PRABHAVAA.COM

ವಿಜಯಪುರ ವಿಮಾನ ನಿಲ್ದಾಣ: ತ್ವರಿತ ಪರಿಸರ ಅನುಮತಿಗೆ ಕೋರಿ ರಾಜ್ಯದ ಪತ್ರ

Bengaluru Urban:

Font size:

ವಿಜಯಪುರ ವಿಮಾನ ನಿಲ್ದಾಣ: ತ್ವರಿತ ಪರಿಸರ ಅನುಮತಿಗೆ ಕೋರಿ ರಾಜ್ಯದ ಪತ್ರ

ವಿಜಯಪುರ ವಿಮಾನ ನಿಲ್ದಾಣ: ತ್ವರಿತ ಪರಿಸರ ಅನುಮತಿಗೆ ಕೋರಿ ರಾಜ್ಯದ ಪತ್ರ

ಬೆಂಗಳೂರು: ಅರಣ್ಯ ಮತ್ತು ಪರಿಸರ ಸಚಿವಾಲಯದ ಪೂರ್ವಾನುಮತಿ ಪಡೆಯದೆ ಈಗಾಗಲೇ ಕೈಗೆತ್ತಿಕೊಂಡಿರುವ ಯೋಜನೆಗಳಿಗೆ ಸಂಬಂಧಿಸಿದಂತೆ ಇರುವ ಮನವಿಗಳಿಗೆ ಒಪ್ಪಿಗೆ ಕೊಡಲು ಯಾವ ಅಡ್ಡಿಯೂ ಇಲ್ಲ ಎಂದು ಸುಪ್ರೀಂಕೋರ್ಟ್ ತನ್ನ ಅಂತಿಮ ತೀರ್ಪಿನಲ್ಲಿ ಹೇಳಿದೆ. ಆದ್ದರಿಂದ, ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಬಹುಕಾಲದಿಂದ ನನೆಗುದಿಯಲ್ಲಿರುವ ರಾಜ್ಯದ ಮನವಿಯನ್ನು ಆದಷ್ಟು ಬೇಗ ಪುರಸ್ಕರಿಸಬೇಕು ಎಂದು ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಎಸ್ಐಐಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯೆಲ್ ಅವರು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಈ ಸಂಬಂಧವಾಗಿ ಪತ್ರ ಬರೆಯುವಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಸೂಚನೆ ನೀಡಿದ್ದರು.
ಪರಿಸರ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೆತ್ತಿಕೊಂಡಿರುವ ಯೋಜನೆಗಳ ವಿರುದ್ಧ ವನಶಕ್ತಿ ಸಂಘಟನೆಯು ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠವು, ಸಾರ್ವಜನಿಕ ಹಿತವನ್ನು ಪರಿಗಣಿಸಿ, ಈಗಾಗಲೇ ಪ್ರಗತಿಯಲ್ಲಿರುವ ಯೋಜನೆಗಳಿಗೆ ಪೂರ್ವಾನುಮತಿಯಿಂದ ಶಾಶ್ವತ ವಿನಾಯಿತಿ ನೀಡಿ ಜುಲೈ 29ರಂದು ತೀರ್ಪು ನೀಡಿದೆ. ಇದರಿಂದಾಗಿ, ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಎದುರಾಗಿದ್ದ ಸಂಕಷ್ಟ ಬಗೆಹರಿದಿದೆ.

ಖುಷ್ಬೂ ಅವರು ತಮ್ಮ ಪತ್ರದಲ್ಲಿ, ಈಗಾಗಲೇ ಉಳಿದ ಅಗತ್ಯ ಮಾನದಂಡಗಳಿಗೆ ಅನುಗುಣವಾಗಿ ವಿಜಯಪುರ ವಿಮಾನ ನಿಲ್ದಾಣ ನಿರ್ಮಿಸಲಾಗಿದ್ದು, ಉದ್ಘಾಟನೆಗೆ ಸಜ್ಜಾಗಿದೆ. ಇದಕ್ಕಾಗಿ 618 ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ. ಇದರ ಶೀಘ್ರ ಕಾರ್ಯಾರಂಭದಿಂದ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗದಲ್ಲಿ ಕೃಷಿ ಉತ್ಪನ್ನಗಳ ರಫ್ತು, ಪ್ರವಾಸೋದ್ಯಮ, ಕೈಗಾರಿಕಾ ಹೂಡಿಕೆ, ಶೈಕ್ಷಣಿಕ ಬೆಳವಣಿಗೆ ಇವೆಲ್ಲವೂ ಸಾಧ್ಯವಾಗಲಿದೆ ಎಂದು ವಿವರಿಸಿದ್ದಾರೆ.

ಪರಿಸರ ಸಂಬಂಧಿ ಅನುಮತಿ ಸಿಕ್ಕಿ, ಮುಂದಿನ ಪ್ರಕ್ರಿಯೆಗಳು ಕೂಡ ಮುಗಿದರೆ ಇನ್ನು 3 ತಿಂಗಳಲ್ಲಿ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಬಹುದು ಎಂದು ಸಚಿವ ಎಂ ಬಿ ಪಾಟೀಲ ಹೇಳಿರುವುದನ್ನು ಇಲ್ಲಿ ನೆನೆಯಬಹುದು.

Comments

Leave a Comment

Prev Post “ಕೃಷಿ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ
Next Post ಮೈಸೂರು: ಹೆಲಿಪ್ಯಾಡ್‌ನಲ್ಲಿ ಪ್ರಧಾನಿ ಮೋದಿ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಶಾಲು ಹೊದಿಸಿ, ಹೂಗುಚ್ಛ ನೀಡಿ ಬರಮಾಡಿಕೊಂಡರು; ರಾಜ್ಯಪಾಲ ಥಾವರ್ ಚಂದ್ ಗೆಹಲೊಟ್ ಉಪಸ್ಥಿತಿ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News