PRABHAVAA.COM

ಇಂಡಿ ತಾಲ್ಲೂಕಿನ ಹೊರ್ತಿ ಸೇರಿದಂತೆ ಬರಪೀಡಿತ ಹಲವು ಗ್ರಾಮಗಳಿಗೆಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭೇಟಿ

Vijayapura:

Font size:

ರೈತರ ಸಂಕಷ್ಟಕ್ಕೆ ಸ್ಪಂದನೆ; ಸಚಿವ ಸಂಪುಟದಲ್ಲಿ ಚರ್ಚಿಸಿ ಪರಿಹಾರಕ್ಕೆ ಕ್ರಮ

ವಿಜಯಪುರ: ಜಿಲ್ಲೆಯ ಇಂಡಿ ತಾಲ್ಲೂಕಿನ ಹೊರ್ತಿ ಗ್ರಾಮ ಸೇರಿದಂತೆ ಹಲವು ಹಳ್ಳಿಗಳಲ್ಲಿನ ಬರಪರಿಸ್ಥಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಇಂದು ಖುದ್ದು ವೀಕ್ಷಿಸಿ, ರೈತರಿಗೆ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಕೈ ಕೊಟ್ಟ ಮುಂಗಾರು ಮಳೆಯಿಂದಾಗಿ ತೊಗರಿ, ಈರುಳ್ಳಿ, ಸೂರ್ಯಕಾಂತಿ, ಹತ್ತಿ ಸೇರಿದಂತೆ ಹಲವು ಬೆಳೆಗಳು ಕೈಕೊಟ್ಟಿದ್ದು, ಸಜ್ಜೆಯೂ ಬೆಳೆಯದಷ್ಟು ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ.ರೈತರ ನೋವು, ನಷ್ಟ ಹಾಗೂ ಅಸಹಾಯಕತೆಯನ್ನು ನೇರವಾಗಿ ಆಲಿಸಿದಾಗ ಮನಸ್ಸಿಗೆ ನೋವಾಯಿತು ಎಂದು ಅವರು ಹೇಳಿದ್ದಾರೆ.

ಈ ಸಂಕಷ್ಟವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದು, ಸಚಿವ ಸಂಪುಟದಲ್ಲಿ ಚರ್ಚಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಸಭೆ ನಡೆಸಿ ರೈತರ ಹಿತದೃಷ್ಟಿಯಿಂದ ಮುಂದಿನ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದರು.

ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಸುಮಾರು 2.5 ಲಕ್ಷ ರೈತರು ಬೆಳೆ ವಿಮೆ ಮಾಡಿಸಿರುವುದು ಆಶಾದಾಯಕ ಬೆಳವಣಿಗೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಬೆಳೆ ವಿಮೆ ರೈತರಿಗೆ ಹೆಚ್ಚಿನ ನೆರವು ನೀಡಲಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ರೈತರು ಬೆಳೆ ವಿಮೆಯ ವ್ಯಾಪ್ತಿಗೆ ಬರಬೇಕು. ಕೇಂದ್ರ ಸರ್ಕಾರದ ಗಮನಕ್ಕೂ ಈ ಗಂಭೀರ ಬರ ಪರಿಸ್ಥಿತಿಯನ್ನು ತಂದು, ಅಲ್ಲಿಂದಲೂ ಅಗತ್ಯ ಪರಿಹಾರ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ರೈತರ ಬೆವರಿನಿಂದ ನಾಡಿನ ಅನ್ನದ ಬಟ್ಟಲು ತುಂಬುತ್ತದೆ; ಅವರ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಸಚಿವರು ಅಭಿಪ್ರಾಯ ಪಟ್ಟರು

ಜಿಲ್ಲಾಧಿಕಾರಿಗಳಾದ ಶ್ರೀ ಆನಂದ್ ಕೆ, ಜಿಲ್ಲಾ ಪಂಚಾಯತ್ ಸಿಇಒ ಶ್ರೀ ರಿಷಿ ಆನಂದ್, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಇಂದಿನ ಉಪಸ್ಥಿತರಿದ್ದರು

Comments

Leave a Comment

Prev Post ಕೆ ಪಿ ಎಸ್ ಸಿ ಅಧಿಸೂಚನೆ – ಕನಿಷ್ಠ ವಯೋಮಿತಿ 21 ವರ್ಷ, ಗರಿಷ್ಠ ವಯೋಮಿತಿಗೆ ಸರ್ಕಾರದ ಆದೇಶದಂತೆ 5 ವರ್ಷ ಸಡಿಲಿಕೆ
Next Post ಮುಂಬೈನಲ್ಲಿ ಬಸವ ಪುತ್ಥಳಿ ಸ್ಥಾಪಿಸಿ: ಈಶ್ವರ ಖಂಡ್ರೆ ಮನವಿ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News