PRABHAVAA.COM

ಸಂಭೋಳ್ಯದ ಬಾಲಕ ಸುಮಂತ್ ಬಾಲಕನ ಸಾವು ಪ್ರಕರಣ: ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭ

Dakshina Kannada:

Font size:

ಸಂಭೋಳ್ಯದ ಬಾಲಕ ಸುಮಂತ್ ಬಾಲಕನ ಸಾವು ಪ್ರಕರಣ: ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭ

From Jayram Udupi

ಮಂಗಳೂರು/ ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ ಸಮೀಪದ ಸಂಭೋಳ್ಯದ ಬಾಲಕ ಸುಮಂತ್ ಅವರ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಹಾಗೂ ಸತ್ಯಾಸತ್ಯತೆ ಪತ್ತೆಹಚ್ಚುವ ನಿಟ್ಟಿನಲ್ಲಿ ಬ್ರೈನ್ ಮ್ಯಾಪಿಂಗ್ ಹಾಗೂ ಮಂಪರು ಪರೀಕ್ಷೆ ಪ್ರಕ್ರಿಯೆ ಆರಂಭಿಸಲಾಗಿದೆ.

ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಬ್ರೈನ್ ಪರೀಕ್ಷೆ ಪ್ರಕ್ರಿಯೆ ಆರಂಭವಾಗಿದೆ.

ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಕುಟುಂಬದ ಐವರನ್ನು ಈಗಾಗಲೇ ಬೆಂಗಳೂರಿನ (FSL) ಎಫ್‌ಎಸ್‌ಎಲ್‌ಗೆ ಕರೆದೊಯ್ದು ಮೊದಲ ಹಂತದ ತನಿಖೆ ನಡೆಸಲಾಗಿದೆ.

ಆ.10 ರಂದು ಮೃತ ಸುಮಂತ್ ತಂದೆ ಸುಬ್ರಹ್ಮಣ್ಯ ನಾಯಕ್ ಹಾಗೂ ತಾಯಿ ರತ್ನಾವತಿ ಅವರನ್ನು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ತೀವ್ರ ವಿಚಾರಣೆಗೆ ಒಳಪಡಿಸಲಾಯಿತು.
ಬಳಿಕ ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಂತ್ ಅವರ ಸಹೋದರ ಸುದರ್ಶನ್ ಅವರನ್ನು ಮಧ್ಯಾಹ್ನದಿಂದ ಸಂಜೆಯವರೆಗೆ ಪ್ರಶ್ನಿಸಲಾಯಿತು.

ಆ.11 ರಂದು ಪೆರ್ಲದಲ್ಲಿ ಅರ್ಚಕರಾಗಿರುವ ರತ್ನಾವತಿ ಅವರ ಸಹೋದರ ರಾಧಾಕೃಷ್ಣ ಹಾಗೂ ಕಾಸರಗೋಡಿನ ಸಂಬಂಧಿ ಅಡುಗೆ ವೃತ್ತಿಯಲ್ಲಿರುವ ಲಕ್ಷ್ಮೀನಾರಾಯಣ ಅವರನ್ನು ವಿಚಾರಣೆ ನಡೆಸಿ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.

ಈ ಐವರಿಂದ ಪಡೆದ ಉತ್ತರಗಳು ಹಾಗೂ ತನಿಖೆ ವೇಳೆ ದಾಖಲಾದ ಮಾಹಿತಿಯನ್ನು ತಾಳೆಹಾಕಿ ಪರಿಶೀಲಿಸುವ ಕಾರ್ಯವನ್ನು FSL ತಜ್ಞರು ನಡೆಸುತ್ತಿದ್ದಾರೆ.
ಮುಂದಿನ ಹಂತದ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆಗಾಗಿ ಮತ್ತೆ ಹಾಜರಾಗುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ.
ಅಲ್ಲದೆ ಕುಟುಂಬದ ಐವರ ಮೊದಲ ಹಂತದ ಪರೀಕ್ಷೆ ಹಾಗೂ ವಿಚಾರಣೆಯ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಪ್ರಕರಣದಲ್ಲಿ ಗುರುತಿಸಲಾಗಿರುವ ಇತರ ಶಂಕಿತ ವ್ಯಕ್ತಿಗಳ ಮೇಲೂ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ನಡೆಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ.

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯ 9ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ ಸುಮಂತ್, 2026ರ ಜನವರಿ 14ರಂದು ಮುಂಜಾನೆ ನಾಳಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧನುಪೂಜೆಗಾಗಿ ತೆರಳಿದ್ದ ವೇಳೆ ನಿಗೂಢವಾಗಿ ಸಾವನ್ನಪ್ಪಿದ್ದ.

