ರಾಜ್ಯದಲ್ಲಿ ಎಲ್‌ಪಿಜಿ ಸಮಸ್ಯೆ ನಿವಾರಣೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಕ್ರಮ – ಕೇಂದ್ರದೊಂದಿಗೆ ಸಮನ್ವಯ, ಪೂರೈಕೆ ಹೆಚ್ಚಿಸಲು ಒತ್ತಾಯ

Bengaluru Urban:

Font size:

ಒಂದು ವಾರದೊಳಗೆ ವಾಣಿಜ್ಯ ಅಡಿಗೆ ಅನಿಲ ಬಳಸುವವರು ಕಡ್ಡಾಯವಾಗಿ GAIL ನಲ್ಲಿ ನೊಂದಣಿ ಮಾಡಿಸಬೇಕು .

ಬೆಂಗಳೂರು,ಮಾ.23 -

ರಾಜ್ಯದಲ್ಲಿ ಉದ್ಭವಿಸಿರುವ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾದ ಕೆಹೆಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.

ಬೆಂಗಳೂರು ವಸಂತನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಐಒಸಿ, ಎಚ್‌ಪಿಸಿ ಎಲ್, ಬಿಪಿಸಿಎಲ್ ಹಾಗೂ ಗೇಲ್ ಕಂಪನಿಗಳ ಅಧಿಕಾರಿಗಳು, ಹಾಗೂ ಹೋಟೆಲ್ ಸಂಘದ ಪ್ರತಿನಿಧಿಗಳು ಸೇರಿದಂತೆ ವಿವಿಧ ವಲಯದ ಪ್ರಮುಖರು ಭಾಗವಹಿಸಿದ್ದರು.

ಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ತೊಂದರೆ ಕುರಿತು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ 20% ಪೂರೈಕೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು. ಇದರ ಜೊತೆಗೆ, ಹೋಟೆಲ್ ಹಾಗೂ ಸಂಬಂಧಿತ ಉದ್ಯಮಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಕನಿಷ್ಠ 50% ಪೂರೈಕೆ ಅಗತ್ಯವಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಪ್ರತಿದಿನ ಸುಮಾರು 7000 ಕಮರ್ಷಿಯಲ್ ಸಿಲಿಂಡರ್‌ಗಳನ್ನು ಹಂಚಿಕೆ ಮಾಡಲಾಗುತ್ತಿತ್ತು, ಪ್ರಸ್ತುತ ಆಟೋ ಗ್ಯಾಸ್ ಸೇರಿದಂತೆ ವಿವಿಧ ವಲಯಗಳನ್ನು ಸೇರಿಸಿ ಒಟ್ಟು 15,000–16,000 ಸಿಲಿಂಡರ್‌ಗಳ ವಿತರಣೆ ಮಾಡಲು ನಿರ್ದರಿಸಿದ್ದು ಇದರಲ್ಲಿ ಹೋಟೆಲ್, ರೆಸ್ಟೋರೆಂಟ್, ಡಾಬಾ, ಕ್ಯಾಂಟೀನ್, ಫುಡ್ ಪ್ರೊಸೆಸಿಂಗ್ ಘಟಕಗಳು ಸೇರಿದಂತೆ ವಿವಿಧ ಸೇವಾ ವಲಯಗಳಿಗೆ10 ಸಾವಿರ ವಾಣಿಜ್ಯ ಸಿಲಿಂಡರ್ ಪೂರೈಕೆಯನ್ನು ಪ್ರತಿ ದಿನ ಮಾಡಲಾಗುವುದು.

ಇದರೊಂದಿಗೆ, ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳು, ಫಾರ್ಮಾಸಿಟಿಕಲ್, ಮೀನುಗಾರಿಕೆ, ಸಿರಿಕಲ್ಚರ್ ಹಾಗೂ ಇತರೆ ಅಗತ್ಯ ವಲಯಗಳಿಗೆ ಪ್ರತ್ಯೇಕ ಆದ್ಯತೆ ನೀಡಿ ಸುಮಾರು 500 ಸಿಲಿಂಡರ್‌ಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

ಬ್ಲಾಕ್ ಮಾರ್ಕೆಟ್ ನಿಯಂತ್ರಣ ಹಾಗೂ ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಕಮರ್ಷಿಯಲ್ ಸಿಲಿಂಡರ್ ಬಳಕೆದಾರರು GAIL ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಒಂದು ವಾರದೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಪೈಪ್‌ಲೈನ್ ಆಧಾರಿತ ಗ್ಯಾಸ್ ಪೂರೈಕೆಯನ್ನು ವಿಸ್ತರಿಸಲು ಸಹಾಯಕವಾಗಲಿದೆ ಎಂದರು.

“ದಾಖಲೆ ಆಧಾರಿತ ವಿತರಣೆ ವ್ಯವಸ್ಥೆ ರೂಪಿಸುವ ಮೂಲಕ ದುರ್ಬಳಕೆ ತಡೆಯುವುದು ಮತ್ತು ಯಥಾರ್ಥ ಬಳಕೆದಾರರಿಗೆ ಗ್ಯಾಸ್ ತಲುಪಿಸುವುದು ನಮ್ಮ ಉದ್ದೇಶ,” ಎಂದು ಸಚಿವರು ಹೇಳಿದರು.

ಮುಂದಿನ ವಾರ ಮತ್ತೊಮ್ಮೆ ಸಭೆ ನಡೆಸಿ ಪೂರೈಕೆಯ ಸ್ಥಿತಿ ಹಾಗೂ ಸುಧಾರಣೆ ಕುರಿತು ಸಮೀಕ್ಷೆ ನಡೆಸಲಾಗುವುದು ಎಂದರು.

ಒಟ್ಟಾರೆ, ತ್ವರಿತ ಕ್ರಮ ಮತ್ತು ಸಮನ್ವಯದ ಮೂಲಕ ರಾಜ್ಯದಲ್ಲಿ ಎಲ್‌ಪಿಜಿ ಸಮಸ್ಯೆ ಹಂತ ಹಂತವಾಗಿ ಪರಿಹಾರವಾಗುವ ನಿರೀಕ್ಷೆ ಮೂಡಿದೆ ಎಂದರು.
ಸಭೆಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್,ಅರುಂದಿ ಗೊಯಲ್,ದಿವ್ಯ, ಮುರಳಿ ಚಾರ್,ಸುಬ್ರತ್ ಚಟರ್ಜಿ,ರಾಜೇಶ್ ಸಿಂಗ್,ಸಂಜಯ್ ಕುಮಾರ್ ಸಿಂಗ್,ಪ್ರಣಯ ದೇವನಾಗನ್,ರವಿಕುಮಾರ್ ತಂಡಲ್,ಪ್ರಸೂನ್ , ಉಪಸ್ಥಿತರಿದ್ದರು

Comments

Leave a Comment

Prev Post ಬೆಂಗಳೂರು: ವಿಶ್ವ ಗುಬ್ಬಚ್ಚಿ ದಿನಾಚರಣೆ ವಿಶೇಷವಾಗಿ ಆಚರಣೆ
Next Post ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರ ಕೊಡುಗೆಯಿಂದ ಸಮರ್ಥ್ ಅವರು ಗೆಲ್ಲಲಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News