PRABHAVAA.COM

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ರಾಲಿಯ ಸ್ಥಳ ‘ಶುದ್ಧೀಕರಣ’ಕ್ಕೆ ಸಿಎಂ ಡಿ ಕೆ ಶಿವಕುಮಾರ್ ಖಂಡನೆ

Bengaluru Urban:

Font size:

ಸಂವಿಧಾನದ ಮೌಲ್ಯಗಳ ಮೇಲಿನ ದಾಳಿ ಎಂದು ಆಕ್ರೋಶ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ರಾಲಿಯ ಸ್ಥಳ ‘ಶುದ್ಧೀಕರಣ’ಕ್ಕೆ ಸಿಎಂ ಡಿ ಕೆ ಶಿವಕುಮಾರ್ ಖಂಡನೆ

ಸಂವಿಧಾನದ ಮೌಲ್ಯಗಳ ಮೇಲಿನ ದಾಳಿ ಎಂದು ಆಕ್ರೋಶ

ಬೆಂಗಳೂರು, ಆ.13:

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳ ‘ಶುದ್ಧೀಕರಣ’ ಮಾಡಿರುವ ಕ್ರಮವನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಖಂಡಿಸಿದ್ದು, ಇದೊಂದು ನಾಚಿಕೆಗೇಡಿನ ಕೃತ್ಯ ಹಾಗೂ ಸಂವಿಧಾನಕ್ಕೆ ಎಸಗಿದ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಶಿವಕುಮಾರ್ ಅವರು, "ಈ ಘಟನೆಯು ಕೇವಲ ಒಬ್ಬ ವ್ಯಕ್ತಿಗೆ ಮಾಡಿದ ಅಪಮಾನವಲ್ಲ, ಬದಲಿಗೆ ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳ ಮೇಲಿನ ನೇರ ದಾಳಿ. ಅಲ್ಲದೆ, ಆಧುನಿಕ ಭಾರತದಲ್ಲಿ ಜಾತಿ ತಾರತಮ್ಯದ ಅಸಹ್ಯಕರ ನೆನಪು" ಎಂದು ಕಿಡಿಕಾರಿದ್ದಾರೆ.

"ಖರ್ಗೆಯವರು ದೇಶದ ಅತ್ಯಂತ ಗೌರವಾನ್ವಿತ ಜನನಾಯಕರು ಮತ್ತು ಜೀವಮಾನವಿಡೀ ಜನಸೇವೆ ಮಾಡಿದವರು. ದಲಿತ ನಾಯಕರೊಬ್ಬರು ಭಾಷಣ ಮಾಡಿದರು ಎಂಬ ಕಾರಣಕ್ಕೆ ಸಾರ್ವಜನಿಕ ಸ್ಥಳವೊಂದಕ್ಕೆ ಶುದ್ಧೀಕರಣ ಬೇಕು ಎಂದು ಬಿಂಬಿಸಿರುವುದು ಜಾತಿ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ” ಎಂದು ಹೇಳಿದರು.

"ಇದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರವಲ್ಲ, ಸಮಾನತೆ, ಸಹೋದರತೆ ಮತ್ತು ಮಾನವ ಘನತೆಯನ್ನು ನಂಬುವ ಪ್ರತಿಯೊಬ್ಬ ಭಾರತೀಯನಿಗೂ ಎಸಗಿದ ಅಪಮಾನ" ಎಂದು ಅಭಿಪ್ರಾಯಪಟ್ಟಿದ್ದಾರೆ.