ಬಾಲಕನ ಸಾವು ಸಹಜವಲ್ಲ, ಆತನನ್ನು ವ್ಯವಸ್ಥಿತವಾಗಿ ಹತ್ಯೆ ಮಾಡಲಾಗಿದೆ ಎಂಬ ಅನುಮಾನಗಳು ಆರಂಭದಿಂದಲೇ ವ್ಯಕ್ತವಾಗಿದ್ದವು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಪೊಲೀಸರು ವಿಶೇಷ ತಂಡ ರಚಿಸಿ ಹಲವು ಆಯಾಮಗಳಲ್ಲಿ ತನಿಖೆ ನಡೆಸಿದರೂ ಈವರೆಗೆ ಪ್ರಕರಣದ ನಿಗೂಢತೆಗೆ ಸ್ಪಷ್ಟ ಉತ್ತರ ದೊರೆತಿರಲಿಲ್ಲ.
ಇದೀಗ ತನಿಖೆಯನ್ನು ಮತ್ತಷ್ಟು ವೈಜ್ಞಾನಿಕವಾಗಿ ಮುನ್ನಡೆಸಿರುವ ಪೊಲೀಸರು, ಹೇಳಿಕೆಗಳಲ್ಲಿನ ವ್ಯತ್ಯಾಸಗಳು ಹಾಗೂ ತನಿಖೆಯಿಂದ ಲಭ್ಯವಾಗಿರುವ ಮಾಹಿತಿಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸುವ ಪ್ರಯತ್ನ ನಡೆಸಿದ್ದಾರೆ.

Comments

Leave a Comment

Prev Post ಸೆಪ್ಟೆಂಬರ್‌ 7ರೊಳಗೆ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌
Next Post ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ ಕೆ ಶಿವಕುಮಾರ್

ಮಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ; ದುಷ್ಕರ್ಮಿಗಳು ಪರಾರಿ.

ಮಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ; ದುಷ್ಕರ್ಮಿಗಳು ಪರಾರಿ.

ಬೆಂಗಳೂರು ಪೊಲೀಸ್‌ ತ್ವರಿತ ಕಾರ್ಯಾಚರಣೆ: ಇಬ್ಬರು ವೃದ್ಧರ ರಕ್ಷಣೆ

ಬೆಂಗಳೂರು ಪೊಲೀಸ್‌ ತ್ವರಿತ ಕಾರ್ಯಾಚರಣೆ: ಇಬ್ಬರು ವೃದ್ಧರ ರಕ್ಷಣೆ

ಮಂಗಳೂರು ನಗರದಲ್ಲಿ ಬಾಂಗ್ಲಾದೇಶಿ ಅಕ್ರಮ ವಲಸೆ ಜಾಲ ಭೇದನೆ – ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳು ಬಂಧನ

ಮಂಗಳೂರು ನಗರದಲ್ಲಿ ಬಾಂಗ್ಲಾದೇಶಿ ಅಕ್ರಮ ವಲಸೆ ಜಾಲ ಭೇದನೆ – ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳು ಬಂಧನ

ಬಂಟ್ವಾಳ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ, ಆರೋಪಿ ಪರಾರಿಯಲ್ಲಿ

ಬಂಟ್ವಾಳ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ, ಆರೋಪಿ ಪರಾರಿಯಲ್ಲಿ

ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಚೇತನ್ ಮಂಗಳೂರು ಸಮೀಪ ಪೊಲೀಸರ ಬಲೆಗೆ!

ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಚೇತನ್ ಮಂಗಳೂರು ಸಮೀಪ ಪೊಲೀಸರ ಬಲೆಗೆ!

ಡ್ರಗ್ ಪೆಡ್ಲರ್ ಜಲೀಲ್ ಪರಾರಿ ;ಸಮಾಜ ಸೇವೆ ಹೆಸರಿನಲ್ಲಿ ಡ್ರಗ್ ದಂಧೆ ಮಾಡುತ್ತಿದ್ದ ಜಲೀಲ್ ಪರಾರಿ

ಡ್ರಗ್ ಪೆಡ್ಲರ್ ಜಲೀಲ್ ಪರಾರಿ ;ಸಮಾಜ ಸೇವೆ ಹೆಸರಿನಲ್ಲಿ ಡ್ರಗ್ ದಂಧೆ ಮಾಡುತ್ತಿದ್ದ ಜಲೀಲ್ ಪರಾರಿ

Read all News