PRABHAVAA.COM

ಜಮೀರ್ ಅಹಮದ್ ಖಾನ್ ರನ್ನು ಸಂಪುಟದಿಂದ ವಜಾ ಮಾಡಿ: ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹ.

Dakshina Kannada:

Font size:

ಜಮೀರ್ ಅಹಮದ್ ಖಾನ್ ರನ್ನು ಸಂಪುಟದಿಂದ ವಜಾ ಮಾಡಿ: ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹ.

from Jayaram Udupi
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯದ ಕೊರತೆಯಿಂದಾಗಿ ಹಾಜರಾಗಲು ಸಾಧ್ಯವಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ಅವರು ನೀಡಿರುವ ಹೇಳಿಕೆ ಸಂವಿಧಾನಕ್ಕೆ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟದ ಗೌರವಕ್ಕೆ ಅಪಚಾರವಾಗಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟುವಾಗಿ ಖಂಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಸಚಿವರೊಬ್ಬರು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳಲು ಸಮಯವಿಲ್ಲ ಎಂದು ಹೇಳಿರುವುದು ಬಾಲಿಶ ಹಾಗೂ ಹಾಸ್ಯಾಸ್ಪದ ಹೇಳಿಕೆಯಾಗಿದೆ. ಇಂತಹ ಹೇಳಿಕೆಯಿಂದ ಇಡೀ ಕರ್ನಾಟಕವೇ ತಲೆತಗ್ಗಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಬದಲು, ಮುಖ್ಯಮಂತ್ರಿ ಅವರು ಅವರನ್ನು ಸಂಪುಟದಿಂದ ವಜಾಗೊಳಿಸುವುದನ್ನು ಬಿಟ್ಟು, ಅವರ ಮನವಿಯನ್ನು ಮನ್ನಿಸಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬದಲಿ ವ್ಯವಸ್ಥೆ ಮಾಡಿರುವುದು ಸರಿಯಲ್ಲ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಟೀಕಿಸಿದ್ದಾರೆ.

“ನಾನು ಒಬ್ಬ ಸೈನಿಕನಾಗಿ, ಸಂಸತ್ ಸದಸ್ಯನಾಗಿ ಹಾಗೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿ ಈ ಬೆಳವಣಿಗೆಯನ್ನು ಕಟುವಾಗಿ ಖಂಡಿಸುತ್ತೇನೆ. ಮುಖ್ಯಮಂತ್ರಿ ಅವರು ಕೂಡಲೇ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಕನ್ನಡಿಗರ, ಕನ್ನಡ ನಾಡಿನ ಹಾಗೂ ಕರ್ನಾಟಕದ ಸ್ವಾಭಿಮಾನವನ್ನು ಉಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಅವರು ಆಗ್ರಹಿಸಿದ್ದಾರೆ.

Comments

Leave a Comment

Prev Post ಆಗಸ್ಟ್ 17ರ ವಿಧಾನಸಭಾ ಅಧಿವೇಶನ – 20 ಪ್ರಮುಖ ಗಮನ ಸೆಳೆಯುವ ಸೂಚನೆಗಳ ಚರ್ಚೆ
Next Post ಯುವ ಕರ್ನಾಟಕ–ನವ ಭಾರತ: ಅಭಿವೃದ್ಧಿಯ ತೇರನ್ನು ಎಳೆಯಲು ಕನ್ನಡದ ಕುಲಕೋಟಿ ಕೈಜೋಡಿಸಿ: ಸಿಎಂ ಡಿ ಕೆ ಶಿವಕುಮಾರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News