PRABHAVAA.COM

ರಾಜ್ಯದ ರೈತರಿಗೆ ಕೂಡಲೇ ಬರ ಪರಿಹಾರ ಘೋಷಿಸಿ- ಎನ್ .ರವಿಕುಮಾರ್

Belagavi:

Font size:

ರಾಜ್ಯದ ರೈತರಿಗೆ ಕೂಡಲೇ ಬರ ಪರಿಹಾರ ಘೋಷಿಸಿ- ಎನ್ .ರವಿಕುಮಾರ್

ರಾಜ್ಯದ ರೈತರಿಗೆ ಕೂಡಲೇ ಬರ ಪರಿಹಾರ ಘೋಷಿಸಿ- ಎನ್ .ರವಿಕುಮಾರ್

ಇಂದು ಬರ ಅಧ್ಯಯನದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಲಾಯಿತು.

ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು.

ಇಂದಿನ ಕೃಷಿಯಲ್ಲಿ ಬೀಜ, ರಸಗೊಬ್ಬರ, ಕೀಟನಾಶಕ, ಕಾರ್ಮಿಕರ ಕೂಲಿ, ಯಂತ್ರೋಪಕರಣಗಳ ಬಾಡಿಗೆ ಸೇರಿದಂತೆ ರೈತರಿಗೆ ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಆದರೆ ಮಳೆ ಕೊರತೆಯಿಂದ ಬೆಳೆ ಹಾನಿಯಾದಾಗ ರೈತನ ಆದಾಯ ಮಾತ್ರವಲ್ಲ, ಆತ ಮಾಡಿದ ಮೂಲ ಹೂಡಿಕೆಯೇ ನಷ್ಟವಾಗುತ್ತದೆ. ಇಂತಹ ಸಂದರ್ಭದಲ್ಲಿ ಕೇವಲ ಸಾಂಕೇತಿಕ ಪರಿಹಾರ ನೀಡುವುದರಿಂದ ರೈತರ ಸಮಸ್ಯೆ ಬಗೆಹರಿಯುವುದಿಲ್ಲ.
ಆದ್ದರಿಂದ ಬೆಳೆಹಾನಿಯ ಪ್ರಮಾಣ, ರೈತರ ನಷ್ಟ ಹಾಗೂ ಕೃಷಿ ಉತ್ಪಾದನಾ ವೆಚ್ಚವನ್ನು ಪರಿಗಣಿಸಿ ಸೂಕ್ತ ಪರಿಹಾರ ನೀಡಬೇಕು. ಬೆಳೆ ವಿಮೆ ಪರಿಹಾರ ಪಡೆಯಲು ಅರ್ಹರಾಗಿರುವ ರೈತರಿಗೆ ವಿಮಾ ಮೊತ್ತವನ್ನು ತ್ವರಿತವಾಗಿ ದೊರಕುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ನಾನು ಸರ್ಕಾರಕ್ಕೆ ಒತ್ತಾಯಿಸುತ್ತೇನೆ.

ಕೇವಲ ಕಾಗದದ ಮೇಲಿನ ಸಮೀಕ್ಷೆ ಬೇಡ
ಸರ್ಕಾರ ಕಚೇರಿಯಲ್ಲಿ ಕುಳಿತು ಅಧಿಕಾರಿಗಳಿಂದ ವರದಿ ಪಡೆಯುವುದಕ್ಕೆ ಸೀಮಿತವಾಗದೆ, ಬರಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು.

ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಲಾವಣಿ ತೆಗೆದು ಕೊಂಡು ಕೃಷಿ ಮಾಡುವ ಲಕ್ಷಾಂತರ ಜನ ರೈತರು ಇದ್ದಾರೆ ಅಂತಹ ಅರ್ಹ ರೈತರ ಹೆಸರುಗಳು ಯಾವುದೇ ಕಾರಣಕ್ಕೂ ಕೈಬಿಡಬಾರದು. ಮತ್ತು ಬೆಳೆಹಾನಿ ಸಮೀಕ್ಷೆಯನ್ನು ತಾಲೂಕು ಹಾಗೂ ಹೋಬಳಿ ಮಟ್ಟದಿಂದ ಮಾಡದೆ ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರದ ಮೂಲಕ ಬೆಳೆಹಾನಿಯ ಪ್ರಮಾಣವನ್ನು ಸರಿಯಾಗಿ ದಾಖಲಿಸಿ, ಪರಿಹಾರಕ್ಕೆ ಅರ್ಹರಾದ ಪ್ರತಿಯೊಬ್ಬ ರೈತನಿಗೂ ಸರ್ಕಾರದ ನೆರವು ತಲುಪುವಂತೆ ವ್ಯವಸ್ಥೆ ಮಾಡಬೇಕು.

ರೈತರು ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿಯನ್ನು ಸರ್ಕಾರ ನಿರ್ಮಿಸಬಾರದು ಎಂದು ನಾನು ಆಗ್ರಹಿಸುತ್ತೇನೆ.

