19.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ
19.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
*ಇವತ್ತು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.*
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಕರಾವಳಿ ತೀರ ಭಾಗಗಳಲ್ಲಿ ಸಂಜೆ ಕಡಿಮೆ ಇದ್ದರೆ ಮುಂಜಾನೆ ಮಳೆಯಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
*ಗಾಳಿಯ ಬೀಸುವಿಕೆಯು ಅತಿ ನಿಧಾನ ಗತಿಯಲ್ಲಿ ಹಾಗೂ ನಿರ್ದಿಷ್ಟ ದಿಕ್ಕು ಇಲ್ಲದ ಕಾರಣ ಕೆಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ.*
ರಾಜ್ಯದಲ್ಲಿ ಈ ಮಳೆಯು ಮಾರ್ಚ್ 20ರ ತನಕ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮಾರ್ಚ್ 25 ಅಥವಾ 27ರ ತನಕ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.







Comments
Leave a Comment