“ಅಸ್ಪೃಶ್ಯತೆಯು ಕೇವಲ ಅಭಿಪ್ರಾಯದ ವಿಷಯವಲ್ಲ, ಅದೊಂದು ಸಾಂವಿಧಾನಿಕ ಅಪರಾಧ ಮತ್ತು ನೈತಿಕ ಕಳಂಕ. ಇಂತಹ ಆಚರಣೆಗಳನ್ನು ಸಮರ್ಥಿಸಲು ಯತ್ನಿಸುವವರು ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನ ಶಿಲ್ಪಿಗಳು ಕಲ್ಪಿಸಿಕೊಂಡ ಗಣರಾಜ್ಯದ ತಡಿಪಾಯದ ಮೇಲೆಯೇ ದಾಳಿ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

"ಸಾರ್ವಜನಿಕ ಜೀವನದಲ್ಲಿ ಇಂತಹ ತಾರತಮ್ಯಗಳು ಮರುಕಳಿಸುವುದನ್ನು ಭಾರತ ಸಹಿಸುವುದಿಲ್ಲ ಮತ್ತು ಸಹಿಸಬಾರದು. ಜಾತ್ಯತೀತವಾಗಿ ಪ್ರತಿಯೊಬ್ಬ ಪ್ರಜೆಯೂ ಸಮಾನ ಘನತೆ ಮತ್ತು ಗೌರವಕ್ಕೆ ಅರ್ಹನಾಗಿದ್ದಾನೆ. ಇಂತಹ ಕೃತ್ಯಗಳನ್ನು ಸಾಮಾನ್ಯಗೊಳಿಸುವ ಅಥವಾ ಸಮರ್ಥಿಸುವ ಯಾವುದೇ ಪ್ರಯತ್ನವನ್ನು ಸ್ಪಷ್ಟವಾಗಿ ತಿರಸ್ಕರಿಸಬೇಕು" ಎಂದು ತಿಳಿಸಿದ್ದಾರೆ.

“ಈ ವಿಚಾರದಲ್ಲಿ ನಾನು ಕಾಂಗ್ರೆಸ್ ಅಧ್ಯಕ್ಷರ ಜೊತೆ ದೃಢವಾಗಿ ನಿಲ್ಲುತ್ತೇನೆ. ಈ ಘಟನೆಯ ವಿರುದ್ಧ ಪ್ರಜಾಪ್ರಭುತ್ವವಾದಿ ಶಕ್ತಿಗಳು ಧ್ವನಿ ಎತ್ತಬೇಕು” ಕರೆ ನೀಡಿದ್ದಾರೆ.

"ಇಂತಹ ತಾರತಮ್ಯದ ಮುಂದೆ ಮೌನವಾಗಿರುವುದು ನಮ್ಮ ಸಮಾಜವನ್ನು ವಿಭಜಿಸಲು ಯತ್ನಿಸುವವರಿಗೆ ಮತ್ತಷ್ಟು ಉತ್ತೇಜನ ನೀಡುತ್ತದೆ. ಸಮಾನತೆ, ನ್ಯಾಯ ಮತ್ತು ಎಲ್ಲರ ಘನತೆಯ ಸಾಂವಿಧಾನಿಕ ಭರವಸೆಯ ಮೇಲೆ ರೂಪುಗೊಂಡ ಭಾರತಕ್ಕೆ ನಮ್ಮ ಅಚಲ ಬದ್ಧತೆಯನ್ನು ಪುನರುಚ್ಚರಿಸಬೇಕಾಗಿದೆ" ಎಂದು ಸ್ಪಷ್ಟಪಡಿಸಿದರು.

Comments

Leave a Comment

Prev Post ಶ್ಲೋಕ, ಸುಭಾಷಿತಗಳ ಮೂಲಕ ಗೆಳೆಯರು, ಗಣ್ಯರು, ಹಿರಿಯ ನಾಯಕರಿಗೆ ಸಿಎಂ ಸಂತಾಪ
Next Post ಪೌತಿ ಖಾತೆ ತಿದ್ದುಪಡಿ: ಹೊರ ರಾಜ್ಯ–ವಿದೇಶಿ ವಾರಸುದಾರರ ಅರ್ಜಿಗೆ ಸ್ಪಷ್ಟ ಮಾರ್ಗಸೂಚಿ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News