ರಾಷ್ಟ್ರೀಯ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಕಾಸರಗೋಡು ಘಟಕದ ಅಭಿನಂದನೆ"
From Jayaram Udupi
ವರ್ಕಾಡಿ:
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ ಅವರನ್ನು ಬಿಜೆಪಿ ಜಿಲ್ಲಾ ಘಟಕ ಅಭಿನಂದಿಸಿತು.
ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ, ರಾಜ್ಯ ಸಮಿತಿ ಸದಸ್ಯ ಸತೀಶ್ ಚಂದ್ರ ಭಂಡಾರಿ, ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ, ರಾಜ್ಯ ಕೌನ್ಸಿಲ್ ಸದಸ್ಯ ಪದ್ಮನಾಭ ಕಡಪ್ಪುರಂ, ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., ಪ್ರಧಾನ ಕಾರ್ಯದರ್ಶಿ ಯತಿರಾಜ್, ವರ್ಕಾಡಿ ಪಂಚಾಯತ್ ಸಮಿತಿ ಅಧ್ಯಕ್ಷ ಭಾಸ್ಕರ್ ಪೊಯ್ಯೆ, ಪ್ರಧಾನ ಕಾರ್ಯದರ್ಶಿ ನಾಗೇಶ್ ಬಳ್ಳೂರು ಮುಂತಾದವರು ಸೇರಿ ರೂಪಶ್ರೀ ಅವರನ್ನು ಅಭಿನಂದಿಸಿದರು.
ಈ ಗೌರವವು ರೂಪಶ್ರೀ ಅವರ ವರ್ಷಗಳ ಶ್ರಮ ಮತ್ತು ಅಭಿನಯ ಪ್ರತಿಭೆಗೆ ಸಿಕ್ಕ ಸೂಕ್ತ ಗೌರವವಾಗಿದೆ ಎಂದು ಎಂ.ಎಲ್. ಅಶ್ವಿನಿ ಹೇಳಿದರು.
ನೂರಾರು ನಾಟಕಗಳ ಮೂಲಕ ತಮ್ಮ ಪ್ರತಿಭೆಯನ್ನು ನಿರೂಪಿಸಿದ ರೂಪಶ್ರೀ ಅವರ ರಾಷ್ಟ್ರೀಯ ಪ್ರಶಸ್ತಿ ಸಾಧನೆ ಕಾಸರಗೋಡು ಜಿಲ್ಲೆಗೆ ಹೆಮ್ಮೆಯಾಗಿದೆ ಎಂದು ಅಶ್ವಿನಿ ಪ್ರತಿಕ್ರಿಯಿಸಿದರು




Comments
Leave a Comment