PRABHAVAA.COM

“ಕೃಷಿ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Bengaluru Urban:

Font size:

“ಕೃಷಿ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

“ಕೃಷಿ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಬೆಂಗಳೂರು . ಆ. 1.ಕಳೆದ 17 ದಿನಗಳಿಂದ ಶಾಂತಿಯುತ ಸತ್ಯಾಗ್ರಹ ನಡೆಸುತ್ತಿರುವ ಕೃಷಿ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿಗಳು, ಕೃಷಿ ಇಲಾಖೆಯ ತಾಂತ್ರಿಕ ಹುದ್ದೆಗಳ ನೇಮಕಾತಿಯಲ್ಲಿ ನಡೆಯುತ್ತಿರುವ ಅಸಮಾನತೆಗಳನ್ನು ತೀವ್ರವಾಗಿ ವಿರೋಧಿಸಿದರು. ಅವರು ಸ್ಪಷ್ಟಪಡಿಸಿದಂತೆ, ಈ ಅನ್ಯಾಯದಿಂದ ಕೃಷಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದ್ದು, ICAR ಮಾನ್ಯತೆ ಪಡೆದ ಪದವೀಧರರ ಭವಿಷ್ಯ ಗಂಭೀರ ಅಪಾಯಕ್ಕೆ ಒಳಗಾಗಿದೆ. ವಿದ್ಯಾರ್ಥಿಗಳು ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ, ತಕ್ಷಣ ಕ್ರಮ ಕೈಗೊಳ್ಳದಿದ್ದರೆ ರಾಜ್ಯದ ಕೃಷಿ ಕ್ಷೇತ್ರವೇ ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿಗಳು ಪತ್ರಿಕಾಗೋಷ್ಠಿಯಲ್ಲಿ ತಮ್ಮ ಬೇಡಿಕೆಗಳನ್ನು ಸ್ಪಷ್ಟ ಪಡಿಸಿದ ವಿದ್ಯಾರ್ಥಿ ನಾಯಕರುಗಳು ಕೃಷಿ ಇಲಾಖೆಯ ತಾಂತ್ರಿಕ ಹುದ್ದೆಗಳಲ್ಲಿ AICTE ಮಾನ್ಯತೆಯನ್ನು ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದರು.

ತಾಂತ್ರಿಕ ಹುದ್ದೆಗಳಿಗೆ ICAR ಮಾನ್ಯತೆ ಪಡೆದ ಪದವೀಧರರಿಗೆ ಮಾತ್ರ ಅವಕಾಶ ನೀಡಬೇಕೆಂದು ವಿದ್ಯಾರ್ಥಿಗಳು ಸ್ಪಷ್ಟಪಡಿಸಿದರು. ICAR ಮಾನ್ಯತೆ ಇಲ್ಲದ ಖಾಸಗಿ ಕೃಷಿ ಕಾಲೇಜುಗಳಿಗೆ ಹೊಸ ಹಾಗೂ ಮುಂದುವರಿದ ಸಂಯೋಜನೆಗಳನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಅವರು ಆಗ್ರಹಿಸಿದರು. DAESI ಯೋಜನೆಯಲ್ಲಿನ ಅಕ್ರಮಗಳನ್ನು ತಕ್ಷಣ ಸರಿಪಡಿಸಬೇಕೆಂದು ವಿದ್ಯಾರ್ಥಿಗಳು ಬೇಡಿಕೆ ಇಟ್ಟರು. AO, AAO ಸೇರಿದಂತೆ ಎಲ್ಲಾ ತಾಂತ್ರಿಕ ಹುದ್ದೆಗಳ ನೇಮಕಾತಿ ಪ್ರತಿವರ್ಷ ನಿಯಮಿತವಾಗಿ ನಡೆಯಬೇಕೆಂದು ಅವರು ಸರ್ಕಾರವನ್ನು ಮನವಿ ಮಾಡಿದರು.

ವಿದ್ಯಾರ್ಥಿ ವೇದಿಕೆಯ ಪ್ರತಿನಿಧಿಗಳು ಸರ್ಕಾರದ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿ ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದರೆ ರಾಜ್ಯದ ಸಾವಿರಾರು ಕೃಷಿ ವಿದ್ಯಾರ್ಥಿಗಳು ಹಾಗೂ ಪದವೀಧರರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಕೃಷಿ ಇಲಾಖೆಯ ತಾಂತ್ರಿಕ ಹುದ್ದೆಗಳ ನೇಮಕಾತಿಯಲ್ಲಿ ಆಗುತ್ತಿರುವ ಅನ್ಯಾಯ, ಕೃಷಿ ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆ ಹಾಗೂ ICAR ಮಾನ್ಯತೆ ಪಡೆದ ಕೃಷಿ ಪದವೀಧರರ ಭವಿಷ್ಯವನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯದ ವಿವಿಧ ಕೃಷಿ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿಗಳು ಕಳೆದ 17 ದಿನಗಳಿಂದ ಶಾಂತಿಯುತ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಪ್ರಮುಖರು:

ಡಾ. ಪ್ರಕಾಶ್ ಕಮ್ಮರಡಿ – ಹಿರಿಯ ಕೃಷಿ ವಿಜ್ಞಾನಿ

ಬಡಗಲ್ಪುರ ನಾಗೇಂದ್ರ – ರೈತ

ಚುಕ್ಕಿ ನಂಜುಂಡಸ್ವಾಮಿ – ರೈತ ಮುಖಂಡರು

ಯಶವಂತ್ – ಪ್ರಾಂತ ರೈತ ಸಂಘ ಮುಖಂಡರು

ಮಾವಳ್ಳಿ ಶಂಕರ್ – ದಲಿತ ಮುಖಂಡರು

ವರಲಕ್ಷ್ಮಿ – ಕಾರ್ಮಿಕ ಮುಖಂಡರು

ರಾಜ್ಯದ ವಿವಿಧ ರೈತ, ಕಾರ್ಮಿಕ, ವಿದ್ಯಾರ್ಥಿ ಹಾಗೂ ಜನಪರ ಸಂಘಟನೆಗಳ ಮುಖಂಡರು

From S. S. Reddy
9739623232

Comments

Leave a Comment

Prev Post ಕಾವೇರಿ ನೀರಿನ ವಿಚಾರ; ಕಾನೂನು ತಜ್ಞರು, ವಿರೋಧ ಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್
Next Post ವಿಜಯಪುರ ವಿಮಾನ ನಿಲ್ದಾಣ: ತ್ವರಿತ ಪರಿಸರ ಅನುಮತಿಗೆ ಕೋರಿ ರಾಜ್ಯದ ಪತ್ರ

ದೇಶ ಹಾಗೂ ರಾಜ್ಯದ ಬೆಳವಣಿಗೆಗೆ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಎಲ್ಲರೂ ಜ್ಞಾನ ಹಂಚಿಕೊಂಡು ಬಾಳಬೇಕು ಬೆಂಗಳೂರಿನ ಹೆಮ್ಮೆ ಜ್ಯೋತಿ ನಿವಾಸ್ ಕಾಲೇಜು

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

Read all News