PRABHAVAA.COM

ಆಧುನಿಕ ತಂತ್ರಜ್ಞಾನದೊಂದಿಗೆ ಕೃಷಿ ವಲಯದಲ್ಲಿ ನವಕ್ರಾಂತಿ: 'ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ' (CDCS) ಯೋಜನೆಗೆ ಚಾಲನೆ

Bengaluru Urban:

Font size:

ಉಪಗ್ರಹ ಚಿತ್ರೀಕರಣ, ಕೃತಕ ಬುದ್ಧಿಮತ್ತೆ (AI) ಹಾಗೂ ಡ್ರೋನ್ ಬಳಸಿ ನಿಖರ ಬೆಳೆ ದತ್ತಾಂಶ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ ಮುಂದು

ಉಪಗ್ರಹ ಚಿತ್ರೀಕರಣ, ಕೃತಕ ಬುದ್ಧಿಮತ್ತೆ (AI) ಹಾಗೂ ಡ್ರೋನ್ ಬಳಸಿ ನಿಖರ ಬೆಳೆ ದತ್ತಾಂಶ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ ಮುಂದು

​ಬೆಂಗಳೂರು, ಆ.6 -

ಕರ್ನಾಟಕ ಸರ್ಕಾರವು ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲು ಹೆಜ್ಜೆ ಇಟ್ಟಿದೆ.

ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ-ಆಡಳಿತ) ಇಲಾಖೆ [DPAR (e-Governance)] ಯು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಹಾಗೂ ಐಟಿ-ಬಿಟಿ (ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ) ಇಲಾಖೆಗಳ ಸಹಯೋಗದೊಂದಿಗೆ "ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ" (Composite Digital Crop Survey - CDCS) ಕುರಿತು ಪಾಲುದಾರರ ಮಹತ್ವದ ಕಾರ್ಯಾಗಾರವನ್ನು ಇಂದು ಬೆಂಗಳೂರಿನ ಇನ್‌ಫಾಂಟ್ರಿ ರಸ್ತೆಯಲ್ಲಿರುವ ಸಿಎಎಸ್ (CAAS) ಅಧಿಕಾರಿಗಳ ಸಂಶೋಧನೆ ಮತ್ತು ತರಬೇತಿ ಕೇಂದ್ರದಲ್ಲಿ ಯಶಸ್ವಿಯಾಗಿ ಆಯೋಜಿಸಿತು.

ಯೋಜನೆಯ ಹಿನ್ನೆಲೆ ಹಾಗೂ ಹೊಸ ತಂತ್ರಜ್ಞಾನದ ಸಂಯೋಜನೆ:

​ಕರ್ನಾಟಕ ಸರ್ಕಾರವು 2018 ರಿಂದ ಜಿಐಎಸ್ (GIS) ಆಧಾರಿತ ಮೊಬೈಲ್ ಆ್ಯಪ್ ಮೂಲಕ "ಡಿಜಿಟಲ್ ಬೆಳೆ ಸಮೀಕ್ಷೆ" (DCS) ಅನುಷ್ಠಾನಗೊಳಿಸುತ್ತಿದ್ದು, ಪ್ಲಾಟ್ (Plot) ಮಟ್ಟದಲ್ಲಿ ದೃಢೀಕೃತ ಬೆಳೆ ಮಾಹಿತಿಯನ್ನು ಸಂಗ್ರಹಿಸುತ್ತಿದೆ. ಪ್ರಸ್ತುತ ಈ ಸಮೀಕ್ಷೆಯ ದತ್ತಾಂಶದ ನಿಖರತೆ, ವಿಶ್ವಾಸಾರ್ಹತೆ ಹಾಗೂ ವೈಜ್ಞಾನಿಕ ಪರಿಶೀಲನೆಯನ್ನು ಮತ್ತಷ್ಟು ಉತ್ತಮಪಡಿಸುವ ಉದ್ದೇಶದಿಂದ:
​ಉನ್ನತ ರೆಸಲ್ಯೂಶನ್ ಉಪಗ್ರಹ ಚಿತ್ರಣ (High-Resolution Satellite Imagery)
​SAR (Synthetic Aperture Radar)
​ಡ್ರೋನ್ ಸಮೀಕ್ಷೆ (Drone Survey)
​ಜಿಐಎಸ್ ದತ್ತಾಂಶ (GIS Data)
​ಕೃತಕ ಬುದ್ಧಿಮತ್ತೆ (AI) ಹಾಗೂ ಮೆಷಿನ್ ಲರ್ನಿಂಗ್ (ML). ಈ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಪ್ರಸ್ತುತ ಲಭ್ಯವಿರುವ ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ಸಂಯೋಜಿಸಿ "ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ" (CDCS) ಮಾದರಿಯನ್ನು ಅಭಿವೃದ್ಧಿಪಡಿಸಲಾಗಿದೆ.

ಐದು ಹೋಬಳಿಗಳಲ್ಲಿ ಪೈಲಟ್ ಅನುಷ್ಠಾನ:

ರಾಜ್ಯದ ಎಲ್ಲಾ ಭೌಗೋಳಿಕ ವಿಭಾಗಗಳನ್ನು ಪ್ರತಿನಿಧಿಸುವಂತೆ ಆಯ್ದ ಐದು ಹೋಬಳಿಗಳಲ್ಲಿ ಪ್ರಾಯೋಗಿಕವಾಗಿ (Pilot Implementation) ಈ ನೂತನ ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆಯನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಕಾರ್ಯಾಗಾರದ ಮುಖ್ಯ ಉದ್ದೇಶ:

​ಈ ಸಮಾಲೋಚನಾ ಕಾರ್ಯಾಗಾರವನ್ನು ನೀತಿ ನಿರೂಪಕರು, ತಾಂತ್ರಿಕ ತಜ್ಞರು, ಸಂಶೋಧನಾ ಸಂಸ್ಥೆಗಳು ಹಾಗೂ ತಂತ್ರಜ್ಞಾನ ಪಾಲುದಾರರನ್ನು ಒಂದೇ ವೇದಿಕೆಗೆ ತಂದು, ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆಯ (CDCS) ಯಶಸ್ವಿ ಅನುಷ್ಠಾನಕ್ಕೆ ಅಗತ್ಯವಿರುವ ಸುದೃಢ ತಾಂತ್ರಿಕ ಚೌಕಟ್ಟಿನ (Technical Framework) ಕುರಿತು ಚರ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿತ್ತು.