ಸಾಲದ ಹೊರೆ ಹೆಚ್ಚುತ್ತಿರುವ ರೈತರಿಗೆ ನೆರವು ನೀಡಿ
ಬೆಳೆ ನಷ್ಟದಿಂದ ರೈತರ ಆದಾಯ ಕಡಿಮೆಯಾಗಿರುವ ಸಂದರ್ಭದಲ್ಲಿ ಕೃಷಿ ಸಾಲ ಹಾಗೂ ಇತರ ಆರ್ಥಿಕ ಹೊರೆ ರೈತರ ಮೇಲೆ ಮತ್ತಷ್ಟು ಒತ್ತಡವನ್ನು ಉಂಟುಮಾಡುತ್ತಿದೆ. ಬರಪೀಡಿತ ಪ್ರದೇಶಗಳಲ್ಲಿ ರೈತರ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಸರ್ಕಾರ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ರೈತರು ಮುಂದಿನ ಹಂಗಾಮಿನ ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಅಗತ್ಯವಿರುವ ನೆರವು ಮತ್ತು ಸೌಲಭ್ಯಗಳನ್ನು ಕಲ್ಪಿಸಬೇಕು ಕುಡಿಯುವ ನೀರು, ಮೇವು ಸೇರಿದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿ ಬರದ ಪರಿಣಾಮ ಕೇವಲ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯೂ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಮೊದಲು ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

ಅಗತ್ಯವಿರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರುಗಳಿಗೆ ಮೇವು ಹಾಗೂ ರೈತರಿಗೆ ಅಗತ್ಯವಿರುವ ಮೂಲಭೂತ ನೆರವನ್ನು ಒದಗಿಸಬೇಕು. ಅಧಿಕಾರಿಗಳು ನಿಯಮಿತವಾಗಿ ಪರಿಸ್ಥಿತಿಯನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವ ವ್ಯವಸ್ಥೆ ಮಾಡಬೇಕು ರೈತರ ವಿಚಾರದಲ್ಲಿ ರಾಜಕೀಯ ಮಾಡದೆ ಸರ್ಕಾರ ಕಾರ್ಯನಿರ್ವಹಿಸಲಿ
ರೈತರ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ರಾಜಕೀಯ ಆರೋಪ-ಪ್ರತ್ಯಾರೋಪಗಳಲ್ಲಿ ಕಾಲಹರಣ ಮಾಡದೆ ನೆಲಮಟ್ಟದಲ್ಲಿ ಕೆಲಸ ಮಾಡಿ ರೈತರ ನೋವು ಮತ್ತು ನಷ್ಟವನ್ನು ಅರಿತು ತಕ್ಷಣ ಪರಿಹಾರ ಘೋಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸರ್ಕಾರ ವಿಫಲವಾದರೆ, ಬಿಜೆಪಿ ರೈತರ ಪರವಾಗಿ ಧ್ವನಿ ಎತ್ತಿ ರಾಜ್ಯಾದ್ಯಂತ ಮತ್ತು ಬರುವ ಅಧಿವೇಶನದಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದೆ.

ರೈತ ದೇಶದ ಬೆನ್ನೆಲುಬು ಎಂದು ಹೇಳುವುದಷ್ಟೇ ಸಾಕಾಗುವುದಿಲ್ಲ ಸಂಕಷ್ಟದ ಸಂದರ್ಭದಲ್ಲಿ ರೈತರ ಬೆನ್ನಿಗೆ ಸರ್ಕಾರ ನಿಲ್ಲಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ತಕ್ಷಣ ಪರಿಹಾರ ನೀಡಿ, ಮುಂದಿನ ಕೃಷಿ ಹಂಗಾಮಿಗೆ ರೈತರು ಸಿದ್ಧರಾಗುವಂತೆ ಸರ್ಕಾರ ಅಗತ್ಯ ನೆರವು ನೀಡಬೇಕು” ಬರ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಕ್ಷಣ ಉನ್ನತ ಮಟ್ಟದ ಸಭೆ ನಡೆಸಬೇಕು. ಬೆಳೆಹಾನಿಯ ಸಮಗ್ರ ಸಮೀಕ್ಷೆ, ತ್ವರಿತ ಪರಿಹಾರ, ಬೆಳೆ ವಿಮೆ ವಿತರಣೆ, ಕುಡಿಯುವ ನೀರು ಮತ್ತು ಮೇವಿನ ವ್ಯವಸ್ಥೆ ಸೇರಿದಂತೆ ರೈತರ ಹಿತಕ್ಕಾಗಿ ಸಮಗ್ರ ಪ್ಯಾಕೇಜ್ ರೂಪಿಸಬೇಕು ಎಂದು ನಾನು ಸರ್ಕಾರಕ್ಕೆ ಒತ್ತಾಯಿಸುತ್ತೇನೆ.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸುಭಾಸ್ ಪಾಟೀಲ, ಶಾಸಕರಾದ ಅಭಯ ಪಾಟೀಲ, ವಿಠ್ಠಲ ಹಲಗೇಕರ್, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ರೈತ ಮೋರ್ಚಾ ಅಧ್ಯಕ್ಷರಾದ ಜಗದೀಶ ಬೂದಿಹಾಳ, ಮಾಧ್ಯಮ ಸಂಚಾಲಕರಾದ ಸಚಿನ್ ಕಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ಧನಶ್ರೀ ದೇಸಾಯಿ, ರಾಜಶೇಖರ ಡೋಣಿ, ಮುರಗೇಂದ್ರಗೌಡ ಪಾಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Comments

Leave a Comment

Prev Post 7ನೇ ಗ್ಯಾರಂಟಿ ಮೂಲಕ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು: ಸಿಎಂ ಡಿ ಕೆ ಶಿವಕುಮಾರ್
Next Post ತೇರೆ - ಮೇರೇ ಸಪ್ನೆ - ಕೂಡಿ ಬಾಳೋಣ' ವಿವಾಹ ಪೂರ್ವ ಸಂವಹನ ಯೋಜನೆ ಜಾರಿ - ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News