ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರತಿಜ್ಞಾವಿಧಿ ಬೋಧನೆ
ಬೆಂಗಳೂರು, ಆಗಸ್ಟ್ 09 -
ಕರ್ನಾಟಕ ಉಚ್ಛ ನ್ಯಾಯಾಲಯದ ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ರಾಘವೇಂದ್ರ ಸೀತಾರಾಂ ಶ್ರೀವತ್ಸ, ಶ್ರೀಮತಿ ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿ ಭೂಷಣ್ ಅವರು ಗೌರವಾನ್ವಿತ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್,ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಬು ಭಖ್ರು ಸೇರಿದಂತೆ, ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಲೋಕಭವನದಲ್ಲಿ ಭಾನುವಾರ ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ 6 ಮಂದಿ ಹೆಚ್ಚುವರಿ ನ್ಯಾಯಾಧೀಶರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್, ಕರ್ನಾಟಕದ ಮುಖ್ಯನ್ಯಾಯಮೂರ್ತಿಗ ಳಾದ ವಿಭು ಬಖ್ರು ಉಪಸ್ಥಿತರಿದ್ದರು.
ರಾಘವೇಂದ್ರ ಸೀತಾರಾಮ್ ಶ್ರೀವತ್ಸ, ಶ್ರೀಮತಿ ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್, ಹೊಂಬೇಗೌಡ ಶಾಂತಿ ಭೂಷಣ್ ಅವರು ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು.






Comments
Leave a Comment