PRABHAVAA.COM

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಸೂಚನೆ

Bengaluru Urban:

Font size:

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಸೂಚನೆ

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಸೂಚನೆ

- ಯೋಜನೆಗಳ ಅನುಷ್ಠಾನಕ್ಕೆ ಕಾಲಮಿತಿ ನಿಗದಿ

ಬೆಂಗಳೂರು, ಅ,17- ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ. ರಘುಮೂರ್ತಿ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನ ಸಭೆ ನಡೆಸಿದ ಅವರು,ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸಚಿವರು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಮಾತನಾಡಿದ ಸಚಿವ ರಘುಮೂರ್ತಿ ಅವರು, ಇಲಾಖೆಯಲ್ಲಿ ಈಗಾಗಲೇ ಕೈಗೊಂಡಿರುವ ಎಲ್ಲ ಯೋಜನೆಗಳ ಅನುಷ್ಠಾನದ ಸಮಗ್ರ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಾವ ಯೋಜನೆಗಳು ಯಾವ ಹಂತದಲ್ಲಿದೆ? ಬಾಕಿ ಇರುವ ಕಾಮಗಾರಿಗಳು ಯಾವುವು ಹಾಗೂ ಅವುಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳೇನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನೆಗಳು ನೇರವಾಗಿ ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಗೆ ಸಂಬಂಧಿಸಿರುವುದರಿಂದ ಅವುಗಳ ಅನುಷ್ಠಾನದಲ್ಲಿ ವಿಳಂಬವಾಗಬಾರದು ಎಂಬುದನ್ನು ಸಚಿವರು ಸಭೆಯಲ್ಲಿ ಸ್ಪಷ್ಟಪಡಿಸಿದರು.
ಬಾಕಿ ಇರುವ ಯೋಜನೆಗಳನ್ನು ಗುರುತಿಸಿ, ಅವುಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಶೇಷವಾಗಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು ಶಿಕ್ಷಣ, ವಸತಿ, ಆರ್ಥಿಕ ಸಬಲೀಕರಣ, ಮೂಲಸೌಕರ್ಯ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿರುವುದರಿಂದ ಅವುಗಳ ಅನುಷ್ಠಾನದಲ್ಲಿ ಸಮನ್ವಯ ಮತ್ತು ವೇಗ ಅಗತ್ಯಎಂದು ಹೇಳಿದರು

ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ
ಕಾರ್ಯದರ್ಶಿ ಕನಗವಲ್ಲಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ದುಡಘಂಟಿ, ಇಲಾಖೆಯ ನಿರ್ದೇಶಕ ಅಶೋಕ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Comments

Leave a Comment

Prev Post ಎಸ್ ಐಆರ್ ಪ್ರಕ್ರಿಯೆಯಲ್ಲಿ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ನಾಗರಿಕ ಸಂಘಟನೆಗಳ ಮನವಿ
Next Post ಕೈಗಾರಿಕಾ ತಯಾರಿಕಾ ತಾಣವಾಗಿ ತುಮಕೂರು ನೋಡ್ ಅಭಿವೃದ್ಧಿ 7 ಸಾವಿರ ಕೋಟಿ ಹೂಡಿಕೆ, 88 ಸಾವಿರ ಉದ್ಯೋಗ: ಎಂ ಬಿ ಪಾಟೀಲ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News