PRABHAVAA.COM

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ನಿಂದನೆಗೆ ಮಮತಾ ಗಟ್ಟಿ ತೀವ್ರ ಖಂಡನೆ

Dakshina Kannada:

Font size:

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ನಿಂದನೆಗೆ ಮಮತಾ ಗಟ್ಟಿ ತೀವ್ರ ಖಂಡನೆ

From Jayaram Udupi

ಮಂಗಳೂರು ,ಜು.30-ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ಬಳಸಿರುವ ಭಾಷೆ ಹಾಗೂ ಮಾಡಿರುವ ವೈಯಕ್ತಿಕ ಆರೋಪಗಳು ಅತ್ಯಂತ ಖಂಡನೀಯ, ಬೇಜವಾಬ್ದಾರಿಯುತ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಆರೋಪಿಸಿದರು.

ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ವ್ಯಕ್ತಿಯ ಘನತೆಗೆ ಧಕ್ಕೆ ತರುವ ರೀತಿಯ ಆರೋಪಗಳನ್ನು ಮಾಡುವುದು ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ. ದೇಶದ ಪ್ರಮುಖ ನಾಯಕರ ವಿರುದ್ಧ ವೈಯಕ್ತಿಕ ನಿಂದನೆ ಮಾಡುವ ಬದಲು, ಜನರ ಸಮಸ್ಯೆಗಳ ಕುರಿತು ಚರ್ಚಿಸುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಯಶ್ ಪಾಲ್ ಸುವರ್ಣ ಅವರು ಹೇಳಿರುವುದಾಗಿ ಆರೋಪಿಸಲಾಗಿರುವ "ರಾಹುಲ್ ಗಾಂಧಿ ಅವರ ಕುಟುಂಬವನ್ನು ಬಾಬರಿ ಮಸೀದಿ ಧ್ವಂಸ ಮಾಡಿದಂತೆ ಧ್ವಂಸ ಮಾಡುತ್ತೇವೆ" ಎಂಬ ಹೇಳಿಕೆ ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಮಾತುಗಳು ದ್ವೇಷ ಪ್ರಚೋದನೆ ಹಾಗೂ ಪ್ರಜಾಪ್ರಭುತ್ವದ ಸಂಸ್ಕೃತಿಗೆ ವಿರುದ್ಧವಾದ ಮನೋಭಾವವನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಟೀಕಿಸಿದರು.

ಯಶ್ ಪಾಲ್ ಸುವರ್ಣ ಅವರು ತಮ್ಮ ಹೇಳಿಕೆಯನ್ನು ತಕ್ಷಣ ಹಿಂತೆಗೆದುಕೊಂಡು ದೇಶದ ಜನರ ಕ್ಷಮೆಯಾಚಿಸಬೇಕು. ಅಲ್ಲದೆ, ಸಂಬಂಧಪಟ್ಟ ಅಧಿಕಾರಿಗಳು ಈ ಹೇಳಿಕೆಗಳ ಕುರಿತು ಕಾನೂನುಬದ್ಧವಾಗಿ ಪರಿಶೀಲನೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಪ್ಪಿ, ಪ್ರಮುಖರಾದ ಶಾಂತಲಾ ಗಟ್ಟಿ, ವೀಣಾ, ಚಂದ್ರಕಲಾ, ವೃಂದಾ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Comments

Leave a Comment

Prev Post ಡಿ.ಕೆ. ಶಿವಕುಮಾರ್ – ತಳಮಟ್ಟದ ಸರ್ಕಾರಿ ನೌಕರರೊಂದಿಗೆ ನೇರ ಸಂವಾದಕ್ಕೆ ಮುಂದಾದ ಮುಖ್ಯಮಂತ್ರಿ ಡಿಕೆಶಿ
Next Post ಕಾವೇರಿ ವಿಚಾರವಾಗಿ ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ ಕೆ ಶಿವಕುಮಾರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News