲ" ಎಂದರು.

"ಯೋಧರು, ಯುವಕರು, ಮಹಿಳೆಯರು, ರೈತರು ಹಾಗೂ ತೆರಿಗೆದಾರರು ನಮ್ಮ ಕೈಯಲ್ಲಿರುವ ಐದು ಬೆರಳುಗಳಂತೆ. ಈ ಬೆರಳುಗಳು ಸೇರಿದರೆ ದೇಶ ಬಲಿಷ್ಠ ಮುಷ್ಠಿಯಾಗುತ್ತದೆ. ಕಾರ್ಗಿಲ್ ವಿಜಯ್ ದಿವಸ ಬಹಳ ವಿಶೇಷವಾದ ದಿನ. ದೇಶದ ಸ್ವಾತಂತ್ರ್ಯ ಕಾಪಾಡಲು ಏನು ಬೇಕಾದರೂ ಮಾಡಬಲ್ಲೆವು ಎಂಬುದನ್ನು ದೇಶದ ಯುವಕರು ಸಾಬೀತುಪಡಿಸಿದ್ದಾರೆ. ದೇಶದ ಹೊರಗಿನ ಹಾಗೂ ಒಳಗಿನ ದುಷ್ಟ ಶಕ್ತಿಗಳಿಂದ ಭಾರತ ಮಾತೆಗೆ ತೊಂದರೆಯಾಗಲು ಬಿಡುವುದಿಲ್ಲ" ಎಂದು ಹೇಳಿದರು.

ಯೋಧರ ಕುಟುಂಬಗಳ ಹಿತ ಕಾಯಲು ಬದ್ಧ

"ನಮ್ಮ ರಾಜ್ಯದಲ್ಲಿ ಲಕ್ಷಾಂತರ ಯೋಧರ ಕುಟುಂಬಗಳು ನೆಲೆಸಿವೆ. ನಿಮ್ಮ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಸಲಹೆಗಳು ಏನೇ ಇದ್ದರು ನಮಗೆ ನೀಡಿ. ನಿಮ್ಮ ಸಲಹೆ ಸ್ವೀಕರಿಸಲು ನಮ್ಮ ಸರ್ಕಾರ ಮುಕ್ತವಾಗಿದೆ" ಎಂದು ತಿಳಿಸಿದರು.

ಈ ಸಂಕಷ್ಟ ಸಮಯದಲ್ಲಾದರೂ ಕೇಂದ್ರ ಸರಕಾರ ನೆರವು ನೀಡುವ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಬರ ಪರಿಸ್ಥಿತಿಯಲ್ಲಿ ಒಗ್ಗಟ್ಟಿನಿಂದ ಕೆಲಸ

ಬೆಂಗಳೂರು, ಜು. 26:

"ಬರ ಪರಿಸ್ಥಿತಿಯಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಈ ಸಂಕಷ್ಟ ಸಮಯದಲ್ಲಾದರೂ ಕೇಂದ್ರ ನೆರವು ನೀಡುವ ನಿರೀಕ್ಷೆ ಇದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ನೆಹರೂ ತಾರಾಲಯದ ರಾಷ್ಟ್ರೀಯ ಸೈನಿಕ ಸ್ಮಾರಕದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದರು.

ಸೋಮವಾರ ದೆಹಲಿಯಲ್ಲಿ ಸಂಸದರ ಜೊತೆಗಿನ ಸಭೆ ಬಗ್ಗೆ ಕೇಳಿದಾಗ, "ರಾಜ್ಯದಲ್ಲಿನ ಬರ ಪರಿಸ್ಥಿತಿ, ಬಾಕಿ ಇರುವ ವಿವಿಧ ಯೋಜನೆಗಳು ಹಾಗೂ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಧ್ವನಿ ಎತ್ತುವ ಬಗ್ಗೆ ಚರ್ಚೆ ಮಾಡಲು ನಾಳೆ ಸಂಜೆ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಂಸದರ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರೂ ಭಾಗಿಯಾಗಲಿದ್ದಾರೆ. ಬರ ಪರಿಸ್ಥಿತಿಯಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಈ ಸಂಕಷ್ಟ ಸಮಯದಲ್ಲಿ ಕೇಂದ್ರ ಸರ್ಕಾರ ನೆರವು ನೀಡುವ ನಿರೀಕ್ಷೆ ಇದೆ. ಆಗಸ್ಟ್ 13 ರಿಂದ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ" ಎಂದು ತಿಳಿಸಿದರು.

Comments

Leave a Comment

Prev Post ಎಸ್.ಐ.ಆರ್. ಮಹಾ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡ ಬಿ.ವೈ.ವಿಜಯೇಂದ್ರ
Next Post ವಿಧಾನಸಭೆಯಲ್ಲಿ ಜನಪರ ವಿಚಾರಗಳ ಮೇಲೆ ಬಿಜೆಪಿ–ಜೆಡಿಎಸ್ ಜಂಟಿ ಹೋರಾಟ: ಬಿ.ವೈ. ವಿಜಯೇಂದ್ರ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News