ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ಬಂಧನ.
From Jayaram Udupi
ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ:
ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ಬಂಧನ.
ಉಡುಪಿ:
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ನಡೆದ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 7ರಂದು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರ ತಲೆಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿದ್ದ ಕುಂದಾಪುರ ಮತ್ತು ಕೊಲ್ಲೂರು ಠಾಣೆಯ ಪೊಲೀಸರ ತಂಡ, ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಅನುಜ್ ಪಾಟೀಲ್‌ನನ್ನು ವಶಕ್ಕೆ ಪಡೆದಿದೆ.
ಆರೋಪಿಯನ್ನು ಕರೆತರುತ್ತಿದ್ದ ವೇಳೆ ಆತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕೊಲ್ಲೂರು ಠಾಣೆ ಪಿಎಸ್ಐ ವಿನಯ್ ಅವರ ಆಯುಧವನ್ನು ಕಸಿದುಕೊಂಡು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ಆತ್ಮರಕ್ಷಣೆಗಾಗಿ ಕುಂದಾಪುರ ಪಿಎಸ್ಐ ನಂಜ ನಾಯಕ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಅನುಜ್ ಪಾಟೀಲ್‌ನನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ಆರೋಪಿ ವಿರುದ್ಧ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 11 ಪ್ರಕರಣಗಳು ದಾಖಲಾಗಿದ್ದು, ಮಹಾರಾಷ್ಟ್ರದಲ್ಲಿ ಎಂಕೋಕಾ ಕಾಯ್ದೆಯಡಿ ಪ್ರಕರಣವೂ ದಾಖಲಾಗಿದೆ.







Comments
Leave a Comment