PRABHAVAA.COM

ಕಾರ್ಗಿಲ್ ವಿಜಯ್ ದಿವಸ್: ಕಾರ್ಗಿಲ್ ಸಮರ ಸೇನಾನಿಗಳಿಗೆ ಸನ್ಮಾನ

Bengaluru Urban:

Font size:

ಕಾರ್ಗಿಲ್ ವಿಜಯ್ ದಿವಸ್: ಕಾರ್ಗಿಲ್ ಸಮರ ಸೇನಾನಿಗಳಿಗೆ ಸನ್ಮಾನ

ಕಾರ್ಗಿಲ್ ವಿಜಯ್ ದಿವಸ್: ಕಾರ್ಗಿಲ್ ಸಮರ ಸೇನಾನಿಗಳಿಗೆ ಸನ್ಮಾನ
ಬೆಂಗಳೂರು, ಜು.26: ಕಾರ್ಗಿಲ್ ವಿಜಯ್ ದಿನದ ಹಿನ್ನೆಲೆಯಲ್ಲಿ ಇದು ನಿಮ್ಮ ವಾಹಿನಿ ಕಲಾ ವೇದಿಕೆ ಹಾಗೂ ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಸಹಯೋಗದಲ್ಲಿ ನಗರದ ನಯನ ಸಭಾಂಗಣದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ವೀರ ಸೇನಾನಿಗಳನ್ನು ಗೌರವಿಸಲಾಯಿತು.
ಡಾಕ್ಟರ್ಸ್ ಡೇ, ಪತ್ರಿಕೋದ್ಯಮ ದಿನ ಹಾಗೂ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಕಾರ್ಗಿಲ್ ಸಮರ ವೀರನ್ನು ಸನ್ಮಾನಿಸಲಾಯಿತು.
ಮಾಜಿ ಸೈನಿಕರ ವೇದಿಕೆಯ ಅಧ್ಯಕ್ಷ ಬಿ.ಕೆ. ಕುಮಾರ ಸ್ವಾಮಿ ಮಾತನಾಡಿ, 1999 ರ ಇದೇ ಅವಧಿಯಲ್ಲಿ ನಾವೆಲ್ಲಾ ಕಾರ್ಗಿಲ್ ಸಮರ ಭೂಮಿಯಲ್ಲಿ ಹೋರಾಟ ಮಾಡುತ್ತಿದ್ದೇವು. ದೇಶ ರಕ್ಷಣೆಗಾಗಿ ನಾವು ಟೊಂಕಕಟ್ಟಿ ನಿಂತೆವು. ಇದು ಇತಿಹಾಸದಲ್ಲಿ ಅಚ್ಚಳಿಯದೇ ಉಳಿಯುವ ದಿನಗಳು ಎಂದು ಸ್ಮರಿಸಿಕೊಂಡರು.
ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಮಾತನಾಡಿ, ದೇಶದ ಗಡಿ ಕಾಪಾಡುವ ಯೋಧರು, "ವೈದ್ಯೋ ನಾರಾಯಣೋ ಹರಿಃ" ಎಂಬ ಮಾತಿಗೆ ತಕ್ಕಂತೆ ಜನರ ಆರೋಗ್ಯ ಕಾಪಾಡುವ ವೈದ್ಯರು ಹಾಗೂ ಸತ್ಯವನ್ನು ನಿರ್ಭೀತಿಯಿಂದ ಸಮಾಜದ ಮುಂದೆ ತರುವ ಪತ್ರಕರ್ತರ ಸೇವೆ ಅಮೂಲ್ಯವಾಗಿದೆ. ಇಂತಹ ಮಹನೀಯರನ್ನು ಗೌರವಿಸುವ ಅವಕಾಶ ದೊರೆತಿರುವುದು ಸಂತಸದ ವಿಷಯ ಎಂದು ಹೇಳಿದರು.
ಪತ್ರಕರ್ತ ನಂಜುಂಡಪ್ಪ.ವಿ ಮಾತನಾಡಿ, ಭಾರತದ ಪ್ರತಿಯೊಬ್ಬ ಪ್ರಜೆಗೂ ದೇಶ ಮೊದಲು. ಪ್ರತಿಯೊಬ್ಬರೂ ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು. ಕಾರ್ಗಿಲ್ ಯೋಧರು ನಮ್ಮ ದೇಶದ ಹೆಮ್ಮೆ. ಅವರನ್ನು ಗೌರವಿಸುವುದು ನಮ್ಮನ್ನೇ ನಾವು ಗೌರವಿಸಿಕೊಂಡಂತೆ ಎಂದರು.
ಹಿರಿಯ ಸೇನಾನಿ ಸರವಣ ಹವಾಲ್ದಾರ್, ಇದು ನಿಮ್ಮ ವಾಹಿನಿ ಕಲಾ ವೇದಿಕೆ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೆ.ಎಸ್., ಚಂದ್ರಿಕಾ ಬಿ.ವಿ. ಅನೇಕ ಗಣ್ಯರು ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಹಿರಿಯೂರಿನ 14 ಕೆರೆಗಳಿಗೆ ನೀರು ತುಂಬಿಸುವುದು ಸುಧಾಕರ್ ಅವರ ಕನಸು: ಸಿಎಂ ಡಿ ಕೆ ಶಿವಕುಮಾರ್

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News