21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಸಧ್ಯಕ್ಕೆ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮಾರ್ಚ್ 24ರಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಒಂದೆರಡು ಪ್ರದೇಶಗಳಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 23ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೀದರ್ ಜಿಲ್ಲೆಯ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಮಾರ್ಚ್ 24ರಿಂದ ಮೋಡದ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.
ಮಳೆಯ ಬಗ್ಗೆ ಕಾದು ನೋಡಬೇಕಾಗಿದೆ.
ಬಂಗಾಳಕೊಲ್ಲಿಯ ಪ್ರತ್ಯಾವರ್ತ ಮಾರುತವು (Anti-cyclonic circulation) ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ಪ್ರತ್ಯಾವರ್ತ ಮಾರುತವು (Anti-cyclonic circulation) ಮುಂದುವರಿದಿದ್ದರ ಪರಿಣಾಮದಿಂದ ಗಾಳಿಯ ಭೂ ಪ್ರವೇಶಿಸುವ ಪ್ರಕ್ರಿಯೆ ದುರ್ಬಲಗೊಂಡಿದೆ.







Comments
Leave a Comment