​ಕಾರ್ಯಾಗಾರವನ್ನು ಇ-ಆಡಳಿತ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಪಂಕಜ್ ಕುಮಾರ್ ಪಾಂಡೆ, ಐಎಎಸ್ ಅವರು ಉದ್ಘಾಟಿಸಿ, ನಂತರ ಮಾತನಾಡಿದ ಅವರು, ​"ಬೆಳೆ ಸಮೀಕ್ಷೆ ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸಲು, ಕೃಷಿ ದತ್ತಾಂಶದ ನಿಖರತೆ ಹೆಚ್ಚಿಸಲು ಹಾಗೂ ಸಾಕ್ಷ್ಯಾಧಾರಿತ ಆಡಳಿತ ಮತ್ತು ಪರಿಣಾಮಕಾರಿ ನೀತಿ ನಿರೂಪಣೆಗೆ (Evidence-based Governance) ನೆರವಾಗಲು ಉದಯೋನ್ಮುಖ ಡಿಜಿಟಲ್ ತಂತ್ರಜ್ಞಾನಗಳ ಬಳಕೆ ಅತ್ಯಗತ್ಯ" ಎಂದು ಹೇಳಿದರು.

ತಾಂತ್ರಿಕ ಪ್ರಸ್ತುತಿ ಮತ್ತು ಮುಂದಿನ ನಡೆ:

​ಇ-ಆಡಳಿತ ಇಲಾಖೆ, KSRSAC ಮತ್ತು ISRO-NRSC ಸಂಸ್ಥೆಗಳ ವತಿಯಿಂದ CDCS ತಾಂತ್ರಿಕ ಚೌಕಟ್ಟು, ಮೂಲಸೌಕರ್ಯ ಅಗತ್ಯತೆಗಳು, ಅನುಷ್ಠಾನ ಕಾರ್ಯತಂತ್ರ ಹಾಗೂ ತಂತ್ರಜ್ಞಾನ ಸಂಯೋಜನೆ ಕುರಿತು ವಿಸ್ತೃತ ಪ್ರಸ್ತುತಿ ನೀಡಲಾಯಿತು.

​ಖಾಸಗಿ ತಂತ್ರಜ್ಞಾನ ಸಂಸ್ಥೆಗಳು ಮತ್ತು ಸ್ಟಾರ್ಟ್‌ಅಪ್‌ಗಳು ತಮ್ಮ ತಾಂತ್ರಿಕ ಸಾಮರ್ಥ್ಯ ಹಾಗೂ ಅನುಷ್ಠಾನ ವಿಧಾನಗಳನ್ನು ಪ್ರದರ್ಶಿಸಿದವು.

​ತಜ್ಞರು, ಸರ್ಕಾರಿ ಅಧಿಕಾರಿಗಳು ಹಾಗೂ ತಂತ್ರಜ್ಞಾನ ಪಾಲುದಾರರ ನಡುವೆ ಸಂವಾದಾತ್ಮಕ ಚರ್ಚೆಗಳು ನಡೆಯಿತು.

ರಾಜ್ಯದಲ್ಲಿ ಸುದೃಢ ಹಾಗೂ ತಂತ್ರಜ್ಞಾನ ಆಧಾರಿತ ಡಿಜಿಟಲ್ ಬೆಳೆ ಸಮೀಕ್ಷೆ ವ್ಯವಸ್ಥೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಮುಂದಿನ ಕ್ರಮಗಳನ್ನು ಕೈಗೊಳ್ಳಲು ಈ ಕಾರ್ಯಾಗಾರದಲ್ಲಿ ನಿರ್ಧರಿಸಲಾಯಿತು.

​ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ಡಾ. ರಾಜೇಂದ್ರ ಕೆ‌ ಸೇರಿದಂತೆ, ಕಾರ್ಯನಿರ್ವಾಹಕ ನಿರ್ದೇಶಕರು, ಸ್ಮಾರ್ಟ್ ಗವರ್ನೆನ್ಸ್ ಸೆಂಟರ್, ನಿರ್ದೇಶಕರು, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ನಿರ್ದೇಶಕರು, ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರ, ಉಪ ಮಹಾಪ್ರಾಬಂಧಕರು ಮತ್ತು ರಾಷ್ಟ್ರೀಯ ಮಾಹಿತಿ ಕೇಂದ್ರ ಹಾಗೂ ರಾಷ್ಟ್ರೀಯ ದೂರಸಂವೇದಿ ಕೇಂದ್ರ, ಯೋಜನಾ ನಿರ್ದೇಶಕರು, ಫ್ರೂಟ್ಸ್, ಯೋಜನೆ ಉಪಸ್ಥಿತರಿದ್ದರು

Comments

Leave a Comment

Prev Post ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಬದ್ಧ: ಸಿಎಂ ಡಿ ಕೆ ಶಿವಕುಮಾರ್ ಭರವಸೆ
Next Post 12 ಲಕ್ಷ ಕುಟುಂಬಗಳಿಗೆ ಆದಾಯದ ಮೂಲವಾದ ಸೂರ್ಯಘರ್‌

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News